Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ನ ಏಕಸದಸ್ಯ ನ್ಯಾಯಪೀಠ
  ವಜಾಗೊಳಿಸಿದೆ. ಈ ಸಂಬಂಧ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಲಾಗಿದೆ ಎಂದು  ಆಂಧ್ರಪ್ರದೇಶದ ಬಿ.ಜೆ.ಪಿ ಎಂಎಲ್ಸಿ  ಪೊಂಗುಲೆಟ್ಟಿ ಸುಧಾಕರ್ ರೆಡ್ಡಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದರು.

 ನಗರದ ಮಾರುಕಟ್ಟೆ ಚೌಕದಲ್ಲಿ ನಡೆದ  ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದ ಹೈಕೋರ್ಟ್ನ ತೀರ್ಪು ಸ್ವಾಗತಾರ್ಹ. ಈಗಾಲಾದರೂ ನೈತಿಕತೆಯ ಹೊಣೆ ಹೊತ್ತು ರಾಜೀನಾಮೆ ನೀಡಲಿ 

ರಾಜ್ಯದಲ್ಲಿ ವಾಲ್ಮೀಕಿ ಹಗರಣ. ಮೂಡಹಗರಣ ಸೇರಿದಂತೆ ಹಗರಣಗಳಲ್ಲೇ ಸರಕಾರ ತುಂಬಿ ಹೋಗಿದೆ. ಕಾಂಗ್ರೆಸ್  ಪಕ್ಷಕ್ಕೆ ರಾಜ್ಯದ ಜನರು  ಮುಂದಿನದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

 ಬಲಿಷ್ಠವಾದ ಆರ್ಥಿಕತೆಯ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಪಕ್ಷದ ಸದಸ್ಯತ್ವ ಪಡೆದು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದು ಸ್ಥಳೀಯವಾಗಿ ಬಿಜೆಪಿ ಪಕ್ಷದ  ಶಾಸಕರಿದ್ದು ಲೋಕಸಭಾ ಕ್ಷೇತ್ರವು ಕೂಡ ಬಿಜೆಪಿಯ ಸಂಸದರು ಇದ್ದಾರೆ ಈ ನಿಟ್ಟಿನಲ್ಲಿ ಈ ಭಾಗದಲ್ಲಿ ಕಾರ್ಯಕರ್ಯರು ಅತ್ಯಂತ ಚುರಕಿನಿಂದ ಕಾರ್ಯನಿರ್ವಹಿಸಿ ಬಿಜೆಪಿ ಪಕ್ಷದ ಸದಸ್ಯತ್ವದ ಪ್ರಮಾಣವನ್ನು ಹೆಚ್ಚಿನ ರೀತಿಯಲ್ಲಿ ಮಾಡಬೇಕು. ಬಿಜೆಪಿ ಪಕ್ಷಕ್ಕೆ ದೇಶವೇ ಮೊದಲು ಈ ನಿಟ್ಟಿನಲ್ಲಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಸದಸ್ಯರ ಸಂಖ್ಯೆ ಅಧಿಕವಾಗುತ್ತಿದೆ. ಆದರೇ ಕಾಂಗ್ರೆಸ್ ಪಕ್ಷದಲ್ಲಿ  ಕುಟುಂಬ ಮೊದಲು  ಎಂದು ವ್ಯಂಗವಾಡಿದರು.

 ಶಾಸಕ ಧೀರಜ್ ಮುನಿರಾಜು ಮಾತನಾಡಿಇಂದು ಹೈಕೋರ್ಟ್  ನೀಡುವ  ಆದೇಶವು ವಿಜೇಯಂದ್ರ  ನೇತೃತ್ವದ ನಡೆದ  ಪಾದಯಾತ್ರಗೆ  ಸಂದ ಜಯ. ಈ ಕೂಡಲೇ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೇ ನೀಡಬೇಕು ನಿನ್ನೆ ನಡೆದ ನಗರ ಸಭಾ ಚುನಾವಣೆ ಬಿಜೆಪಿಯ ಪಾಲಾಗಿದೆ ಈ ನಿಟ್ಟಿನಲ್ಲಿ  ಸ್ಥಳೀಯವಾಗಿ ಪಕ್ಷವನ್ನು ಸಂಘಟಿಸಲು ಸಹ ಉತ್ತಮವಾದ ವಾತವರಣವಿದೆ ಎಂದು ಕಾರ್ಯಯರ್ತರಿಗೆ ಕರೆ ನೀಡಿದರು.

 ಈ ವೇಳೆ  ಬಿಜೆಪಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ನಗರ ಸಭಾ ಸದಸ್ಯರಾದ ಪದ್ಮನಾಭ್, ಭಾಸ್ಕರ್, ಮುಖಂಡರಾ. ವತ್ಸಲ, ಮುದ್ದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು