Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಇಂದು ಭಗವದ್ಗೀತಾ ಅಭಿಯಾನ 

ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ, ಶ್ರೀಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ,ಶಿರಸಿ, ಉತ್ತರ ಕನ್ನಡ, ಕರ್ನಾಟಕ ಹಾಗೂ ಶ್ರೀ ಚಾಮರಾಜನಗರ ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿ ವತಿಯಿಂದ ಶ್ರೀ ಭಗವದ್ಗೀತಾ ಅಭಿಯಾನ  ಪ್ರಯುಕ್ತ 11ನೇ ಅಧ್ಯಾಯದ ಸಮರ್ಪಣಾ ಸಮಾರಂಭ ಕಾರ್ಯಕ್ರಮವನ್ನು 23ರ ಶುಕ್ರವಾರ ಬೆಳಗ್ಗೆ 10.30 ಕ್ಕೆ ಸೇವಾ ಭಾರತಿ ಶಾಲೆ ಹಾಗೂ  ಮಧ್ಯಾಹ್ನ 2.30 ಯುನಿವರ್ಸ್ ಇಂಗ್ಲಿಷ್ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭದ ಉದ್ಘಾಟನೆಯನ್ನು ಶ್ರೀ ಭಗವದ್ಗೀತಾ ಅಭಿಯಾನ ಕರ್ನಾಟಕ ಕಾರ್ಯಾಧ್ಯಕ್ಷರಾದ ಹಿರಿಯ ವಕೀಲರಾದ ಶಿವಮೊಗ್ಗದ ಅಶೋಕ್ ಭಟ್ ರವರು ನೆರವೇರಿಸುವರು.


ಶ್ರೀ ಭಗವದ್ಗೀತಾ ಮಹತ್ವ ಕುರಿತು ಮೈಸೂರಿನ ಮಹರ್ಷಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ನಾರಾಯಣ ದೇಸಾಯಿ ಮಾತನಾಡಲಿದ್ದಾರೆ.

ಶ್ರೀ ಭಗವದ್ಗೀತಾ ಅಭಿಯಾನ ಸಮಿತಿಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸೇವಾ ಭಾರತಿ ಶಿಕ್ಷಣ ಸಂಸ್ಥೆಯ ವಾಸುದೇವರಾವ್ ,ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿಯ ಗೌರವಾಧ್ಯಕ್ಷ ಜಿಎಂ ಹೆಗಡೆ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಭಗವದ್ಗೀತಾ ಅಭಿಯಾನ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಸುರೇಶ್ ಎನ್ ಋಗ್ವೇದಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭೆಯ ಉಪಾಧ್ಯಕ್ಷರು ಹಾಗೂ ಭಗವದ್ಗೀತೆ ಅಭಿಯಾನ ಸಮಿತಿಯ ಖಜಾಂಚಿಗಳಾದ ಎಸ್ ಬಾಲಸುಬ್ರಹ್ಮಣ್ಯ ಹಾಗೂ ಯೂನಿವರ್ಸ್ ಇಂಗ್ಲಿಷ್ ಶಾಲೆ ಪ್ರಾಚಾರ್ಯ  ವಿಜಯಲಕ್ಷ್ಮಿರವರು ಭಾಗವಹಿಸಲಿದ್ದಾರೆ.

ನೂರಾರು ನಾಗರಿಕರು ಹಾಗೂ ವಿದ್ಯಾರ್ಥಿ ಸಮೂಹದಿಂದ ಭಗವದ್ಗೀತಾ ಸಮರ್ಪಣಾ ಸಮಾರಂಭ ನಡೆಯಲಿದೆ .ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟ ಹಾಗೂ ಜಿಲ್ಲಾ, ತಾಲೂಕು ಮಟ್ಟದಲ್ಲಿ ಶ್ರೀ ಭಗವದ್ಗೀತೆ ಪಾರಾಯಣದ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ ವಿತರಿಸಿ ಗೌರವಿಸಲಾಗುವುದು ಎಂದು ಸಮಿತಿಯ ಸಂಚಾಲಕರಾದ ಎಸ್ ಸುರೇಶ್ ಹಾಗೂ ಕೇಶವಮೂರ್ತಿ ತಿಳಿಸಿದ್ದಾರೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು