Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಗ್​​ಬಾಸ್ ಕನ್ನಡ ಸೀಸನ್-12 ಶೀಘ್ರ ಪ್ರಾರಂಭ-ನಟ ಸುದೀಪ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಟ ಸುದೀಪ್ ಅವರು ಬಿಗ್​ಬಾಸ್ ಕನ್ನಡ ಸೀಸನ್ 12ರ ಪ್ರಾರಂಭದ ದಿನಾಂಕ ಘೋಷಣೆ ಮಾಡಿದ್ದಾರೆ.
ಎಲ್ಲೆಡೆ ಬಿಗ್​ಬಾಸ್ ಸೀಸನ್ ಪ್ರಾರಂಭವಾಗಿದೆ. ಹಿಂದಿ ಬಿಗ್​​ಬಾಸ್ ಕಳೆದ ವಾರವಷ್ಟೆ ಪ್ರಾರಂಭವಾಗಿದೆ.


ಕನ್ನಡ ಬಿಗ್​ಬಾಸ್​ನ 12ರ ಮೊದಲ ಪ್ರೋಮೊ ಈಗಾಗಲೇ ಬಿಡುಗಡೆ ಆಗಿದ್ದು, ದಿನಾಂಕ ಘೋಷಣೆಯಷ್ಟೆ ಬಾಕಿ ಇತ್ತು. ಚಾನೆಲ್​​ನವರು ದಿನಾಂಕ ಘೋಷಣೆ ಮಾಡುವ ಮುಂಚೆಯೇ ಸುದೀಪ್ ಅವರು ಬಿಗ್​​ಬಾಸ್ ಸೀಸನ್ 12 ಪ್ರಾರಂಭವಾಗುವ ದಿನಾಂಕವನ್ನು ಘೋಷಣೆ ಮಾಡಿಬಿಟ್ಟಿದ್ದಾರೆ.


ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ಸುದೀಪ್ ಈ ಬಾರಿಯ ಬಿಗ್​​ಬಾಸ್ ಪ್ರಾರಂಭದ ದಿನಾಂಕ ಯಾವುದೆಂದು ಹೇಳಿದ್ದಾರೆ.


ಮೈಸೂರಿನಲ್ಲಿ ಭಾನುವಾರ ನಿರ್ಮಾಪಕ, ಉದ್ಯಮಿ, ರಾಜಕಾರಣಿ ಸಂದೇಶ್ ನಾಗರಾಜ್ ಹುಟ್ಟುಹಬ್ಬದ‌ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಇನ್ನೂ ಹಲವು ಗಣ್ಯರು ಭಾಗಿ ಆಗಿದ್ದರು. ಇದೇ ಕಾರ್ಯಕ್ರಮದಲ್ಲಿ ನಟ ಸುದೀಪ್ ಸಹ ಅತಿಥಿಯಾಗಿ ಭಾಗಿಯಾಗಿ ವೇದಿಕೆ ಮೇಲೆ ಮಾತನಾಡಿದ ಸುದೀಪ್ ಬಿಗ್​​ಬಾಸ್ ಬಗ್ಗೆಯೂ ಮಾತನಾಡಿದರು.

ಅಭಿಮಾನಿಗಳ ಕೂಗಾಟ, ಚಪ್ಪಾಳೆ, ಶಿಳ್ಳೆಗಳ ನಡುವೆ ಮಾತನಾಡಿದ ಸುದೀಪ್, ಶೀಘ್ರವೇ ತೆರೆ ಮೇಲೆ ಬರಲಿದ್ದೇನೆ. ಸೆಪ್ಟೆಂಬರ್-28ರಿಂದ ಕಿರುತೆರೆಗೆ ಬರಲಿದ್ದೇನೆ ಆಶೀರ್ವಾದ ಮಾಡಿ ಎಂದು ನಟ ಸುದೀಪ್ ಕೋರಿ ಬಿಗ್​​ಬಾಸ್ ಸೀಸನ್ 12 ಸೆಪ್ಟೆಂಬರ್ 28ಕ್ಕೆ ಪ್ರಾರಂಭ ಆಗಲಿದೆ ಎಂದು ಘೋಷಣೆ ಮಾಡಿದರು.


ಈ ಬಾರಿಯೂ ಸುದೀಪ್ ಅವರೇ ಬಿಗ್​​ಬಾಸ್ ನ ನಿರೂಪಣೆ ಮಾಡಲಿದ್ದು, ದಿನಾಂಕವನ್ನೂ ಅವರೇ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಳೆದ ಬಾರಿಯ ಬಿಗ್​​ಬಾಸ್ ಸೀಸನ್ 11 ಸೆಪ್ಟೆಂಬರ್ 29ರಂದು ಪ್ರಾರಂಭವಾಗಿತ್ತು. ಈ ಬಾರಿ ಸೆಪ್ಟೆಂಬರ್ 28ಕ್ಕೆ ಪ್ರಾರಂಭ ಆಗಲಿದೆ. ಮೂಲಗಳ ಪ್ರಕಾರ ಈಗಾಗಲೇ ಬಹುತೇಕ ಸ್ಪರ್ಧಿಗಳ ಆಯ್ಕೆ ಆಗಿದ್ದು, ಕೆಲವರ ಆಯ್ಕೆಯಷ್ಟೆ ಬಾಕಿ ಇದೆ ಎನ್ನಲಾಗುತ್ತಿದೆ. ಆಯೋಜಕರ ಒತ್ತಡಕ್ಕೆ ಮಣಿದು ಸುದೀಪ್ ಅವರು ಮತ್ತೆ ಬಿಗ್​​ಬಾಸ್ ನಿರೂಪಣೆಗೆ ಒಪ್ಪಿದ್ದಾರೆ ಎನ್ನಲಾಗಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ