Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯಗೆ ಬಸವರಾಜ ರಾಯರೆಡ್ಡಿ ಅಭಿನಂದನಾ ಪತ್ರ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿಯಾಗಿ ನಾಡಿಗೆ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ ಅವರ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರೆಡ್ಡಿ ಪತ್ರ ಬರೆದು
, ಕರ್ನಾಟಕದ ಸಾಮಾಜಿಕ ನ್ಯಾಯ ಹಾಗೂ ಜನಪರ ಸರ್ವಾಂಗೀಣ ಅಭಿವೃದ್ಧಿ ಪರಂಪರೆಯನ್ನು ಸಮರ್ಥವಾಗಿ ಮುಂದುವರೆಸುತ್ತಿರುವ ದೂರದೃಷ್ಟಿಯ ನಾಯಕತ್ವಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಬಸವರಾಜ ರಾಯರಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ ಬರೆದ ಪತ್ರದ ಸಾರಾಂಶ ಇಂತಿದೆ.  ಕರ್ನಾಟಕದ ರಾಜಕೀಯ ಇತಿಹಾಸವು ಜನಪರ ಆಡಳಿತ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಾತ್ಮಕ ಸಮಾನತೆಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ನಾಯಕರ ದಿಟ್ಟ ಹೋರಾಟಗಳಿಂದ ರೂಪುಗೊಂಡ ಸುವರ್ಣ ಪರಂಪರೆ ಹೊಂದಿದೆ. ಶೋಷಿತರು, ಹಿಂದುಳಿದವರು ಮತ್ತು ಸಮಾಜದ ಅಂಚಿನಲ್ಲಿರುವ ಸಮುದಾಯಗಳ ಪರವಾಗಿ ಧೈರ್ಯವಾಗಿ ನಿಂತ ನಾಯಕರಿಂದಲೇ ಈ ನಾಡಿನ ಪ್ರಗತಿಪರ ರಾಜಕೀಯ ಸಂಸ್ಕøತಿ ಬೆಳೆದಿದೆ.

ಆ ಪರಂಪರೆಯಲ್ಲಿ ಅಚ್ಚಳಿಯದ ಗುರುತು ಮೂಡಿಸಿದ ಮಹಾನ್ ನಾಯಕರಲ್ಲಿ ದಿವಂಗತ ಶ್ರೀ ದೇವರಾಜ ಅರಸು ಅವರು ಅಗ್ರಗಣ್ಯರು. ಅವರು 20-03-1972 ರಿಂದ 31-12-1977 ರವರೆಗೆ ಹಾಗೂ 28-02-1978 ರಿಂದ 07-01-1980 ರವರೆಗೆ ಒಟ್ಟಾರೆ 2,792 ದಿನಗಳ ಕಾಲ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ, ಭೂ ಸುಧಾರಣೆ, ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಉನ್ನತಿ ಮತ್ತು ಶೋಷಿತರ ಸಬಲೀಕರಣದ ಮೂಲಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಅಮರ ಅಧ್ಯಾಯವೊಂದನ್ನು ರಚಿಸಿದರು.

ಅದಲ್ಲದೆ ಕರ್ನಾಟಕ ರಾಜ್ಯವನ್ನು ಪ್ರಗತಿಪರ ಚಿಂತನೆಯತ್ತ ತರುವುದರಲ್ಲಿ ಹಿಂದಿನ ಮುಖ್ಯಮಂತ್ರಿಗಳಾದ ಕೆಂಗಲ್ ಹನುಮಂತಯ್ಯ , ನಿಜಲಿಂಗಪ್ಪ, ರಾಮಕೃಷ್ಣ ಹೆಗಡೆ ಇವರುಗಳ ವಿಶಾಲ ದೃಷ್ಟಿಕೋನದ ವಿಚಾರಗಳು ಹಾಗೂ ಪ್ರಾಮಾಣಿಕ ಚಿಂತನೆಗಳು ನಮ್ಮ ಮುಂದೆ ಇಂದಿಗೂ ಜೀವಂತ ಇರುತ್ತವೆ.

ಅದೇ ಸಾಮಾಜಿಕ ನ್ಯಾಯ ತಾತ್ವಿಕ ಮತ್ತು ರಾಜಕೀಯ ಪರಂಪರೆ ಮತ್ತು ಸವಾರ್ಂಗೀಣ ಅಭಿವೃದ್ಧಿ ಚಿಂತನೆಗಳನ್ನು ಸಮಕಾಲೀನ ಅಗತ್ಯಗಳಿಗೆ ತಕ್ಕಂತೆ ಮುಂದುವರೆಸಿಕೊಂಡು, ಕರ್ನಾಟಕದ ಇತಿಹಾಸಕ್ಕೆ ಹೊಸ ಮೈಲಿಗಲ್ಲು ಸ್ಥಾಪಿಸಿ ನೀವು 13-05-2013 ರಿಂದ 15-05-2018 ರವರೆಗೆ ಹಾಗೂ 20-05-2023 ರಿಂದ 06-01-2026 ರವರೆಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು, ಸುದೀರ್ಘ ಮತ್ತು ಸಾರ್ಥಕ ಆಡಳಿತದ ಮೂಲಕ ಚಾರಿತ್ರಿಕ ದಾಖಲೆ ನಿರ್ಮಿಸುತ್ತಿರುವುದು ರಾಜ್ಯದ ಜನತೆಗೆ ಅಪಾರ ಹೆಮ್ಮೆಯ ವಿಷಯವಾಗಿದೆ. ಹಾಗೂ ಮುಂದಿನ ಎರಡುವರೆ ವರ್ಷಗಳ ಕಾಲ ಅಂದರೆ 28 ಮೇ 2028 ರವರೆಗೆ ಈ ರಾಜ್ಯದ ಮುಖ್ಯಮಂತ್ರಿಗಳಾಗಿ ಸವಾರ್ಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತಿರಿ ಎಂದು ನನ್ನ ನಂಬಿಕೆಯಾಗಿದೆ.

ನಿಮ್ಮ ಪ್ರಾಮಾಣಿಕ ಹಾಗೂ ಪಾರದರ್ಶಕ ಆಡಳಿತವು ಸ್ಪಷ್ಟವಾಗಿ ಜನಪರ, ಸಂವಿಧಾನಬದ್ಧ ಮತ್ತು ಸಾಮಾಜಿಕ ನ್ಯಾಯ ಕೇಂದ್ರಿತವಾಗಿದೆ. ರಾಜ್ಯದ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಆರ್ಥಿಕವಾಗಿ ಹಿಂದುಳಿದ ಜನಾಂಗಕ್ಕೆ ಯಾವುದೇ ಧರ್ಮ ಜಾತಿ ಭೇದವಿಲ್ಲದೆ

      ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ, ಇಂದಿರಾ ಕ್ಯಾಂಟೀನ್, ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ ಹಾಗೂ ರೈತ ಸಮುದಾಯಕ್ಕೆ ಮಹತ್ವಾಕಾಂಕ್ಷಿ ಯೋಜನೆಗಳ ಮೂಲಕ ಬಡವರು, ಮಹಿಳೆಯರು, ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ಆರ್ಥಿಕ ಭದ್ರತೆ ಮತ್ತು ಸಾಮಾಜಿಕ ಗೌರವವನ್ನು ಒದಗಿಸುವಲ್ಲಿ ನಿಮ್ಮ ಪ್ರಾಮಾಣಿಕ ವಿಚಾರಗಳು ಮಹತ್ವದ ಪಾತ್ರ ವಹಿಸಿದೆ.

ಈ ಯೋಜನೆಗಳು ಕರ್ನಾಟಕವನ್ನು ನಿಜಾರ್ಥದಲ್ಲಿ ಕಲ್ಯಾಣರಾಜ್ಯದ ಮಾದರಿಯಾಗಿ ರೂಪಿಸುವ ದಿಟ್ಟ ರಾಜಕೀಯ ಸಂಕಲ್ಪದ ಪ್ರತಿಬಿಂಬಗಳಾಗಿವೆ. ನಿಮ್ಮ ಆಡಳಿತದಲ್ಲಿ ಪಾರದರ್ಶಕತೆ, ಹಣಕಾಸು ಶಿಸ್ತು, ಸಂವಿಧಾನದ ಮೌಲ್ಯಗಳಿಗೆ ಅಚಲ ನಿಷ್ಠ ಹಾಗೂ ಜಾತಿಧರ್ಮಭಾಷೆಗಳ ಅತೀತವಾಗಿ ಎಲ್ಲರನ್ನು ಒಟ್ಟಿಗೆ ಕೊಂಡೊಯ್ಯುವ ಸಮನ್ವಯದ ರಾಜಕಾರಣವು ನಿಮ್ಮ ನಾಯಕತ್ವದ ವಿಶಿಷ್ಟ ಗುರುತುಗಳಾಗಿವೆ.

ನಿಮ್ಮ ಸಮಾಜಮುಖಿ ಮತ್ತು ಪ್ರಗತಿಪರ ದೃಷ್ಟಿಕೋನಕ್ಕೆ ಸಮಕಾಲೀನ ರಾಜಕೀಯ ರೂಪ ನೀಡಿದ ನಾಯಕರೆಂದು ನಿಮ್ಮನ್ನು ಗೌರವದಿಂದ ಮುಂದಿನ ಇತಿಹಾಸ ಪುಟಗಳಲ್ಲಿ ಸ್ಮರಿಸುವುದು ನಿಶ್ಚಿತ. ಈ ಹಿನ್ನೆಲೆಯಲ್ಲಿ, ಕರ್ನಾಟಕದ ಕೋಟ್ಯಂತರ ಜನತೆಯ ಪರವಾಗಿ, ನಿಮ್ಮ ದೂರದೃಷ್ಟಿಯ ನಾಯಕತ್ವಕ್ಕೆ, ಜನಪರ ನೀತಿಗಳಿಗೆ ಹಾಗೂ ರಾಜ್ಯವನ್ನು ಸಮಾನತೆ, ಸೌಹಾರ್ದ ಮತ್ತು ಸಾಮಾಜಿಕ ನ್ಯಾಯದ ದಾರಿಯಲ್ಲಿ ದಿಟ್ಟವಾಗಿ ಮುನ್ನಡೆಸುತ್ತಿರುವ ನಿಮ್ಮ ಅವಿರತ ಸೇವೆಗೆ ಗೌರವಪೂರ್ವಕ ಹಾಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ನಿಮ್ಮ ಆಡಳಿತವು ಮುಂದಿನ ಪೀಳಿಗೆಗಳಿಗೆ ದಾರಿದೀಪವಾಗಲಿ. ಕರ್ನಾಟಕವು ಸವಾರ್ಂಗೀಣ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಸೌಹಾರ್ದದ ಮಾದರಿ ರಾಜ್ಯವಾಗಿ ರಾಷ್ಟ್ರಮಟ್ಟದಲ್ಲಿ ತನ್ನ ಸ್ಥಾನವನ್ನು ಇನ್ನಷ್ಟು ದೃಢಪಡಿಸಲಿ ಎಂಬುದು ನನ್ನ ಹಾರೈಕೆ.
ಲೇಖನ-ಬಸವರಾಜ ರಾಯರಡ್ಡಿ, ಮುಖ್ಯಮಂತ್ರಿಗಳ ಅರ್ಥಿಕ ಸಲಹೆಗಾರರು ಹಾಗೂ ಶಾಸಕರು ಯಲಬುರ್ಗಾ.


 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ