Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ವಿರೋಧಿಸಿ ಬಿಜೆಪಿ ಪ್ರತಿಭಟನೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುಸ್ಲಿಂರಿಗೆ ಶೇ-4ರಷ್ಟು ಗುತ್ತಿಗೆಯಲ್ಲಿ ಮೀಸಲಾತಿ ನೀಡಿರುವುದನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಚಿತ್ರದುರ್ಗ ಜಿಲ್ಲಾ ಘಟಕ ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿಯ ಒನಕೆ ಓಬ್ಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.


ಈ ಸಂದರ್ಭದಲ್ಲಿ ಸರ್ಕಾರದ ವಿರುದ್ದ ಘೋಷಣೆ ಕೂಗಲಾಯಿತು, ಮುಖ್ಯಮಂತ್ರಿ ಸಿದ್ದರಾಮಯ್ಯರವರ ನಡುವಳಿ ಖಂಡಿಸಿದ ಪ್ರತಿಭಟನಾಕಾರರು ಸಿದ್ದರಾಮಯ್ಯ ಮತ್ತು ಅವರ ಸರ್ಕಾರದ ವಿರುದ್ದ ಭಿತ್ತಿ ಪತ್ರ ಹಿಡಿದು ಘೋಷಣೆ ಕೂಗಿದರು.

ರಾಜ್ಯ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಮಾತನಾಡಿ, ಸಿದ್ದರಾಮಯ್ಯ ನೇತೃತ್ವ ಸರ್ಕಾರ ಅಡಳಿತಕ್ಕೆ ಬಂದಾಗಿನಿಂದಲೂ ಪರಿಶಿಷ್ಟ ವರ್ಗ ಮತ್ತು ಪಂಗಡವನ್ನು ನಿರ್ಲಕ್ಷ್ಯ ಮಾಡುತ್ತಾ ಬಂದಿದ್ದಾರೆ. ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಂಡಿದ್ದಾರೆ. ಈಗ ಟೆಂಡರ್ ವಿಚಾರದಲ್ಲಿಯೂ ಮುಖ್ಯಮಂತ್ರಿಗಳು ಒಂದು ವರ್ಗದ ಓಲೈಕೆಗೆ ಮುಂದಾಗಿದ್ದಾರೆ. ಟೆಂಡರ್‌ನ್ನು ಎಲ್ಲಾ ವರ್ಗದವರು ಮಾಡುತ್ತಾ ಬಂದಿದ್ದಾರೆ. ಈಗ ಹೂಸದಾಗಿ ಮುಸ್ಲಿಂ ಜನರನ್ನು ಓಲೈಕೆ ಮಾಡುವುದಕ್ಕಾಗಿ ಟೆಂಡರ್‌ನಲ್ಲಿ ಅವರಿಗಾಗಿ ಮೀಸಲಾತಿ ನೀಡಿದ್ದಾರೆ. ಇದು ಸರಿಯಾದ ಕ್ರಮವಲ್ಲ, ಸರ್ಕಾರ ಹಿಂಪಡೆಯಬೇಕು ಇಲ್ಲವಾದಲ್ಲಿ ಬಿಜೆಪಿ ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸುತ್ತದೆ ಎಂದು ಎಚ್ಚರಿಸಿದರು.

ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಮಲ್ಲಿಕಾರ್ಜನ್ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರ್ಕಾರವಾಗಿದೆ. ಪದೇ ಪದೇ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತ್ತಾ ಬಂದಿದೆ. ಮುಸ್ಲಿಂರನ್ನು ಓಲೈಕೆ ಮಾಡುವುದಕ್ಕಾಗಿ ಇದನ್ನು ಜಾರಿ ಮಾಡಲಾಗಿದೆ. ಇದರಿಂದ ಸಮಾಜದಲ್ಲಿ ಭಿನ್ನಾಭಿಪ್ರಾಯಗಳು ಮೂಡಿ ಬರುತ್ತವೆ. ಇದರಿಂದ ರಾಜ್ಯದಲ್ಲಿ ಅಶಾಂತಿ ವಾತಾವರಣ ಉಂಟಾಗುತ್ತದೆ ಇದಕ್ಕೆ ಸಿದ್ದರಾಮಯ್ಯರವರು ಅವಕಾಶ ನೀಡಬಾರದು ಈ ಕೂಡಲೇ ಮುಸ್ಲಿಂರಿಗೆ ನೀಡಿರುವ ಮೀಸಲಾತಿ ಹಿಂಡೆಪಯಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಖಜಾಂಚಿ ಮಾಧುರಿ ಗೀರೀಶ್, ರಾಜ್ಯ ಮಹಿಳಾ ಮೋರ್ಚಾದ ಕಾರ್ಯದರ್ಶಿ ಶ್ಯಾಮಲಾ ಶಿವಪ್ರಕಾಶ್, ಮುಖಂಡರಾದ ಕುಮಾರಸ್ವಾಮಿ, ಜಿಪಂ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್, ಜಿಲ್ಲಾ ಎಸ್.ಟಿ ಮೋರ್ಚಾ ಅಧ್ಯಕ್ಷ ಶಿವಣ್ಣ, ಎಸ್.ಸಿ.ಮೋರ್ಚಾ ಅಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಮಹಿಳಾ ಮಂಡಲದ ಅಧ್ಯಕ್ಷೆ ಶೈಲಜಾರೆಡ್ಡಿ, ನಾಯಕನಹಟ್ಟಿ ಮಂಡಲ ಅಧ್ಯಕ್ಷ ಮಲ್ಲೇಶ್, ರಾಜ್ಯ ಓಬಿಸಿ ಮೋರ್ಚಾ ಉಪಾಧ್ಯಕ್ಷ ಶಿವಕುಮಾರ್, ವಕ್ತಾರ ನಾಗರಾಜ್ ಬೇದ್ರೆ, ವಕ್ತಾರ ದಗ್ಗೆ ಶಿವಪ್ರಕಾಶ್, ಮೊಳಕಾಲ್ಮೂರು ಮಂಡಲ ಅಧ್ಯಕ್ಷ ಶ್ರೀರಾಮರೆಡ್ಡಿ, ಪದಾಧಿಕಾರಿಗಳಾದ ಶಾಂತಮ್ಮ, ಚಂದ್ರಿಕಾ ಲೋಕನಾಥ್, ಗಾಯತ್ರಿದೇವಿ, ವೀಣಾ, ಕಾಂಚನ, ಸುಮಾ, ಕಿರಣ್, ಯಶವಂತ, ಚಳ್ಳಕೆರೆ ಮಂಡಲ ಅಧ್ಯಕ್ಷ ಸುರೇಶ್, ಕಲ್ಲೇಶಯ್ಯ, ನಾಗರಾಜ್ ಪಾಂಡು ಓಬಿಸಿ ಮೋರ್ಚಾದ ಪ್ರಶಾಂತ್ ಶಂಭು ಸೇರಿದಂತೆ ಇತರರು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ