Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುರೋಹಿತಶಾಹಿ ಕಲ್ಪಿಸಿದ ಸ್ವರ್ಗ-ನರಕಾದಿ ಶೋಷಕ ತಂತ್ರ ಧಿಕ್ಕರಿಸಿದ ಬಸವಣ್ಣ-ಸಿಎಂ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇವಸ್ಥಾನಗಳನ್ನು ನಿರಾಕರಿಸಿ
, ದೇವರ  ಕಲ್ಪನೆಯನ್ನು ಮನುಷ್ಯನ ಶರೀರಕ್ಕೆ ಸ್ಥಳಾಂತರಗೊಳಿಸಿ, ದೇಹವನ್ನೇ ದೇವಾಲಯವನ್ನಾಗಿ ಮಾಡಿದವರು ಬಸವಣ್ಣನವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪುರೋಹಿತಶಾಹಿ ಕಲ್ಪಿಸಿದ ಸ್ವರ್ಗ - ನರಕಾದಿ ಶೋಷಕ ತಂತ್ರಗಳನ್ನು ಧಿಕ್ಕರಿಸಿ ಇಹದ ಬದುಕಿನ ಮೇಲಿನ ಪ್ರೀತಿಯನ್ನು ಮೂಢಿಸಿದ, ಅನೇಕ ಅವೈಚಾರಿಕವಾದ ಆಚರಣೆಗಳನ್ನೂ ಮೂಢನಂಬಿಕೆಗಳನ್ನು ತಿರಸ್ಕರಿಸಿದ, ವೃತ್ತಿಯ ತಾರತಮ್ಯಗಳ ಮೇಲಿನಿಂದ ಮನುಷ್ಯನ ಸಾಮಾಜಿಕ ಅಂತಸ್ತನ್ನು ಪರಿಗಣಿಸದೆ ಕಾಯಕವೆಲ್ಲವೂ ಪೂಜ್ಯವೆಂದು ಸಾರಿದವರು ಬಸವಣ್ಣ ಎಂದು ಸಿಎಂ ಹೇಳಿದರು.

ನಾವಿಂದು ಸಂಘರ್ಷಮಯವಾದ ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಯ ಬಂಧಿಯಾಗಿದ್ದೇವೆ. ನಾ‍ಲ್ಕು ದಿಕ್ಕುಗಳಿಂದಲೂ ಹಿಂಸೆ, ಸೇಡು, ಪ್ರತಿಕಾರಗಳ ಘೋಷಣೆಗಳು ಮೊಳಗುತ್ತಿರುವ ಈ ಕಾಲದಲ್ಲಿ ಬಸವಣ್ಣನವರು ನೀಡಿದ್ದ ‘‘ದಯೆಯೇ ಧರ್ಮದ ಮೂಲವಯ್ಯಾ’’ ಎಂಬ ಶಾಂತಿ-ಸೌಹಾರ್ದತೆಯ ಮಂತ್ರವನ್ನು ನಾವೆಲ್ಲರೂ ಮನನ ಮಾಡಿಕೊಳ್ಳಬೇಕಾಗಿದೆ ಎಂದು ಸಿದ್ದರಾಮಯ್ಯ ತಾಕೀತು ಮಾಡಿದರು.

ಅಂತಹ ಅರಿವಿನ ಬೆಳಕನ್ನು ನಮ್ಮೆಲ್ಲರಲ್ಲಿಯೂ ಬಸವಣ್ಣ ಮೂಡಿಸಲಿ ಎಂದು ಹಾರೈಸುತ್ತೇನೆ. ನಾಡಬಂಧುಗಳಿಗೆ ಬಸವ ಜಯಂತಿಯ ಶುಭಾಶಯಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ