Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಕ್ತಿ ಪರಿಶುದ್ಧವಾಗಿರಬೇಕು ಮಾತ್ರವಲ್ಲ ಮಾನವೀಯತೆಯಿಂದ ಕೂಡಿರಬೇಕು-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಕ್ತಿ ಪರಿಶುದ್ಧವಾಗಿರಬೇಕು ಮಾತ್ರವಲ್ಲ ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರ ಸ್ವಾಮಿ ದೇವಾಲಯದ ಸಂಪ್ರೋಕ್ಷಣ, ಪುನರ್ ಪ್ರತಿಷ್ಠಾಪನೆ, ಕುಂಭಾಭಿಷೇಕ ಹಾಗೂ ಮಹಾದ್ವಾರದ ಪೂಜಾ ಮಹೋತ್ಸವಕ್ಕೆ ಚಾಲನೆ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.


ದೇವರು ಸರ್ವಾಂತರ್ಯಾಮಿ ಆಗಿದ್ದಾನೆ. ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ. ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಪೂಜಾ ಮಹೋತ್ಸವಗಳು, ಜಾತ್ರೆಗಳಲ್ಲಿ ಜನರು ಸಂತೋಷದಿಂದ ಭಾಗವಹಿಸಿದ್ದಾರೆ. ಶ್ರೀ ಬೀರೇಶ್ವರಸ್ವಾಮಿ ನಾಡಿನ ಸಮಸ್ತ ಜನತೆಗೆ ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

1978ರಲ್ಲಿ ಈ ಪ್ರದೇಶದಿಂದಲೇ ನನ್ನ ರಾಜಕೀಯ ಜೀವನ ಪ್ರಾರಂಭವಾಗಿದ್ದು, ಅಪಾರ ಜನಬೆಂಬಲ ನನಗೆ ದೊರೆತಿದೆ. ಅಲ್ಲಿಂದ ಇಲ್ಲಿಯವರೆಗೆ ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನರು ನನ್ನನ್ನು ಬೆಂಬಲಿಸುತ್ತಲೇ ಬಂದಿದ್ದಾರೆ. ಇಲ್ಲಿನ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ, ಆರ್ಥಿಕ ಸಚಿವನಾಗಿ 17 ಬಾರಿ ಆಯವ್ಯಯಗಳನ್ನು ಮಂಡಿಸುವ ಅವಕಾಶ ದೊರೆತಿದೆ. 13 ಬಾರಿ ಚುನಾವಣೆಗಳನ್ನು ಎದುರಿಸಿದ್ದು, ನಾಲ್ಕು ಬಾರಿ ಸೋತ ಸಂದರ್ಭದಲ್ಲಿಯೂ, ಈ ಭಾಗದ ಜನರು ನನ್ನನ್ನೇ ಬೆಂಬಲಿಸಿದ್ದಾರೆ. ನನ್ನ ರಾಜಕೀಯ ಬದುಕಿಗೆ ಇಲ್ಲಿನ ಜನರ ಕೊಡುಗೆ ಅನನ್ಯವಾಗಿದೆ.

ನನ್ನ ಗುರುಗಳ ಮಾರ್ಗದರ್ಶನದಿಂದ ಶಿಕ್ಷಣ ಪಡೆದು, ವಕೀಲನಾಗಿ, ರಾಜಕಾರಣಿಯಾಗಿ ಜನರ ಸೇವೆ ಮಾಡುವ ಅವಕಾಶ ದೊರೆತಿದೆ. ನನ್ನ ರಾಜಕೀಯ ಜೀವನ ಸೋಲು-ಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆತಿಲ್ಲ, ಮರೆಯುವುದಿಲ್ಲ. ನನ್ನ ಕೊನೆ ಉಸಿರುವವರೆಗೆ ಜನ ಸೇವೆಯಲ್ಲಿ ಸದಾ ತೊಡಗಿರುತ್ತೇನೆ. ಯತೀಂದ್ರ ಸಿದ್ದರಾಮಯ್ಯ ಈ ಕ್ಷೇತ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತಿದ್ದು, ಜನರು ಅವರನ್ನು ಕೂಡ ಬೆಂಬಲಿಸಬೇಕು ಎಂದು ಮನವಿ ಮಾಡುತ್ತೇನೆ. ರಾಜ್ಯದ ವಿವಿಧ ಜಾತಿ, ಧರ್ಮ, ವರ್ಗಗಳ ಬಡಜನರಿಗೆ ಅನೇಕ ಭಾಗ್ಯಗಳು ಹಾಗೂ ಗ್ಯಾರಂಟಿ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದ್ದೇನೆ.

ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಅನೇಕರು ಈ ಧಾರ್ಮಿಕ ಸಮಾರಂಭದಲ್ಲಿ ಉಪಸ್ಥಿತರಿದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ