ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಇವರ ಅಧ್ಯಕ್ಷತೆಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಂಬಂಧ ಮಂಗಳವಾರ ನಡೆದ ಕೆಸ್ವಾನ್ ಸಭೆಯಲ್ಲಿ ಬೈಕ್ ರ್ಯಾಲಿ ಆಯೋಜಿಸಲು ತೀರ್ಮಾನಿಸಲಾಯಿತು.
ಸೆಪ್ಟೆಂಬರ್-15 ರಂದು ಸರ್ಕಾರದ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸುತ್ತಿದ್ದು ಆ ಪ್ರಯುಕ್ತ ಸಾರ್ವಜನಿಕರಲ್ಲಿ ಸಂವಿಧಾನ ಹಾಗೂ ಮತದಾನದ ಬಗ್ಗೆ ಅರಿವು ಮೂಡಿಸಲು ಚಿಕ್ಕಮಗಳೂರಿನಿಂದ ಬೆಂಗಳೂರು ವಿಧಾನ ಸೌಧದವರೆಗೆ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದ್ದು ಸದರಿ ಕಾರ್ಯಕ್ರಮಕ್ಕೆ ಭಾಗವಹಿಸಲು 18 ವರ್ಷ ಮೇಲ್ಪಟ್ಟ ಹಾಗೂ ಬೈಕ್ ಸವಾರರು ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಹೋಗುವ ಸಂಬಂಧ ವಾಹನಕ್ಕೆ ಸಂಬಂಧಿಸಿದಂತೆ ಅರ್ಹ ದಾಖಲಾತಿಗಳನ್ನು ಹಾಗೂ
ಸುರಕ್ಷತೆಗೆ ಅವಶ್ಯಕವಾದ ವಸ್ತುಗಳನ್ನು ಹೊಂದಿದಂತಹ ಆಸಕ್ತಿಯುಳ್ಳ ಬೈಕ್‌ಸವಾರರು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕಛೇರಿಯಲ್ಲಿ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕಛೇರಿಯಲ್ಲಿ ದಿನಾಂಕ:12.09.2025 ರಂದು ಸಂಜೆ:5.30 ರೊಳಗೆ ತಮ್ಮ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


