ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬೆಂಗಳೂರು ವಿಶ್ವವಿದ್ಯಾಲಯದ ದೃಶ್ಯ ಕಲಾ ವಿಭಾಗದ ಪ್ರಥಮ ವರ್ಷದ ಎಂವಿಎ ವಿದ್ಯಾರ್ಥಿನಿ ಮಾನಸ (23) ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ.
ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಾನಸ ಅವರು ಜುಲೈ 30ರಂದು ಕ್ಯಾಂಪಸ್‌ನ ಗಾಂಧಿ ಮಾರ್ಗದ ಕ್ಯಾಂಟೀನ್ ಬಳಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಆಟೋರಿಕ್ಷಾ ಡಿಕ್ಕಿ ಹೊಡೆದಿತ್ತು. ನಾಗರಭಾವಿಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದಿದ್ದು, ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ಸರ್ಕಾರ ನೆರವಿನ ಹಸ್ತ ಚಾಚಿದೆ.
ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ನಿಶ್ಚಿತ: ಡಿ.ಕೆ. ಶಿವಕುಮಾರ್
ವಿಧಾನಸೌಧದ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಇದ್ದೇ ಇರುತ್ತದೆ. ನಾವು ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತೇವೆ" ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ ಸಂಪುಟದಲ್ಲಿ ಮಹಿಳೆಯರಿಲ್ಲ ಎಂಬ ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, "ಮಹಿಳಾ ಮೀಸಲಾತಿ ಮಸೂದೆಯನ್ನು ರೂಪಿಸಿ ಲೋಕಸಭೆಯಲ್ಲಿ ಅಂಗೀಕರಿಸಿದ್ದು ಕಾಂಗ್ರೆಸ್. ಲೋಕಸಭೆ ಚುನಾವಣೆಯಲ್ಲೂ ಕರ್ನಾಟಕದಲ್ಲಿ ಮಹಿಳೆಯರಿಗೆ ಹೆಚ್ಚಿನ ಟಿಕೆಟ್‌ನೀಡಿದ್ದೆವು. ಶೀಘ್ರದಲ್ಲೇ ಸಂಪುಟ ವಿಸ್ತರಣೆ ವಿಚಾರ ಬಗೆಹರಿಯಲಿದ್ದು, ರಿಜಿಜು ಅವರು ಕಾಂಗ್ರೆಸ್ ಬಗ್ಗೆ ಚಿಂತಿಸುವ ಅಗತ್ಯವಿಲ್ಲ, ತಮ್ಮ ಪಕ್ಷ ಮತ್ತು ಸರ್ಕಾರದ ಬಗ್ಗೆ ಗಮನಹರಿಸಲಿ" ಎಂದರು.
ದೆಹಲಿ ಭೇಟಿ ಕುರಿತು ಕೇಳಿದ ಪ್ರಶ್ನೆಗೆ, "ಮಾಹಿತಿ ನೀಡಿಯೇ ದೆಹಲಿಗೆ ತೆರಳುತ್ತೇನೆ" ಎಂದು ತಿಳಿಸಿದರು. ಕರ್ನಾಟಕದ ಧೀಮಂತ ನಾಯಕ ಎಸ್. ನಿಜಲಿಂಗಪ್ಪ:
ಮಾಜಿ ಸಿಎಂ ನಿಜಲಿಂಗಪ್ಪ ಅವರ ಸೇವೆಯನ್ನು ಸ್ಮರಿಸಿದ ಸಿಎಂ, "ನಿಜಲಿಂಗಪ್ಪನವರು ಕರ್ನಾಟಕಕ್ಕೆ ದೊಡ್ಡ ಗೌರವ ತಂದುಕೊಟ್ಟ ಧೀಮಂತ ನಾಯಕ. ಅವರೊಂದಿಗೆ ಚರ್ಚಿಸಿದ ಅನೇಕ ನೆನಪುಗಳಿವೆ. ನಾನು ಹಾಗೂ ಎಸ್.ಎಂ. ಕೃಷ್ಣ ಅವರು ಹಲವು ಬಾರಿ ಅವರನ್ನು ಭೇಟಿಯಾಗಿದ್ದೆವು. ಸೋನಿಯಾ ಗಾಂಧಿ ಅವರು ಸಹ ಅವರನ್ನು ಭೇಟಿಯಾಗಲು ಚಿತ್ರದುರ್ಗಕ್ಕೆ ಆಗಮಿಸಿದ್ದರು" ಎಂದು ಹಳೆಯ ದಿನಗಳನ್ನು ಮೆಲಕುಹಾಕಿದರು.



