Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬಿಜೆಪಿಗೆ ಬಿಗ್ ಶಾಕ್: ವಿಜಯೇಂದ್ರಗೆ ಸತ್ಯಶೋಧನಾ ಸಮಿತಿ ಮಧ್ಯಂತರ ವರದಿ ಸಲ್ಲಿಕೆ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕ್ರಾಸ್ ವೋಟಿಂಗ್(ಅಡ್ಡ ಮತದಾನ) ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್ ಮಹತ್ವದ ಹೆಜ್ಜೆ ಇಟ್ಟಿದೆ.

ಸಿ.ಟಿ.ರವಿ ನೇತೃತ್ವದ ತ್ರಿಸದಸ್ಯ ಸತ್ಯಶೋಧನಾ ಸಮಿತಿಯು ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರನ್ನು ಭೇಟಿಯಾಗಿ, ತನ್ನ ಆಂತರಿಕ ತನಿಖೆಯ ಮಧ್ಯಂತರ ವರದಿಯನ್ನು ಸೀಲ್ಡ್ ಕವರ್‌ನಲ್ಲಿ ಸಲ್ಲಿಕೆ ಮಾಡಿದೆ.

Advertisement

ರಾಜ್ಯಾಧ್ಯಕ್ಷರ ಸೂಚನೆಯ ಮೇರೆಗೆ ಕೇವಲ ನಾಲ್ಕೇ ದಿನಗಳಲ್ಲಿ ತನಿಖೆ ಮುಗಿಸಿರುವ ಸಮಿತಿಯು, ಒಟ್ಟು 3 ಪುಟಗಳ ಸುದೀರ್ಘ ವರದಿಯನ್ನು ಸಿದ್ಧಪಡಿಸಿ ಹಸ್ತಾಂತರಿಸಿದೆ.

ವರದಿಯ ಪ್ರಮುಖ ಹೈಲೈಟ್ಸ್:
ಸಿ.ಟಿ. ರವಿ, ಮಹೇಶ್ ಟೆಂಗಿನಕಾಯಿ ಹಾಗೂ ಎನ್. ಮಹೇಶ್ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿ ನೀಡಿರುವ ವರದಿಯ ಪ್ರಮುಖ ಅಂಶಗಳು ಇಲ್ಲಿವೆ.

12 ಮತಗಳ ಕ್ರಾಸ್ ವೋಟಿಂಗ್: ಎನ್‌ಡಿಎ (ಬಿಜೆಪಿ-ಜೆಡಿಎಸ್) ಮೈತ್ರಿಕೂಟದಿಂದ ಒಟ್ಟು 12 ಮತಗಳು ಅಡ್ಡ ಮತದಾನವಾಗಿವೆ.

ಬಿಜೆಪಿಗೆ ನಾಲ್ಕರ ಪೆಟ್ಟು: ಬಿಜೆಪಿಯಿಂದ ಒಟ್ಟು 4 ಮತಗಳು ಕೈತಪ್ಪಿವೆ. ಇದರಲ್ಲಿ 3 ಅಡ್ಡ ಮತಗಳಾಗಿದ್ದರೆ, 1 ಮತ ಅಸಿಂಧುವಾಗಿದೆ.

ಜೆಡಿಎಸ್‌ನಲ್ಲೂ ಭಾರಿ ಸೋರಿಕೆ: ಉಳಿದ ಬಹುಪಾಲು ಅಡ್ಡ ಮತಗಳು ಮೈತ್ರಿ ಪಕ್ಷವಾದ ಜೆಡಿಎಸ್‌ನಿಂದಲೇ ಚಲಾವಣೆಯಾಗಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಹೆಸರುಗಳು ಗೌಪ್ಯ: ವರದಿಯಲ್ಲಿ ಸದ್ಯಕ್ಕೆ ಅಡ್ಡ ಮತ ಚಲಾಯಿಸಿದ ಶಾಸಕರ ನಿಖರ ಹೆಸರುಗಳನ್ನು ಬಹಿರಂಗಪಡಿಸಿಲ್ಲ, ಕೇವಲ ಸಂಖ್ಯೆಯನ್ನು ಮಾತ್ರ ಉಲ್ಲೇಖಿಸಲಾಗಿದೆ.

ಶಾಸಕರ ಮೇಲೆ ತೀವ್ರ ನಿಗಾ: ಸದ್ಯಕ್ಕೆ ತೀವ್ರ ಅನುಮಾನವಿರುವ ಶಾಸಕರ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಅವರ ಚಟುವಟಿಕೆಗಳ ಮೇಲೆ ಕಣ್ಣಿಡಲು ಸಮಿತಿ ಶಿಫಾರಸು ಮಾಡಿದೆ.

ಇದು ಕಾಂಗ್ರೆಸ್ ಅಭಿಮಾನದ ಮತಗಳಲ್ಲ: ಸಿ.ಟಿ. ರವಿ ಆಕ್ರೋಶ
ವರದಿ ಸಲ್ಲಿಕೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಮಿತಿ ಸಂಚಾಲಕ ಸಿ.ಟಿ. ರವಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

"ಇದು ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿ ನಡೆ. ಈ ಅಡ್ಡ ಮತಗಳು ಕಾಂಗ್ರೆಸ್ ಮೇಲಿನ ಅಭಿಮಾನದಿಂದ ಬಂದಿವೆ ಎಂದು ಅವರಾರೂ ಭ್ರಮಿಸಬೇಕಾಗಿಲ್ಲ. ಇವೆಲ್ಲವೂ ಅನೈತಿಕ ಕ್ರಾಸ್ ವೋಟಿಂಗ್. ಬೇರೆ ಚುನಾವಣೆಗಳಲ್ಲಿ ಕ್ರಾಸ್ ವೋಟಿಂಗ್ ಮಾಡುವ ಕಾಂಗ್ರೆಸ್‌ಗೆ ಇದನ್ನು ಪ್ರಶ್ನಿಸುವ ಯಾವುದೇ ನೈತಿಕತೆ ಇಲ್ಲ."
ಸಿ.ಟಿ ರವಿ, ಬಿಜೆಪಿ ನಾಯಕ.

ತನಿಖೆ ನಡೆದಿದ್ದು ಹೇಗೆ?:
ನಾಲ್ಕು ದಿನಗಳ ಕಾಲ ಸಮಿತಿಯ ಮೂವರೂ ಸದಸ್ಯರು ಒಮ್ಮತದಿಂದ ಈ ವರದಿ ಸಿದ್ಧಪಡಿಸಿದ್ದಾರೆ. ಅನುಮಾನಾಸ್ಪದವಾಗಿ ಕಂಡುಬಂದ ಶಾಸಕರ ಪಟ್ಟಿ ಮಾಡಿ, ಅವರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ. ಅಷ್ಟೇ ಅಲ್ಲದೆ ಅಭ್ಯರ್ಥಿಗಳು, ಜೆಡಿಎಸ್ ನಾಯಕರು, ಬಿಜೆಪಿ ಪ್ರಮುಖರು ಹಾಗೂ ಸ್ಥಳೀಯ ಸಾಂದರ್ಭಿಕ ಸಾಕ್ಷ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಆಂತರಿಕ ವರದಿ ಸಿದ್ಧಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಮುಂದಿನ ನಡೆ ಏನು?:
ಇದು ಪಕ್ಷದ ಆಂತರಿಕ ತನಿಖಾ ವರದಿಯಾಗಿರುವುದರಿಂದ ಸದ್ಯಕ್ಕೆ ಹೆಚ್ಚಿನ ಮಾಹಿತಿ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಸಮಿತಿ ಹೇಳಿದೆ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಈ ವರದಿಯನ್ನು ಮುಂದಿನ ಕ್ರಮಕ್ಕಾಗಿ ಹೈಕಮಾಂಡ್‌ಗೆ ರವಾನಿಸುವ ಸಾಧ್ಯತೆಯಿದೆ. ಬಿಜೆಪಿಯ ಮುಂಬರುವ ಕೋರ್ ಕಮಿಟಿ ಸಭೆಯಲ್ಲಿ ಈ ವರದಿಯ ಆಧಾರದ ಮೇಲೆ ಕ್ರಾಸ್ ವೋಟಿಂಗ್ ಮಾಡಿದ ಶಾಸಕರ ವಿರುದ್ಧ ಯಾವ ರೀತಿಯ ಶಿಸ್ತು ಕ್ರಮ ಕೈಗೊಳ್ಳಬೇಕು ಎಂಬುದನ್ನು ಅಂತಿಮಗೊಳಿಸಲಾಗುತ್ತದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ