Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಟ್ಟದ ಶ್ರೀದಂಡಗುಂಡ ಬಸವಣ್ಣ ಜಾತ್ರಾ ಮಹೋತ್ಸವಕ್ಕೆ ಭರ್ಜರಿ ಸಿದ್ಧತೆ

Advertisement
ಚಂದ್ರವಳ್ಳಿ ನ್ಯೂಸ್, ಯಾದಗಿರಿ:
ಯಾದಗಿರಿ ಬೆಟ್ಟದ ಪವಿತ್ರ ಧಾರ್ಮಿಕ ಕ್ಷೇತ್ರವಾದ ಶ್ರೀ ದಂಡಗುಂಡ ಬಸವಣ್ಣ ದೇವಸ್ಥಾನ
, ಸೇವಾ ಸಮಿತಿ ವಾಲ್ಮೀಕಿ ನಗರ, ಹಿರೇ ಅಗಸಿ (ಯಾದಗಿರಿ) ಇವರು ಆಯೋಜಿಸುವ 2025ನೇ ಜಾತ್ರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ.

ಈ ಕುರಿತು ನಡೆದ ಸಭೆಯಲ್ಲಿ, ದೇವಸ್ಥಾನದ ಅರ್ಚಕ ವೆ. ಮೂ. ಸಿದ್ದಯ್ಯ ಸ್ವಾಮಿ ಹಾಗೂ ಸ್ಥಳೀಯ ಗುರುಹಿರಿಯರ ಸಮ್ಮುಖದಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು.

2025ರ ಆಗಸ್ಟ್-11 ರಂದು ನಡೆಯುವ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳ ವಿವರ ಇಂತಿವೆ:
ಅಂದು ಬೆಳಗ್ಗೆ 6 ಗಂಟೆಗೆ ಕರ್ತೃ ಗದ್ದಿಗೆಯಲ್ಲಿ ಮಹಾ ರುದ್ರಾಭಿಷೇಕ ಹಾಗೂ ಲಿಂಗ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ಸಂದರ್ಭ ಲಿಂಗವನ್ನು "ಕಾಶಿ ವಿಶ್ವನಾಥ" ಎಂದು ನಾಮಕರಣ ಮಾಡಲಾಗುವುದು.

ಬೆಳಗ್ಗೆ 9 ಗಂಟೆಗೆ ರಥಕ್ಕೆ ಕ್ಷೀರಾಭಿಷೇಕ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಭಾವಚಿತ್ರ ಮೆರವಣಿಗೆ, ವಿವಿಧ ವಾದ್ಯಗಳು, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಭವ್ಯ ಮೆರವಣಿಗೆ ನಡೆಯಲಿದೆ. ಸಂಜೆ 6 ಗಂಟೆಗೆ ಭವ್ಯ ರಥೋತ್ಸವ ಜರುಗಲಿದೆ.

ರಾತ್ರಿ 8 ಗಂಟೆಗೆ ಧಾರ್ಮಿಕ ಸಭೆ, ಭಜನೆ, ಕೈಕುಸ್ತಿ ಸೇರಿದಂತೆ ವಿವಿಧ ಕಾರ್ಯಕ್ರಮಗಳೊಂದಿಗೆ ಜಾತ್ರಾ ಮಹೋತ್ಸವದ ಸಂಭ್ರಮ ಹೆಚ್ಚಲಿದೆ.

ಜಾತ್ರಾ ಮಹೋತ್ಸವವನ್ನು ಭಕ್ತಿಭಾವದಿಂದ, ಶಿಸ್ತುಪಾಲನೆಯಿಂದ ಹಾಗೂ ಸಮಾಜದ ಏಕತೆಗೆ ಒತ್ತಿ ಹಚ್ಚುವಂತೆ ಆಚರಿಸಲು ಸೇವಾ ಸಮಿತಿ ಕಟಿಬದ್ಧವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿ ಗೊಳಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ