Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಹಾಗೂ ಫಾರಂ
7 ವಿಚಾರದಲ್ಲಿ ರಾಜ್ಯ ಸರ್ಕಾರವೇ ಅರಾಜಕತೆ ಸೃಷ್ಟಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.

ಚುನಾವಣಾ ಆಯುಕ್ತರ ನೇಮಕ: ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರನ್ನು ನೇಮಕ ಮಾಡಿದ್ದೇ ರಾಜ್ಯ ಸರ್ಕಾರ. ಹೀಗಿರುವಾಗ ಪ್ರತಿ ಕ್ಷೇತ್ರದಲ್ಲೂ ಅಹಿಂದ ಮತಗಳನ್ನು ಕೈಬಿಡಲಾಗಿದೆ ಎಂದು ಸಿಎಂ ಆರೋಪಿಸುವುದು ಕಪಟ ನಾಟಕ ಎಂದು ಟೀಕಿಸಿದ್ದಾರೆ.

Advertisement

 ಬಿಎಲ್ಒಗಳು ಸರ್ಕಾರದ ಅಡಿಯಲ್ಲಿ: ಚುನಾವಣಾ ಆಯೋಗ ನೀಡಿರುವ 'ಫಾರಂ 7' ಹಕ್ಕನ್ನು ಬಳಸಿಕೊಳ್ಳಲಾಗಿದೆ. ಕೆಲಸ ಮಾಡುತ್ತಿರುವ ಬಿಎಲ್ಒಗಳು ಕೇಂದ್ರ ಸರ್ಕಾರದ ನೌಕರರಲ್ಲ, ರಾಜ್ಯ ಸರ್ಕಾರದ ಅಡಿಯಲ್ಲಿ ಬರುವವರೇ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ವೈಫಲ್ಯ: ಬಸ್ ಟಿಕೆಟ್ ದರ ಏರಿಕೆ, ಅಬಕಾರಿ ಇಲಾಖೆಯ ಆದಾಯ ಹೆಚ್ಚಳದ ಮೂಲಕ ಕರ್ನಾಟಕವನ್ನು ಕುಡುಕರ ರಾಜ್ಯವನ್ನಾಗಿ ಮಾಡಲಾಗಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಸುದ್ದಿಯ ವಿವರಣೆ ಧಾರವಾಡದಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.   SIR ಮತ್ತು ಫಾರಂ 7 ಕುರಿತು:"SIR ಹಾಗೂ ಫಾರಂ 7 ವಿಚಾರದಲ್ಲಿ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಿರುವ ಕಾಂಗ್ರೆಸ್ ನಾಯಕರು, ಚುನಾವಣಾ ಆಯೋಗದ ಮುಂದೆ ಪ್ರತಿಭಟನೆ ಮಾಡುವ ಕಪಟ ನಾಟಕವಾಡುತ್ತಿದ್ದಾರೆ.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ರಿಂದ 10 ಸಾವಿರ ಅಹಿಂದ ಮತಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಸಿಎಂ ಆರೋಪಿಸುತ್ತಿದ್ದಾರೆ. ಆದರೆ, ಈ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರನ್ನು ನೇಮಕ ಮಾಡಿದ್ದು ಸ್ವತಃ ರಾಜ್ಯ ಸರ್ಕಾರವೇ ಅಲ್ಲವೇ?" ಎಂದು ಪ್ರಶ್ನಿಸಿದರು. ಅಲ್ಲದೆ, ಬಿಎಲ್ಒಗಳು ರಾಜ್ಯ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿರುವವರೇ ಹೊರತು ಕೇಂದ್ರ ಸರ್ಕಾರದ ನೌಕರರಲ್ಲ ಎಂದರು.

ಕೇರಳದಲ್ಲಿ SIR ಪ್ರಕ್ರಿಯೆಯ ನಂತರವೇ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂದು ಅಲ್ಲಿನ ಸಂಸದ ಶಶಿ ತರೂರೇ ಹೇಳಿದ್ದಾರೆ ಎಂಬುದನ್ನು ಈ ಸಂದರ್ಭದಲ್ಲಿ ನೆನಪಿಸಿದರು.

ಪ್ರಿಯಾಂಕ್ ಖರ್ಗೆ ಹಾಗೂ ಕಾನೂನು ಸುವ್ಯವಸ್ಥೆ ಕುರಿತು: ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, "ಕಲಬುರಗಿ ಈಗ ರಿಪಬ್ಲಿಕ್ ಆಫ್ ಕಲಬುರಗಿ ಆಗಿದೆ. ನಿಮ್ಮ ಕಪಿಮುಷ್ಠಿಯಲ್ಲಿರುವ ಅಲ್ಲಿ ಎಷ್ಟು ಕೊಲೆಗಳಾಗಿವೆ? ಸುಪಾರಿ ಕಿಲ್ಲರ್‌‌ಗಳನ್ನು ಸೃಷ್ಟಿಸುತ್ತಿರುವ ನಿಮ್ಮಿಂದ ನಾವು ಕಾನೂನು ಪಾಠ ಕಲಿಯಬೇಕಿಲ್ಲ. ನಿಮ್ಮ ಬೆದರಿಕೆಗೆ ನಾವು ಹೆದುರುವುದಿಲ್ಲ" ಎಂದು ಗುಡುಗಿದರು.

ಬೆಲೆ ಏರಿಕೆ ಮತ್ತು ಅಬಕಾರಿ ಆದಾಯದ ಬಗ್ಗೆ ಟೀಕೆ: ಕೆಎಸ್‌ಆರ್‌ಟಿಸಿ ಎಂಡಿ ಅವರಿಂದಲೇ ಸರ್ಕಾರಕ್ಕೆ 6.5 ಸಾವಿರ ಕೋಟಿ ರೂ. ಬಾಕಿ ಇದೆ ಎಂದು ಪತ್ರ ಬರೆದಿರುವುದನ್ನು ಉಲ್ಲೇಖಿಸಿದ ಅವರು, "ರಾಜ್ಯ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಬಿಟ್ಟು ಬೇರೆ ಯಾವುದೇ ಸಾಧನೆ ಮಾಡಿಲ್ಲ. ಗ್ಯಾರಂಟಿ ಯೋಜನೆಗಳಿಗಾಗಿ ಅಬಕಾರಿ ಇಲಾಖೆಗೆ ಗುರಿ ನೀಡಿ 11 ಸಾವಿರ ಕೋಟಿ ರೂ. ಗೂ ಅಧಿಕ ಆದಾಯ ಹೆಚ್ಚಿಸುವುದರ ಮೂಲಕ ಕರ್ನಾಟಕವನ್ನು ಕುಡುಕರ ರಾಜ್ಯವನ್ನಾಗಿ ಬದಲಾಯಿಸಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷೇತರ ಅಭ್ಯರ್ಥಿ ಬೆಂಬಲ: ಯತ್ನಾಳ್ ಅವರು ಪಕ್ಷೇತರ ಅಭ್ಯರ್ಥಿ ಕಾಂತಕುಮಾರ್ ಅವರನ್ನು ಬೆಂಬಲಿಸಿರುವ ಕುರಿತು ಮಾತನಾಡಿ, ಸದ್ಯ ಅವರು ನಮ್ಮ ಪಕ್ಷದಲ್ಲಿಲ್ಲ, ರಾಜಕಾರಣ ಬೇರೆ ಪ್ರತಿಭಟನೆ ಬೇರೆ, ಇದರಿಂದ ಪಕ್ಷಕ್ಕೆ ಯಾವುದೇ ಎಫೆಕ್ಟ್ ಆಗುವುದಿಲ್ಲ ಎಂದರು.

ಪಶ್ಚಿಮ ಪದವೀಧರ ಕ್ಷೇತ್ರ: ನಮ್ಮ ಅಭ್ಯರ್ಥಿ ಸಂಕನೂರ ಅವರು ಎರಡು ಬಾರಿ ಎಂಎಲ್ಸಿಯಾಗಿ ಪದವೀಧರರ ಪರ ಧ್ವನಿಯೆತ್ತಿದ್ದಾರೆ. ಈ ಬಾರಿಯೂ ಕೇಂದ್ರ ಸಚಿವರು, ಶಾಸಕರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸುತ್ತಿದ್ದು, ಹ್ಯಾಟ್ರಿಕ್ ಗೆಲುವು ನಮ್ಮದಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಚಾರಿಕತೆಯ ದಾರಿದೀಪ: ಡಾ. ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಅಮೃತ ಮಹೋತ್ಸವಪತ್ರಕರ್ತರ ಮೇಲೆ ಹಲ್ಲೆ, ಮಹಿಳಾ ಪತ್ರಕರ್ತೆಗೆ ಕಿರುಕುಳ: ಕೆಯುಡಬ್ಲ್ಯೂಜೆ ಖಂಡನೆಲವರ್‌ಬಾಯ್‌ಅವತಾರದಲ್ಲಿ ಬರುತ್ತಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ:  ಹೊಸ ಸಿನಿಮಾ 'ಕೆಮಿಸ್ಟ್ರಿ'!ಗಾಜಾ ಪ್ರತೀಕಾರಕ್ಕಾಗಿ ಕೃತ್ಯ ಎಸಗಿರುವುದಾಗಿ ಸಹ-ಪೈಲಟ್ ಒಮಾನ್ ಒಪ್ಪಿಗೆ!ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ವೇಳೆ ಸಂವಿಧಾನ ಪ್ರಸ್ತಾವನೆ ಪಠಣ ಕಡ್ಡಾಯ ಕೋರಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ!ಇಂಡಿಯಾ ಬಣದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಬೃಹತ್ ಪಾದಯಾತ್ರೆಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ 1 ಕೋಟಿ ನಗದು ಪುರಸ್ಕಾರ, ಸರ್ಕಾರಿ ಹುದ್ದೆಗಳಲ್ಲಿ ಶೇ. 2 ಮೀಸಲಾತಿ: ಸರ್ಕಾರ!ಪವಿತ್ರಾ ಗೌಡಗೆ ಬ್ಯಾರಕ್ ಬದಲಾವಣೆ ಮಾಡದ ಜೈಲಾಧಿಕಾರಿಗಳ ವಿರುದ್ಧ ಕೋರ್ಟ್ ಗರಂ!'ಇಂಡಿಯಾ' ಒಕ್ಕೂಟ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಪ್ರಮುಖ ನಾಯಕರು ವಶಕ್ಕೆ!ಪಂಚಮಸಾಲಿ ಮಠದಲ್ಲಿ ಅಕ್ಟೋಬರ್‌31ರವರೆಗೆ ನಿಷೇಧಾಜ್ಞೆ; ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ