Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಕಚೇರಿಯಲ್ಲಿ ಬಸವ ಜಯಂತಿ ಆಚರಣೆ  

Advertisement

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಶ್ವಗುರು ಬಸವಣ್ಣನವರ ಆಶಯಗಳಿಗೆ ಕಾಂಗ್ರೆಸ್‌ನವರು ಅಪಮಾನ ಮಾಡುತ್ತಿದ್ದಾರೆಂದು ಬಿಜೆಪಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಹೆಚ್.ಮೋಹನ್‌ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಜಗಜ್ಯೋತಿ ಬಸವೇಶ್ವರರ ೮೯೩ ನೇ ಜಯಂತಿ ಅಂಗವಾಗಿ ಬಿಜೆಪಿ.ಕಚೇರಿಯಲ್ಲಿ ಸೋಮವಾರ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಕೇಂದ್ರದಲ್ಲಿ ಮಹಿಳಾ ಮೀಸಲಾತಿಗೆ ವಿರೋಧಿಸುತ್ತಿರುವ ಕಾಂಗ್ರೆಸ್ ನಾಯಕರುಗಳಿಗೆ ಬಸವಣ್ಣನವರ ಜಯಂತಿ ಆಚರಿಸುವ ನೈತಿಕತೆಯಿಲ್ಲ. ಹನ್ನೆರಡನೆ ಶತಮಾನದಲ್ಲಿಯೇ ಬಸವಣ್ಣನವರು ಅಸಮಾನತೆ ವಿರುದ್ದ ಹೋರಾಡಿದರು. ಅನುಭವ ಮಂಟಪದಲ್ಲಿ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ ಸ್ತ್ರೀಸಮಾನತೆಯನ್ನು ಅಂದಿನ ಕಾಲದಲ್ಲಿಯೇ ಎತ್ತಿಹಿಡಿದಂತ ಸಮ ಸಮಾಜದ ಹರಿಕಾರ ಎಂದು ಬಣ್ಣಿಸಿದರು.

ಅಂತರ್ಜಾತಿ ವಿವಾಹವನ್ನು ಮುನ್ನೆಲೆಗೆ ತಂದ ಬಸವಣ್ಣನವರು ಲಿಂಗ ತಾರತಮ್ಯ ವಿರೋಧಿಸಿದರು. ಅಂತರ್ಜಾತಿ ವಿವಾಹಕ್ಕೆ ಸಂಬಂಧಿಸಿದಂತೆ ೩೫೦೦ ಅರ್ಜಿಗಳು ಸಲಿಕೆಯಾಗಿದ್ದರೂ ರಾಜ್ಯ ಸರ್ಕಾರ ಇನ್ನು ಅನುದಾನ ನೀಡಿಲ್ಲ. ಜನರನ್ನು ಮರಳು ಮಾಡುತ್ತಿದೆಯೇ ವಿನಃ ಬಸವನ ತತ್ವ ಸಂದೇಶಗಳನ್ನು ಪಾಲಿಸುತ್ತಿಲ್ಲ. ಸಾರ್ವಕಾಲಿಕ ಸತ್ಯವಾಗಿರುವ ಬಸವಣ್ಣನವರ ನಡೆ-ನುಡಿ-ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬಸವ ಜಯಂತಿಗೆ ನಿಜವಾದ ಅರ್ಥ ಸಿಗುತ್ತದೆಂದು ಹೇಳಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿ ಹನ್ನೆರಡನೆ ಶತಮಾನದಲ್ಲಿ ಸಮಾಜ ಸುಧಾರಣೆಗಾಗಿ ಹೋರಾಡಿದ ಬಸವಣ್ಣನವರ ಜಯಂತಿಯನ್ನು ವಿಶ್ವದಲ್ಲಿಯೇ ಆಚರಿಸಲಾಗುತ್ತಿದೆ. ಮೂಢನಂಬಿಕೆ, ಮೌಢ್ಯ, ಕಂದಾಚಾರಗಳನ್ನು ನಿರ್ಮೂಲನೆಗೊಳಿಸಿ ಸಮ ಸಮಾಜ ನಿರ್ಮಾಣಕ್ಕಾಗಿ ಕ್ರಾಂತಿ ಮಾಡಿದ ಬಸವಣ್ಣನವರು ಅನುಭವ ಮಂಟಪದಲ್ಲಿ ಎಲ್ಲಾ ಜಾತಿಯವರಿಗೆ ಮುಕ್ತವಾಗಿ ಪ್ರವೇಶ ಕಲ್ಪಿಸಿದ್ದರು. ಅನೇಕ ವಚನಕಾರರಿದ್ದಾರೆಂದರೆ ಅದಕ್ಕೆ ಬಸವಣ್ಣನವರೆ ಕಾರಣ ಎಂದರು.

ದೇಶದ ಪ್ರಧಾನಿ ನರೇಂದ್ರಮೋದಿರವರು ಬಸವಣ್ಣನವರ ಆದರ್ಶಗಳನ್ನು ತಮ್ಮ ಭಾಷಣಗಳಲ್ಲಿ ನೆನಪಿಸಿಕೊಳ್ಳುತ್ತಾರೆ. ಮನುಕುಲಕ್ಕೆ ಅವರ ಮಾರ್ಗದರ್ಶನ ಬೇಕು. ಸಮಾನತೆಯ ಹರಿಕಾರ ಬಸವಣ್ಣನವರ ತತ್ವಗಳನ್ನು ಎಲ್ಲರೂ ಪಾಲಿಸಬೇಕಿದೆ ಎಂದು ನುಡಿದರು.

ಬಿಜೆಪಿ.ಜಿಲ್ಲಾ ಉಪಾಧ್ಯಕ್ಷ ಡಾ.ಸಿದ್ದಾರ್ಥ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್‌ ಯಾದವ್, ಜಿಲ್ಲಾ ಕಾರ್ಯದರ್ಶಿಗಳಾದ ರೇಖಾ, ಪಾಲಯ್ಯ, ವಕ್ತಾರ ನಾಗರಾಜ್‌ಬೇದ್ರೆ, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಗ್ರಾಮಾಂತರ ಮಾಜಿ ಅಧ್ಯಕ್ಷ ಕಲ್ಲೇಶಯ್ಯ, ನಗರ ಪ್ರಧಾನ ಕಾರ್ಯದರ್ಶಿ ಬಸವೇಶ್, ನಗರ ಯುವ ಮೋರ್ಚಾ ಅಧ್ಯಕ್ಷ ವಸಂತ ಆಚಾರ್, ಬಸಮ್ಮ, ಶಾಂತಮ್ಮ, ವೀಣ, ಮಂಜುಳಮ್ಮ, ಉಮಾ, ಶಂಭು, ವೀರೇಶ್, ಲಕ್ಷ್ಮಿಸಾಗರ ವಸಂತ್, ಸತೀಶ್‌ಆಚಾರ್, ಪಿ.ಮಹಂತೇಶ್ ಇನ್ನು ಅನೇಕರು ಬಸವ ಜಯಂತಿಯಲ್ಲಿ ಭಾಗವಹಿಸಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಂಗಲ್ಯ, ಜನಿವಾರ ವಿವಾದ: ಕಾಂಗ್ರೆಸ್‌ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಭಕ್ತಿಭಾವದ ಶ್ರೀ ರಾಮನವಮಿ ಆಚರಣೆ; ಆರ್. ಅಶೋಕ್ ಭಾಗಿದಾವಣಗೆರೆ ವಿಶ್ವವಿದ್ಯಾಲಯದ ಬಳಿ ಸುಸಜ್ಜಿತ ಬಸ್ ನಿಲ್ದಾಣ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ನವೋದ್ಯಮ ಮತ್ತು ಕೈಗಾರಿಕಾ ಕ್ರಾಂತಿಯ ನಾಯಕತ್ವ: ಕರ್ನಾಟಕದ ಕಹಳೆಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆ;- ಸಿ.ಟಿ. ರವಿ ಆಕ್ರೋಶ"ಗ್ಯಾರಂಟಿ ಬೇಡ, ಜೀವಕ್ಕೆ ಗ್ಯಾರಂಟಿ ಕೊಡಿ": ನಿಖಿಲ್ ಕುಮಾರಸ್ವಾಮಿ ಆಗ್ರಹಶರಾವತಿ ಯೋಜನೆಗೆ ಕೇಂದ್ರದ ಅಸಹಕಾರ: ಸಿದ್ದರಾಮಯ್ಯ ತೀವ್ರ ಅಸಮಾಧಾನಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: "ಕರ್ನಾಟಕಕ್ಕೆ ಸಿಗದ ಮೂಲಸೌಕರ್ಯ ನ್ಯಾಯ"ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ: ಸಿಎಂ ಸಿದ್ದರಾಮಯ್ಯ ಆಶಯ