Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೀರಶೈವ ಲಿಂಗಾಯತ ಮಹಾಸಭಾ ದಿಂದ ಬಸವ ಜಯಂತಿ ಆಚರಣೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೊಕಿನ ತೂಬಗೆರೆ ಯಲ್ಲಿ ಸಾಮಾಜಿಕ ವ್ಯವಸ್ಥೆಯಲ್ಲಿನ ತಾರತಮ್ಯವನ್ನು ನಿವಾರಿಸುವ ಕಡೆಗೆ ಬಸವಣ್ಣನವರು ಮೊದಲ ಆದ್ಯತೆಯನ್ನು ನೀಡಿ, ಜಾತಿ ವ್ಯವಸ್ಥೆ ತೊಡೆದು ಹಾಕಿ ಸಮ ಸಮಾಜ ಕಟ್ಟುವ ಬಸವಣ್ಣನವರ ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿಯಾಗಿವೆ ಎಂದು ದೇವಾಲಯದ ಮಂಡಳಿಯ ಸದಸ್ಯ  ಟಿ. ಪಿ. ಸೋಮಶೇಖರ್ ಹೇಳಿದರು.

 ತೂಬಗೆರೆಯಲ್ಲಿ 200 ವರ್ಷಗಳಿರುವ ಇತಿಹಾಸ ಹೊಂದಿರುವ ಬಸವಣ್ಣ ದೇವಾಲಯದಲ್ಲಿ ಇಂದು ಬಸವಣ್ಣ ಜಯಂತಿಯನ್ನು ಅದ್ದೂರಿಯಾಗಿ ನೆರವೇರಿಸಿದರು, ಬೆಳಗಿನಿಂದಲೇ ವಿಶೇಷ ಪೂಜೆಗಳನ್ನು ಸಲ್ಲಿಸಿ , ಹೆಸರು ಬೆಳೆ, ಪಾನಕ ಮಜ್ಜಿಗೆಯನ್ನು ವಿತರಣೆ ಮಾಡಿದರು.

  ಇನ್ನು ಸಂಜೆ ಹೂವಿನ ಪಲ್ಲಕ್ಕಿ ರಥೋತ್ಸವದಲ್ಲಿ ಬಸವಣ್ಣವರ ವಿಗ್ರಹವನ್ನು ಮೆರವಣಿಗೆ ಮಾಡಲಾಗುತ್ತದೆ  ಹಾಗೂ ವೀರಗಾಸೆಡೊಳ್ಳು ಕುಣಿತ ಇನ್ನೂ ಅನೇಕ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

 ಟಿ. ಪಿ.ಸೋಮಶೇಖರ್ ಮಾತನಾಡಿ, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಗೆ ಬಸವಣ್ಣನವರ ಕೊಡುಗೆ ಅಪಾರವಾಗಿದೆ. ವಿಶ್ವ ಸಾಹಿತ್ಯಕ್ಕೆ ಕನ್ನಡ ಸಾಹಿತ್ಯದ ಕೊಡುಗೆ ವಚನ ಸಾಹಿತ್ಯವಾಗಿದೆ. ಬಸವಣ್ಣ ಅವರ ನೇತೃತ್ವದಲ್ಲಿ ವಚನಕಾರರು ತಮ್ಮ‌ವಚನಗಳಲ್ಲಿ ಸಾಮಾಜಿಕ, ಹಾಗೂ ತಾತ್ವಿಕ ಮೌಲ್ಯಗಳನ್ನು ಪ್ರತಿಪಾದಿಸಿದರು. ವಿಶ್ವ ಮಾನವತೆ ಮತ್ತು ವಿಶ್ವ ಶ್ರೇಷ್ಠ ಮೌಲ್ಯಗಳನ್ನು ಪ್ರತಿಪಾದಿಸಿದ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕರಾಗಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯ ಬದ್ರಿನಾಥ್, ದೇವಾಲಯದ ಅರ್ಚಕ  ಸದಾನಂದ ಹಾಗು ಊರಿನ ಮುಖಂಡರುಗಳು ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ