Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಭರತ ನಾಟ್ಯ ಕಲಾವಿದೆಗೆ ಅಪ್ರತಿಮ ಗುರು ಪುರಸ್ಕಾರ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : 
ನಗರದ ಭರತನಾಟ್ಯ ಕಲಾವಿದೆ ಎಂ ಕೆ ನವ್ಯಶ್ರೀ  ಇವರಿಗೆ ಚಿಗುರು ಕಲ್ಚರಲ್ ಅಂಡ್  ಚಾರಿಟಬಲ್ ಟ್ರಸ್ಟ್ ವತಿಯಿಂದ ಅಪ್ರತಿಮ ಗುರು ಪುರಸ್ಕಾರ (ರಾಷ್ಟ್ರ ಪ್ರಶಸ್ತಿ) ನೀಡಿ ಗೌರವಿಸಲಾಯಿತು.

ಇದೆ ಫೆಬ್ರವರಿ 15 ರಿಂದ 17 ವರೆಗೆ  ರಾಜಸ್ಥಾನದ ಜೈಪುರ್ ನಲ್ಲಿ ಬೆಂಗಳೂರಿನ ಚಿಗುರು ಕಲ್ಚರಲ್ ಅಂಡ್  ಚಾರಿಟಬಲ್ ಟ್ರಸ್ಟ್ ಮತ್ತು ಕನ್ನಡ ಮತ್ತು ಸಂಸ್ಕೃತಿ  ಇಲಾಖೆ ಇವರ ಸಹಯೋಗದೊಂದಿಗೆ ನಾಟ್ಯ ಮಿಲನ 2025 ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು, ಕಾರ್ಯಕ್ರಮದಲ್ಲಿ  ದೊಡ್ಡಬಳ್ಳಾಪುರ ನಗರದ ಭರತನಾಟ್ಯ ಕಲಾವಿದೆ ಎಂ ಕೆ ನವ್ಯಶ್ರೀ  ಭಾಗವಹಿಸಿ  ಭರತನಾಟ್ಯ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದರು.

ಈ ಸಂದರ್ಭದಲ್ಲಿ ಕಲಾವಿದೆ ಎಂ ಕೆ ನವ್ಯಶ್ರೀ ಇವರಿಗೆ ಸಂಸ್ಥೆವತಿಯಿಂದ ಅಪ್ರತಿಮ ಗುರು ಪುರಸ್ಕಾರ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದರು.

 ಈ ಕುರಿತು ಪ್ರಶಸ್ತಿ ಪಡೆದ ಕಲಾವಿದೆ ಎಂ ಕೆ ನವ್ಯಶ್ರೀ ಮಾತನಾಡಿ ಪುರಸ್ಕಾರ ಹಾಗೂ ಪ್ರಶಸ್ತಿ  ನಮ್ಮ ಜವಾಬ್ದಾರಿ ಹೆಚ್ಚಿಸುತ್ತದೆ, ಇಂದು ನನಗೆ ಲಭಿಸಿರುವ  ಅಪ್ರತಿಮ ಗುರು ಪುರಸ್ಕಾರವು ನನ್ನೆಲ್ಲ ಪೂಜ್ಯ ಗುರುಗಳಿಗೆ ಅರ್ಪಿಸುತ್ತೇನೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧನೆ ಮಾಡುವ ಆಶಯವಿದೆ ಎಂದರು.

 ಈ ಸಂದರ್ಭದಲ್ಲಿ ಚಿಗುರು ಕಲ್ಚರಲ್ ಅಂಡ್ ಚಾರಿಟಬಲ್ ಟ್ರಸ್ಟ್ ಮುಖ್ಯಸ್ಥರು ಪದಾಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು