Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಂಪಿ ನಗರದಲ್ಲಿ ಬೆನಕ ಬಿಸ್ಪೋಕ್ ಉಡುಪು ಮಳಿಗೆ ಆರಂಭ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮದುವೆ ಸೇರಿದಂತೆ ಶುಭ ಸಮಾರಂಭಗಳಿಗೆ ಗ್ರಾಹಕರ ಬೇಡಿಕೆಗೆ ತಕ್ಕಂತೆ ಅತ್ಯುತ್ಕೃಷ್ಟ ಉಡುಪುಗಳನ್ನು ಸಿದ್ಧಪಡಿಸಿಕೊಡುವ "ಬೆನಕ ಬಿಸ್ಪೋಕ್- ಕಸ್ಟಮ್ ಮೇಡ್" ಮಳಿಗೆ ವಿಜಯನಗರ ಜಿಲ್ಲೆಯ ಹಂಪಿ ನಗರದಲ್ಲಿ ಆರಂಭಗೊಂಡಿದೆ.


ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ನೂತನ ಮಳಿಗೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಸ್ವಾಮೀಜಿಯವರು, "ವಸ್ತ್ರೋದ್ಯಮವು ಇಂದು ಅಗಾಧವಾಗಿ ಬೆಳೆದಿದ್ದು, ಅದರ ಜೊತೆ ಜೊತೆಗೆ ಸ್ಪರ್ಧೆಯೂ ತೀವ್ರಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ  ಗುಣಮಟ್ಟದ ಮತ್ತು ವಿಶೇಷವಾಗಿ ವಿನ್ಯಾಸಗೊಳಿಸಿದ ಉಡುಪುಗಳನ್ನು ಗ್ರಾಹಕರಿಗೆ ಒದಗಿಸಲು ಬೆನಕ ಬಿಸ್ಪೋಕ್ ಮಳಿಗೆ ಸ್ಥಾಪಿಸಿರುವುದು ಸ್ವಾಗತಾರ್ಹ", ಎಂದರು.

"ಈ ಮಳಿಗೆಯಲ್ಲಿ ಶುಭ ಸಮಾರಂಭಗಳಿಗೆ, ಅದರಲ್ಲೂ ಮುಖ್ಯವಾಗಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಉಡುಪುಗಳನ್ನು ಸಿದ್ಧಪಡಿಸಿ ನೀಡಲಾಗುತ್ತಿದೆ. ನಮ್ಮ ಪರಂಪರೆಯನ್ನು ಉಳಿಸುವ ಕೆಲಸವನ್ನು ಇಂತಹ ಮಳಿಗೆಗಳು ಮಾಡುತ್ತಿವೆ. ಹೀಗಾಗಿ ಈ ರೀತಿಯ ಗ್ರಾಹಕರ ಸದಭಿರುಚಿಗೆ ತಕ್ಕಂತೆ ಕಾರ್ಯ ನಿರ್ವಹಿಸುವ ಬೆನಕ ಬಿಸ್ಪೋಕ್ ನ ಉದ್ಯಮ ಬೆಳೆಯಬೇಕು", ಎಂದು ಶುಭ ಹಾರೈಸಿದರು.

 ಬೆನಕ ಬಿಸ್ಪೋಕ್ ಕಸ್ಟಮ್ ಮೇಡ್ ಮಳಿಗೆಯ ಮಾಲೀಕ ಬೆನಕ ರಾಜು ಜಿ. ಅವರು ಮಾತನಾಡಿ, "ಗ್ರಾಹಕರನ್ನು ದೇವರೆಂದು ಪರಿಗಣಿಸಿ ಅವರ ಸೇವೆಗೆ ನಾವು ಸದಾ ಸಿದ್ಧರಿದ್ದೇವೆ. ಶುಭ ಸಮಾರಂಭಗಳಿಗೆ ಗ್ರಾಹಕರ ದೇಶ ಭಾಷೆಯನ್ನು ಆಧರಿಸಿ ಇಲ್ಲಿ ಉಡುಪುಗಳನ್ನು ಸಿದ್ಧಪಡಿಸಿಕೊಡಲಾಗುತ್ತದೆ. ಕಾರ್ಯಕ್ರಮಗಳಿಗೆ ಅನುಗುಣವಾಗಿ ಉಡುಪುಗಳನ್ನು ತಯಾರಿಸಿಕೊಡುತ್ತೇವೆ. ನಾವು ಈಗಾಗಲೇ ಅನುಬಂಧ ಅವಾರ್ಡ್ ಸೇರಿ ವಿವಿಧ ಕಾರ್ಯಕ್ರಮಗಳಿಗೆ ಕಾಸ್ಟ್ಯೂಮ್ ಗಳನ್ನು ಸಿದ್ಧಪಡಿಸಿಕೊಟ್ಟಿದ್ದೇವೆ" ಎಂದು ಹೇಳಿದರು.

ಶಾಸಕರಾದ ಎಂ.ಕೃಷ್ಣಪ್ಪ, ಪ್ರಿಯಾ ಕೃಷ್ಣಚಿತ್ರ ನಿರ್ಮಾಪಕ ಬಿ.ಕೆ.ಶ್ರೀನಿವಾಸ್ (ಬೆಂಕೋಶ್ರೀ), ಮಜಾ ಭಾರತ ಖ್ಯಾತಿಯ ಸುಶ್ಮಿತಾ ಜಗ್ಗಪ್ಪ, ಅಂಬೇಡ್ಕರ್ ಕ್ರಾಂತಿಸೇನೆಯ ಅಧ್ಯಕ್ಷ ಕ್ರಾಂತಿರಾಜು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ