ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ದೇಶದ ಪೇಟೆ ವೀರಶೈವ ಸಂಘ ಅಕ್ಕಮಹಾದೇವಿ ಮಹಿಳಾ ಸಂಘ ಬಸವೇಶ್ವರ ಯುವಕ ಸಂಘದ ಸಂಯುಕ್ತ ಆಶ್ರಯದಲ್ಲಿ ಬಸವ ಜಯಂತಿ ಪ್ರಯುಕ್ತ ಕೊಂಗಾಡಿಯಪ್ಪಮುಖ್ಯರಸ್ತೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಬೆಳಗ್ಗೆ 6 ಗಂಟೆಗೆ ಮೂಲ ಬಸವಣ್ಣದೇವರಿಗೆ ಅಭಿಷೇಕ
ಹಾಗೂ ಮಧ್ಯಾಹ್ನ 12 ಗಂಟೆಗೆ ಅಶ್ವರೂಢ ಶ್ರೀ ಬಸವೇಶ್ವರ ಉತ್ಸವಮೂರ್ತಿಗೆ ಹೂವಿನ ಅಲಂಕಾರ ಹಾಗೂ ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ಸಂಜೆ ಅಶ್ವರೂಢ ಬಸವೇಶ್ವರ ಉತ್ಸವ ಮೂರ್ತಿಯನ್ನು ಬೆಳ್ಳಿರಥದಲ್ಲಿ ನಗರದ ಮುಖ್ಯರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು ಸದಸ್ಯರು ಹಾಗೂ ದೇಶದ ಪೇಟೆ ಮುಖಂಡರು ಮಹಿಳೆಯರು ಭಕ್ತಾದಿಗಳು ಭಾಗವಹಿಸಿದ್ದರು.


