Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿಎಂ ಭೇಟಿ ಮಾಡಿದ ಬಿಜೆಪಿ ಶಾಸಕ ಮುನಿರತ್ನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜರಾಜೇಶ್ವರಿ (ಆರ್‌ಆರ್ ನಗರ) ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬಿಜೆಪಿ ಶಾಸಕ ಮುನಿರತ್ನ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು.
ವಿಶೇಷ ಅಧಿವೇಶನದ ಸಂದರ್ಭದಲ್ಲಿ ತಾವು ಮತ್ತು ದಾಸರಹಳ್ಳಿ ಕ್ಷೇತ್ರದ ಶಾಸಕ ಮುನಿರಾಜು ಅವರು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದರು.


ಈ ಭೇಟಿಯ ಪ್ರಮುಖ ಉದ್ದೇಶ ಆರ್‌ಆರ್ ನಗರ ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿರುವ ಹಲವಾರು ಅಭಿವೃದ್ಧಿ ಕಾರ್ಯಗಳ ಕುರಿತು ಮನವಿ ಸಲ್ಲಿಸುವುದಾಗಿತ್ತು.


ಮುನಿರತ್ನ ಅವರ ಹೇಳಿಕೆಯ ಪ್ರಕಾರ, ತಮ್ಮ ಕ್ಷೇತ್ರದಲ್ಲಿ ಸೇತುವೆಗಳು, ಜಾಲಹಳ್ಳಿ ಸರ್ಕಲ್, ಶಾಲೆಗಳ ನಿರ್ಮಾಣ, ಆಸ್ಪತ್ರೆ ಮತ್ತು ಈಜುಕೊಳದಂತಹ ಅನೇಕ ಕಾಮಗಾರಿಗಳು ಬಾಕಿ ಉಳಿದಿವೆ. ಈ ಯೋಜನೆಗಳೆಲ್ಲವೂ ಕಳೆದ ಮೂರು ವರ್ಷಗಳಿಂದ ಯಾವುದೇ ಪ್ರಗತಿ ಕಾಣದೆ ಸ್ಥಗಿತಗೊಂಡಿವೆ ಎಂದು ಮುನಿರತ್ನ ಅವರು ತಿಳಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಈ ವಿಚಾರವಾಗಿ ಅರ್ಧಗಂಟೆ ಸಮಯ ಕೋರಿ
ಅವರ ಕಚೇರಿಗೆ ಭೇಟಿ ನೀಡಿ ಸ್ಥಗಿತಗೊಂಡಿರುವ ಕಾಮಗಾರಿಗಳ ಸಮಗ್ರ ಪಟ್ಟಿ ಸಲ್ಲಿಸಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿ, ಕಾಮಗಾರಿಗಳನ್ನು ಆದಷ್ಟು ಬೇಗ ಪ್ರಾರಂಭಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದ್ದಾರೆ.
ಡಿಸಿಎಂ ಅವರು ನೀಡಿರುವ ಭರವಸೆಯ ಮೇಲೆ ತಮಗೆ ಸಂಪೂರ್ಣ ವಿಶ್ವಾಸವಿದ್ದು
, ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಳ್ಳುತ್ತವೆ ಎಂದು ಮುನಿರತ್ನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ನನ್ನ ಕ್ಷೇತ್ರದ ಅಭಿವೃದ್ಧಿ ಬಿಟ್ಟರೆ ಬೇರೆ ಎರಡನೇ ಮಾತು ಯಾವುದು ಇಲ್ಲ. ನನ್ನ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಯಾರ ಕಾಲು ಬೇಕಾದರೂ ಹಿಡಿಕೊಳ್ತೀನಿ ಅಂತ ನಾನು ಹಿಂದೆ ಒಂದು ಸಾರಿ ಹೇಳಿದ್ದೆ. ನಾನು ಎಲ್ಲಿ ಬೇಕಾದರೂ ಬಂದು ಬೇಡಿಕೊಳ್ಳಲು ಸಿದ್ಧನಾಗಿದ್ದೇನೆ ಎಂದು ಮುನಿರತ್ನ ಹೇಳಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ