Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವಣ್ಣ  ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆ ಮಾಡಿದರು: ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಸವಣ್ಣ ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಸವ ಸಮಿತಿ ಇಂದು ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು  ತಿಳಿಸಿದ ಮುಖ್ಯಮಂತ್ರಿಗಳು ಬಸವ ಜಯಂತಿಯ  ಶುಭಾಶಯಗಳನ್ನು ತಿಳಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​, ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಶುಭಾಶಯಗಳನ್ನ ಟ್ವೀಟ್ ಮಾಡಿ ತಿಳಿಸಿ, ಕಲ್ಯಾಣವೆಂಬ ಪ್ರಣತೆಯಲ್ಲಿ ಭಕ್ತಿರಸವೆಂಬ ತೈಲವನೆರೆದು, ಆಚಾರವೆಂಬ ಬತ್ತಿಯಲ್ಲಿ ಬಸವಣ್ಣನೆಂಬ ಜ್ಯೋತಿಯ ಮುಟ್ಟಿಸಲು, ತೊಳಗಿ ಬೆಳಗುತ್ತಿದ್ದಿತ್ತಯ್ಯಾ ಶಿವನ ಪ್ರಕಾಶʼ ಎಂದು ಜಗಜ್ಯೋತಿ ಬಸವಣ್ಣನವರ ಕುರಿತು ಅಲ್ಲಮಪ್ರಭುಗಳು ತಮ್ಮ ವಚನದಲ್ಲಿ ಹೇಳಿದ್ದಾರೆ.

 ಇದು ಬಸವಣ್ಣನೆಂಬ ಮಹಾನ್‌ದಾರ್ಶನಿಕರ ವ್ಯಕ್ತಿತ್ವವನ್ನು ಅನಾವರಣಗೊಳಿಸುವ ವಚನವಾಗಿದೆ ಎಂದು ಡಿಸಿಎಂ ತಿಳಿಸಿದರು. ಬಸವಣ್ಣನವರಂಥ ಮತ್ತೊಬ್ಬ ಸಾಮಾಜಿಕ ತಜ್ಞರಿಲ್ಲ. ನಮ್ಮ ಸರ್ಕಾರ ಸದಾ ಬಸವಣ್ಣನವರ ಸಾಮಾಜಿಕ ನ್ಯಾಯ, ಸರ್ವೋದಯ, ಸಮಾನತೆ, ದಾಸೋಹ, ಕಾಯಕ ತತ್ವಗಳ ತಳಹದಿಯ ಮೇಲೆಯೇ ನಡೆಯುತ್ತಿದೆ ಹಾಗೂ ಅವರನ್ನು ನಮ್ಮ ರಾಜ್ಯದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ್ದೇವೆ. ಅವರ ಆದರ್ಶಗಳನ್ನು ಪಾಲಿಸೋಣ, ಸಮಸಮಾಜವನ್ನು ನಿರ್ಮಿಸೋಣ ಎಂದು ಶಿವಕುಮಾರ್ ಕರೆ ನೀಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ