Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೂಕ್ತ ಪರಿಹಾರ ಘೋಷಿಸಬೇಕು-ಬಿಜೆಪಿ ನಾಯಕರು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಐಪಿಎಲ್ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಕ್ಷೇಮ ವಿಚಾರಿಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.

ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ನಿರೀಕ್ಷೆ ಮೀರಿ ಜನಪ್ರವಾಹ ಹರಿದು ಬಂದ ಹಿನ್ನೆಲೆಯಲ್ಲಿ ಉಂಟಾಗಿರುವ ದುರಂತದಲ್ಲಿ 11 ಮಂದಿಗೂ ಹೆಚ್ಚು ಅಭಿಮಾನಿಗಳು ಪ್ರಾಣ ಕಳೆದುಕೊಂಡಿರುವುದು ಹಾಗೂ ಹಲವರು ಸಾವು ಬದುಕಿನ ನಡುವೆ ಹೋರಾಡುತ್ತಿರುವುದು ಅತ್ಯಂತ ನೋವಿನ ಸಂಗತಿ. ನೂರಾರು ಸಂಖ್ಯೆಯ ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಹೃದಯವಿದ್ರಾವಕ ಘಟನೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸುವಂತಾಗಿದೆ. 

ರಾಜ್ಯ ಸರ್ಕಾರ ಈ ಕೂಡಲೇ ನೊಂದ ಕುಟುಂಬಗಳಿಗೆ ಆತ್ಮವಿಶ್ವಾಸ ತುಂಬಬೇಕು, ಸಾಂತ್ವನ ಹೇಳಬೇಕು ಹಾಗೂ ಸೂಕ್ತ ಪರಿಹಾರ ಘೋಷಿಸಬೇಕು, ಅಸ್ವಸ್ಥತೆಯಿಂದ ಚಿಕಿತ್ಸೆ ಅವಶ್ಯಕತೆ ಇರುವವರಿಗೆ ತಕ್ಷಣ ಸೂಕ್ತ ಚಿಕಿತ್ಸೆ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.

ಆರ್‌ಸಿಬಿ ವಿಜಯದ ನಂತರ ಇಡೀ ರಾಜ್ಯದಲ್ಲಿ ಬೆಂಗಳೂರೂ ಸೇರಿದಂತೆ ಕೆಲ ಪ್ರಮುಖ ನಗರಗಳಲ್ಲಿ ಜನರು ವಿಜಯೋತ್ಸವದಲ್ಲಿ ಮುಳುಗಿದ್ದು ಅಭಿಮಾನಿಗಳ ಸಂಭ್ರಮಾಚರಣೆಯ ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸಲಾಗದ ಸ್ಥಿತಿ ನಿನ್ನೆಯೇ ಉದ್ಬವಿಸಿತ್ತು. 

 ಈ ಹಿನ್ನೆಲೆಯಲ್ಲಿ ಇಂದೇ ಸಂಭ್ರಮಾಚರಣೆ ಆಚರಿಸುವ ಕುರಿತು ಸೇರಬಹುದಾದ ಜನರ ಲೆಕ್ಕಾಚಾರವನ್ನು ಅಂದಾಜಿಸಿ ಸರ್ಕಾರ ವಿವೇಚಿಸಿ ನಿರ್ಧಾರ ತೆಗೆದುಕೊಳ್ಳಬಹುದಾಗಿತ್ತು, ಆದರೆ ಆ ನಿಟ್ಟಿನಲ್ಲಿ ಮುನ್ನೆಚ್ಚರಿಕೆಯ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ಪರಿಸ್ಥಿತಿ ಕೈಮೀರುವ ಹಂತವನ್ನು ಅಂದಾಜಿಸಿ ಮತ್ತೊಂದು ದಿನಾಂಕವನ್ನು ನಿಗದಿಪಡಿಸಬಹುದಾಗಿತ್ತು,

ಆದರೆ ಆತುರದ ನಿರ್ಧಾರದಿಂದ ಈ ರೀತಿಯ ದುರ್ಘಟನೆ ಸಂಭವಿಸಿದೆ. ಇದರ ಹೊಣೆ ಯಾರು ಹೊರಬೇಕು? ಎಂಬುದನ್ನು ಸರ್ಕಾರ ವಿವೇಚಿಸಲಿ. ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ನಿಭಾಯಿಸಲಾಗದ ವೈಫಲ್ಯದ ಕುರಿತು ನ್ಯಾಯಾಂಗ ತನಿಖೆ ಮಾಡುವಂತೆ ಬಿಜೆಪಿ ನಾಯಕರು ಆಗ್ರಹ ಮಾಡಿದ್ದಾರೆ.
ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಮತ್ತಿತರರು ಇದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ