Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಜೂನ್ ಅಂತ್ಯದೊಳಗೆ ಬಿಬಿಎಂಪಿ ಚುನಾವಣೆ ನಡೆಸಿ-ಸುಪ್ರೀಂ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಗ್ರೇಟರ್​ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಯನ್ನು 2026ರ ಜೂನ್​ ಅಂತ್ಯದೊಳಗೆ ಮುಗಿಸಬೇಕು ಎಂದು ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್​ ಸೋಮವಾರ ನಿರ್ದೇಶನ ನೀಡಿ ಆದೇಶಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ ಐದು ನಗರ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಯನ್ನು ಜೂನ್​ 30 ರೊಳಗೆ ಪೂರ್ಣಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಗಡುವು ವಿಧಿಸಿ ಆದೇಶಿಸಿದೆ.

ರಾಜ್ಯ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಜಿಬಿಎ) 2026ರ ಫೆಬ್ರವರಿಯಲ್ಲಿ ಚುನಾವಣೆ ನಡೆಸುವುದಾಗಿ ಈ ಹಿಂದೆ ತಿಳಿಸಿತ್ತು. ಆದರೆ, ವಾರ್ಡ್​ಗಳ ವಿಂಗಡಣೆ, ಮೀಸಲಾತಿ, ಹೊಸ ಪ್ರಾಧಿಕಾರ ರಚನೆ ಹಿನ್ನೆಲೆಯಲ್ಲಿ ಚುನಾವಣಾ ದಿನಾಂಕವನ್ನು ಪ್ರಕಟಿಸಿರಲಿಲ್ಲ.

ಹಿರಿಯ ವಕೀಲ ಎ.ಎಂ. ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ರಾಜ್ಯ ಸರ್ಕಾರದ ಪರವಾಗಿ ವಾದಿಸಿ, ವಾರ್ಡ್​ಗಳ ಮೀಸಲಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಫೆಬ್ರವರಿ 28ರೊಳಗೆ ವಾರ್ಡ್​ವಾರು ಮೀಸಲಾತಿ ಪಟ್ಟಿ ಅಧಿಕೃತವಾಗಿ ಹೊರಬೀಳಲಿದೆ. ನಂತರ ಚುನಾವಣೆ ನಡೆಸುವ ಜವಾಬ್ದಾರಿಯನ್ನು ಚುನಾವಣಾ ಆಯೋಗ ವಹಿಸಿಕೊಳ್ಳಲಿದೆ ಎಂದು ಪೀಠಕ್ಕೆ ತಿಳಿಸಿದರು.


ಇದೇ ವೇಳೆ, ಚುನಾವಣಾ ಆಯೋಗವು ತನ್ನ ವಾದ ಮಂಡಿಸಿದೆ. ಮಾರ್ಚ್​ 16ರೊಳಗೆ ಮತದಾರರ ಪಟ್ಟಿ ಪರಿಶೀಲನೆ ನಡೆಯಲಿದೆ. ಬೇಸಿಗೆ ರಜೆ ಹಿನ್ನೆಲೆ ಮೇ ಕೊನೆಯ ವಾರದವರೆಗೂ ಸಮಯಾವಾಕಾಶ ಬೇಕು. ಮತದಾರರ ಪಟ್ಟಿ, ಚುನಾವಣಾ ಸಿದ್ಧತೆ ಪೂರ್ಣಗೊಳ್ಳಲು ಜೂನ್​ವರೆಗೆ ಸಮಯ ಬೇಕಾಗಬಹುದು ಎಂದು ಸುಪ್ರೀಂಕೋರ್ಟ್​​ಗೆ ತಿಳಿಸಿತು.


ಈ ಎಲ್ಲಾ ವಾದ ಆಲಿಸಿದ ಕೋರ್ಟ್​, ರಾಜ್ಯ ಸರ್ಕಾರ ಫೆಬ್ರವರಿ 20 ರೊಳಗೆ ವಾರ್ಡ್‌ವಾರು ಮೀಸಲಾತಿ ಪಟ್ಟಿ ಪ್ರಕಟಿಸಬೇಕು. ಜಿಬಿಎ ಚುನಾವಣೆಯನ್ನು ಜೂನ್ 30 ರೊಳಗೆ ಮುಗಿಸಬೇಕು. ಇದಕ್ಕಾಗಿ ಮತ್ತೆ ಸಮಯಾವಕಾಶ ಕೋರಿ ಬರಬೇಡಿ ಎಂದು ಸ್ಪಷ್ಟಪಡಿಸಿ ಆದೇಶಿಸಿತು.

ಗ್ರೇಟರ್​ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಥವಾ ಹಿಂದಿನ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ 198 ವಾರ್ಡ್‌ಗಳನ್ನು ಹೊಂದಿದ್ದು ಚುನಾವಣೆ ಕೊನೆಯ ಬಾರಿಗೆ ಆಗಸ್ಟ್ 2015 ರಲ್ಲಿ ನಡೆದಿತ್ತು. ಇದರ ಅವಧಿ ಸೆಪ್ಟಂಬರ್ 2020ರಲ್ಲಿ ಕೊನೆಗೊಂಡಿತ್ತು. ಅಂದಿನಿಂದ ಚುನಾವಣೆಗಳನ್ನು ಪದೇ ಪದೇ ಮುಂದೂಡುತ್ತಾ ಬರುತ್ತಿರುವುದನ್ನ ಗಮನಿಸಬಹುದಾಗಿದೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು