Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಪಕ್ಷದ ಶಕ್ತಿ ಏನೆಂದು ಬಿಜೆಪಿಗೆ ಚನ್ನಾಗಿ ಗೊತ್ತಿದೆ

Advertisement
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಕಾಂಗ್ರೆಸ್ ಪಕ್ಷದ ಶಕ್ತಿ ಏನೆಂದು ನಮಗಿಂತ ಚನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.


ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಮಾತನಾಡಿದ ಅವರು, ಬಿಜೆಪಿಯ ಬೆಳಗಾವಿ ಚಲೋ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಶಕ್ತಿ ಅವರಿಗೂ ಗೊತ್ತಿದೆ. ನಮಗೂ ಗೊತ್ತಿದೆ. ಮೊದಲು ಐತಿಹಾಸಿಕ ಕಾರ್ಯಕ್ರಮ ಮಾಡುವ ಮೂಲಕ ಇತಿಹಾಸದ ಪುಟ ಸೇರೋಣ ಎಂದು ತಿಳಿಸಿದರು.

ಬೆಳಗಾವಿಯು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದೆ. ಹೀಗಾಗಿ ಬೆಳಗಾವಿಯಲ್ಲಿ ದೀಪಾಲಂಕಾರ ಮಾಡಲಾಗಿದ್ದು, ಸಾರ್ವಜನಿಕರು ಈ ವೈಭವ ಕಣ್ತುಂಬಿಕೊಳ್ಳಬೇಕು ಎಂದರು.

ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಪಕ್ಷದ ದೃಷ್ಟಿಯಿಂದ ಈ ಕಾರ್ಯಕ್ರಮ ನೋಡಬೇಡಿ. ದೇಶದ ಇತಿಹಾಸ ಹಾಗೂ ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು ಎನ್ನುವುದನ್ನು ಗಮನದಲ್ಲಿಟ್ಟು ಕೊಂಡು ಈ ಕಾರ್ಯಕ್ರಮ ಮಾಡುತ್ತೇವೆ. ಹೀಗಾಗಿ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕರು ಎಂದು ಎನಿಸಿಕೊಂಡವರು ಈ ಕಾರ್ಯಕ್ರಮಕ್ಕೆ ಆಗಮಿಸಬೇಕು. ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಜನರನ್ನು ಕರೆತನ್ನಿ ಎಂದು ಹೇಳುವುದಿಲ್ಲ. ನೂರು ಜನರನ್ನು ಕರೆದುಕೊಂಡು ಬಂದರೂ ಸಾಕು. ಕಾರ್ಯಕ್ರಮ ನಡೆಯುವ ಜಾಗಗಳಿಗೆ ಭೇಟಿ ನೀಡಿ ಪೂರ್ವ ಸಿದ್ಧತೆ ಪರಿಶೀಲನೆ ಮಾಡುತ್ತಿದ್ದೇನೆ. ಇಂದು ಎಲ್ಲಾ ಸಿದ್ಧತೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಡಿ.26ರಿಂದ ಅಧಿಕೃತ ಕಾರ್ಯಕ್ರಮ ಆರಂಭವಾಗಲಿದೆ. 26ರಂದು ಬೆಳಗ್ಗೆ ಕೆಲವು ಸ್ಥಳಗಳಲ್ಲಿ ಉದ್ಘಾಟನಾ ಕಾರ್ಯಕ್ರಮಗಳಿವೆ. 1924ರಲ್ಲಿ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ಡಿ. 26ರ ಮಧ್ಯಾಹ್ನ 3 ಗಂಟೆಗೆ ನಡೆದಿತ್ತು. 26ರಂದು ಅದೇ ಸಮಯಕ್ಕೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ.

27ರಂದು ಬೆಳಗ್ಗೆ 10.30ಕ್ಕೆ ಸರ್ಕಾರದ ವತಿಯಿಂದ ಸುವರ್ಣಸೌಧ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು. ಅಂದು ಸುವರ್ಣ ಸೌಧದಲ್ಲಿ ಫೋಟೋ ಸೆಷನ್, ಭೋಜನ ಕೂಟವಿದೆ. 27ರಂದು ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದೆ ಎಂದು ಶಿವಕುಮಾರ್ ಮಾಹಿತಿ ನೀಡಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ