Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರಿನ ಶ್ರೀ ಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾ ಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಆಯೋಜಿಸಿರುವ ಕೃಷಿ ವಿಚಾರಸಂಕಿರಣದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿ, ಶುಭ ಹಾರೈಸಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳು ಮಾತನಾಡಿದರು.


ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ:
ಹಿಂದೆ ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಸಿಬಿಐ ತನಿಖೆಗೆ ಕೊಟ್ಟಿದ್ದರೆ ಈಗ ನಮ್ಮನ್ನು ಕೇಳಬಹುದಿತ್ತು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು.


ಶ್ರೀರಾಮುಲು, ಜನಾರ್ಧನ ರೆಡ್ಡಿಯವರು ಕಾಂಗ್ರೆಸ್ ನಾಯಕರ ಬಗ್ಗೆ ತುಚ್ಛವಾಗಿ ಮಾತನಾಡುತ್ತಾರೆ. ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗಿ ಗೊತ್ತಾಗುತ್ತದೆ. ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಬರಬಾರದೆಂದು ಏಕೆ ಹೇಳಿದ್ದರು? ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರುಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಈ ಬಗ್ಗೆ ವರದಿ ಕೊಟ್ಟಿದ್ದರು.

ಲೋಕಸಭಾ ಚುನಾವಣೆ ಪ್ರಚಾರಕ್ಕೆ ಹೋದಾಗ ಬಳ್ಳಾರಿಯಲ್ಲಿ ನಮಗೆ ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ್ಲ. ಕೊನೆಗೆ ಕುರುಬರ ದೇವಸ್ಥಾನದ ಬಳಿ ಸಭೆ ನಡೆಸಿದೆವು. ಇವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ಸರ್ವಾಧಿಕಾರದಲ್ಲಿ ನಂಬಿಕೆ ಇದೆ ಎನ್ನಲು ಇದೊಂದು ಉದಾಹರಣೆ ಸಾಕು. 

ಸಂಸದೀಯ ವ್ಯವಸ್ಥೆಯಲ್ಲಿ ಅವರಿಗೆ ನಂಬಿಕೆಯಿಲ್ಲ. ಗೂಂಡಾಗಿರಿ ಮಾಡುತ್ತಿದ್ದವರಿಂದ ನಾವು ಪಾಠ ಕಲಿಯಬೇಕಿಲ್ಲ. ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅದರ ಆಶಯಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ. ಬಿಜೆಪಿಯ ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ ಬಿಟ್ಟರೆ ಬೇರೇನಿದೆ?

ಅಧಿವೇಶನ ಕರೆಯಲಾಗಿದೆ:
ವರ್ಷದಲ್ಲಿ ಜಂಟಿ ಅಧಿವೇಶನ ಕಡ್ಡಾಯವಾಗಿ ಕರೆಯಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಅದಕ್ಕಾಗಿ ಕರೆದಿದ್ದೇವೆ. ಇದು ಅಧಿಕಾರ ದುರ್ಬಳಕೆ ಹೇಗಾಗುತ್ತದೆ
?

ಮನರೇಗಾ ಮೂಲಕ ಉದ್ಯೋಗ ಖಾತ್ರಿ, ಶಿಕ್ಷಣ, ಮಾಹಿತಿ ಹಕ್ಕು ಆಹಾರ ಭದ್ರತೆ ತಂದದ್ದು ಯುಪಿಎ ಸರ್ಕಾರ. ಅದನ್ನು ಹಾಳು ಮಾಡಲು ಹೊರಟಿಸುವುದನ್ನು ಖಂಡಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ. ವಿಬಿ  ಗ್ರಾಮ್ ಜಿ (ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಜೀವಿಕ ಮಿಷನ್ ಗ್ರಾಮೀಣ) ಎನ್ನುವುದು ಇದರ ಅರ್ಥ. ಕಾರ್ಯಕ್ರಮವನ್ನು ರದ್ದು ಮಾಡಬೇಕೆಂದು ಒತ್ತಾಯಿಸಲಾಗುತ್ತಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ