Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೂರದೃಷ್ಟಿಯ ಲಕ್ಷಾಂತರ ಫಲಾನುಭವಿಗಳ ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ಹೆಣ್ಣು ಮಕ್ಕಳ ಭವಿಷ್ಯಕ್ಕೆ ಭರವಸೆಯಾಗಿದ್ದ ಬಿ.ಎಸ್.ಯಡಿಯೂರಪ್ಪನವರ ಕನಸಿನ ಯೋಜನೆಯ ಗುರಿ ಸಾಕಾರ" ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹರ್ಷ ವ್ಯಕ್ತಪಡಿಸಿದ್ದಾರೆ.

ಬಡತನದ ಮನೆಯೊಳಗೆ ಹೆಣ್ಣು ಹುಟ್ಟಿತೆಂದು, ಮೂಗು ಮುರಿಯುತ್ತಿದ್ದ ಕಾಲದಲ್ಲಿ ಬಡ ಕುಟುಂಬಗಳ ಹೆಣ್ಣೆತ್ತವರ ನೋವು ಅರಿತಿದ್ದ ಮಾನ್ಯ ಬಿ.ಎಸ್  ಯಡಿಯೂರಪ್ಪ ಅವರು 'ಭಾಗ್ಯಲಕ್ಷ್ಮಿ ಯೋಜನೆ' ಜಾರಿಗೊಳಿಸಿ ಸ್ತ್ರೀಕುಲಕ್ಕೆ ಅಭಯದ ಸಂದೇಶ ರವಾನಿಸಿದ್ದರು.

ಈ ಮಹತ್ವದ ದೂರದೃಷ್ಟಿ ಯೋಜನೆಯ ಫಲ ಲಕ್ಷಾಂತರ ಫಲಾನುಭವಿಗಳ ಭಾಗ್ಯಲಕ್ಷ್ಮಿ ಬಾಂಡ್'ಗಳು ನಗದೀಕರಣಗೊಂಡಿದ್ದು ಶೇ 90% ರಷ್ಟು ಹೆಣ್ಣು ಮಕ್ಕಳು ಹಣವನ್ನು ಪದವಿ ಸೇರಿದಂತೆ ಇತರ ಸ್ನಾತಕೋತ್ತರ ಪದವಿ ಶಿಕ್ಷಣಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದು, ಶೇ 10% ಹೆಣ್ಣುಮಕ್ಕಳು ಮದುವೆ ಕಾರ್ಯಕ್ಕೆ ಬಳಸಿಕೊಳ್ಳುತ್ತಿರುವ ವರದಿ ಸಾರ್ಥಕ ಭಾವ ಮೂಡಿಸಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

 ಯೋಜನೆ ಆರಂಭದಿಂದ ರಾಜ್ಯದಲ್ಲಿ 34.50 ಲಕ್ಷ ಹೆಣ್ಣುಮಕ್ಕಳು ಭಾಗ್ಯಲಕ್ಷ್ಮಿ ಬಾಂಡ್ ಪಡೆದಿರುವುದು ಕರ್ನಾಟಕ ಬಿಜೆಪಿ ಸರ್ಕಾರದ ನಾರಿಕುಲದ ರಕ್ಷಣೆ ಹಾಗೂ ಕಾಳಜಿಪೂರ್ವಕ ಯಶಸ್ವೀ ಯೋಜನೆಗೆ ಇದೊಂದು ನೈಜ ನಿದರ್ಶನ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ನಾಡಿನ ಲಕ್ಷಾಂತರ ಹೆಣ್ಣು ಹೆತ್ತ ಕುಟುಂಬಗಳು ಸಂತಸ ಪಡುತ್ತಿರುವ ಸಂದರ್ಭದಲ್ಲಿ ವೋಟ್ ಬ್ಯಾಂಕ್ ರಾಜಕಾರಣವೊಂದನ್ನೇ ಗುರಿಯಾಗಿಸಿಕೊಂಡು ಅಧಿಕಾರಕ್ಕೆ ಬಂದಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಈ ಮಹತ್ವದ ಯೋಜನೆಯ ಕುರಿತು ತಾತ್ಸಾರ ಧೋರಣೆ ತಾಳಿರುವುದು ದೌರ್ಭಾಗ್ಯವೇ ಸರಿ ಎಂದು ವಿಜಯೇಂದ್ರ ತರಾಟೆ ತೆಗೆದುಕೊಂಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ