LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರದ ವಿರುದ್ಧ ಹೋರಾಟಕ್ಕಿಳಿದ ಬಿಜೆಪಿ-ಜೆಡಿಎಸ್: ಹೈಕೋರ್ಟ್‌ನಲ್ಲಿ ಎಫ್‌ಐಆರ್ ರದ್ದತಿಗೆ ಅರ್ಜಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕಾಗಿ ರೈತರ ಭೂಮಿ ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಸಂತ್ರಸ್ತ ರೈತರ ಪರವಾಗಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಹೋರಾಟ ತೀವ್ರಗೊಳಿಸಿದೆ. ಈವರೆಗೆ ಜೆಡಿಎಸ್ ಮಾತ್ರ ನಡೆಸುತ್ತಿದ್ದ ಹೋರಾಟಕ್ಕೆ ಈಗ ಮೈತ್ರಿ ಧರ್ಮದಡಿ ಬಿಜೆಪಿಯೂ ಕೈಜೋಡಿಸಿದ್ದು
, ಸರ್ಕಾರದ ವಿರುದ್ಧ ಜಂಟಿ ಸಮರ ಸಾರಿದೆ.

ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ:
ರೈತರ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತು ಸಾವಿರಾರು ಕಾರ್ಯಕರ್ತರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಿ.ಟಿ. ರವಿ ವಾಗ್ದಾಳಿ: "ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದು, ಜನ ಜಾನುವಾರುಗಳು ತತ್ತರಿಸುತ್ತಿವೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸುವ ಬದಲು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಬಿಡದಿ ಟೌನ್‌ಶಿಪ್ ಮಾಡುವ ಚಿಂತೆ ಕಾಡುತ್ತಿದೆ. ರೈತರ ಬದುಕಿನ ಮೇಲೆ ಸಮಾಧಿ ಕಟ್ಟಲು ಈ ಸರ್ಕಾರ ಹೊರಟಿದೆ" ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಕಿಡಿಕಾರಿದರು.

ಶೋಭಾ ಕರಂದ್ಲಾಜೆ ಪ್ರಶ್ನೆ: "ಬೆಂಗಳೂರಿನಲ್ಲಿ ಈಗಾಗಲೇ ಹಲವು ಲೇಔಟ್‌ಗಳನ್ನು ನಿರ್ಮಿಸಲಾಗಿದೆ. ಆದರೆ ಅವುಗಳಿಗೆ ಕನಿಷ್ಠ ಮೂಲಸೌಕರ್ಯ ಕಲ್ಪಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಈ ಹಿಂದಿನ ಬಡಾವಣೆಗಳಿಗೆ ಭೂಮಿ ನೀಡಿದ ರೈತರೇ ಇಂದಿಗೂ ಪರಿತಪಿಸುತ್ತಿರುವಾಗ, ಹೊಸ ಟೌನ್‌ಶಿಪ್‌ಗಳ ಅಗತ್ಯವೇನಿದೆ?" ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.

ಆರ್. ಅಶೋಕ್ ಎಚ್ಚರಿಕೆ: "ಬಿಡದಿ ಟೌನ್‌ಶಿಪ್ ಯೋಜನೆ ನಮ್ಮ ಸರ್ಕಾರದ ಅವಧಿಯಲ್ಲಿ ನಡೆದಿಲ್ಲ, ಭೂಸ್ವಾಧೀನಕ್ಕೆ ನಾವೆಲ್ಲೂ ಸಹಿ ಹಾಕಿಲ್ಲ. ಆದ್ದರಿಂದಲೇ ನಾವು ಧೈರ್ಯವಾಗಿ ರೈತರ ಪರ ನಿಂತಿದ್ದೇವೆ. ಡಿಕೆ ಶಿವಕುಮಾರ್ ಅಧಿಕಾರಕ್ಕೆ ಬಂದಾಗಿನಿಂದ ರೈತರಿಗೆ ಅನ್ಯಾಯವೇ ಆಗುತ್ತಿದೆ" ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದರು.

ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್‌ವಿಪಕ್ಷ ನಾಯಕ ಚಲುವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಸಿ ಟಿ ರವಿ, ಎನ್ ರವಿ ಕುಮಾರ್, ಶಾಸಕರಾದ ಅರವಿಂದ್ ಬೆಲ್ಲದ್, ಎಸ್. ಸುರೇಶ್ ಕುಮಾರ್,  ಭೈರತಿ ಬಸವರಾಜ್, ಸಿ ಕೆ ರಾಮಮೂರ್ತಿ ಹಾಗೂ ಮಾಜಿ ಸಂಸದರು, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಪ್ರಮುಖರು ಹಾಗೂ ಸಾವಿರಾರು ಕಾರ್ಯಕರ್ತರು ಹಾಗೂ ರೈತ ಬಂಧುಗಳು ಉಪಸ್ಥಿತರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ಕಿಚ್ಚು: ಸುಪ್ರೀಂ ತೀರ್ಪು ನೋಡಿ ಮುಂದಿನ ನಿರ್ಧಾರ, ಹೆಚ್‌ಡಿಕೆಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು!ಉಗ್ರರೂಪ ತಾಳಿದ ಕಾವೇರಿ ಕಿಚ್ಚು: ಹೆದ್ದಾರಿ ತಡೆದು ರೈತರ ಬೃಹತ್ ಪ್ರತಿಭಟನೆ!ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ: ಸಾರಿಗೆ, ಶಾಲಾ-ಕಾಲೇಜು ಕಾರ್ಯನಿರ್ವಹಣೆ?ಪ್ರಜ್ವಲ್ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ: DIG ನೇತೃತ್ವದಲ್ಲಿ ಆಂತರಿಕ ತನಿಖೆ!ಐಎಎಸ್ ಅಧಿಕಾರಿಗಳ ವರ್ಗಾವಣೆ: ಕೆಪಿಎಸ್‌ಸಿ ಪರೀಕ್ಷಾ ಜವಾಬ್ದಾರಿ ಕೆಇಎ 'ಎಚ್. ಪ್ರಸನ್ನ' ಹೆಗಲಿಗೆ!ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಹಿರಿಯ ನಾಯಕರ ರಹಸ್ಯ ಸಭೆ: ಡಾ. ಯತೀಂದ್ರ ಸಮಾಧಾನದ ಯತ್ನ!ಜೈಲಿನ ಮೇಲೆ ಸಿಸಿಬಿ ದಾಳಿ ನನ್ನದೇ ಆದೇಶ: ಪ್ರಿಯಾಂಕ್ ಖರ್ಗೆ!ಜೈಲಿನ ಮೇಲೆ ಸಿಸಿಬಿ ಹಠಾತ್ ದಾಳಿ: ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್ ಡ್ರೈವ್ ಪತ್ತೆ- FIR ದಾಖಲು!ನೂತನ ಸಚಿವರಿಗೆ ಖಾತೆ ಹಂಚಿಕೆ: ರಾಮಲಿಂಗಾರೆಡ್ಡಿ, ಮುನಿಯಪ್ಪ ಖಾತೆ ಬದಲಾವಣೆ–ಯಾರಿಗೆ ಯಾವ ಇಲಾಖೆ?ಯುಎಪಿಎ ಪ್ರಕರಣಗಳ ಸುದೀರ್ಘ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ