Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾನ ಬಹಿಷ್ಕರಿಸಿದ್ದ ಮನೆಗಳ ಮೇಲೆ ಜನವರಿ 26ರಂದು ಕಪ್ಪು ಬಾವುಟ ಪ್ರದರ್ಶನ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಸಮಿತಿ ಮುಖಂಡ ಸತೀಶ್ ಮಾತನಾಡಿ
, ಜ.26 ರಂದು ಎರಡೂ ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲು ಸಮಿತಿಯ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ಪಡೆಯಲಾಗಿದೆ. ಸಹಿ ಸಂಗ್ರಹ ಮಾಡುವ ಮೂಲಕ ತಹಶೀಲ್ದಾರ್ ಹಾಗೂ ಪೊಲೀಸರಿಗೆ ಸಲ್ಲಿಸಲಾಗಿದೆ. ಈ ಹಿಂದೆ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು. 

 ಈ ಸಮಯದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಗಳಲ್ಲಿ ಸಭೆ ನಡೆಸಿ ನೀಡಲಾಗಿದ್ದ ಯಾವುದೇ ಭರವಸೆಯು ಇದುವರೆಗೂ ಈಡೇರಿಲ್ಲ. ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ದೊಡ್ಡಬಳ್ಳಾಪುರದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಿಯ ಕಚೇರಿಯನ್ನು ನಗರಕ್ಕೆ ಸ್ಥಳಾಂತರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉರುಳು ಸೇವೆ ಮಾಡಿದರು ಇದುವರೆಗೂ ಸ್ಥಳಾಂತರ ಆಗಿಲ್ಲ.ಇಂತಹ ಕನಿಷ್ಠ ಸಮಸ್ಯೆಗಳನ್ನು ಇತ್ಯರ್ಥ ಪಡಿಸುವಲ್ಲೂ ಸಹ ಜನಪ್ರತಿನಿಧಿಗಳು, ಜಿಲ್ಲಾಡಳಿತ ವಿಫಲವಾಗಿದೆ. ಈ ಎಲ್ಲಾ ಕಾರಣದಿಂದ ಗಣರಾಜ್ಯೋತ್ಸವ ದಿನದಂದು ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲಾಗುವುದು ಎಂದರು.

 ನಮ್ಮ ಭಾಗದಲ್ಲಿ ತಿಂಗಳಿಗೆ ಎರಡು‌ಮೂರು ಸಾವುಗಳು ಆಗುತ್ತಿವೆ. ಈ ಸಾವು ಸಹಜವಾಗಿ ಬರುತ್ತಿಲ್ಲ. ಬದಲಿಗೆ ಕಿಡ್ನಿ‌ಸಮಸ್ಯೆ, ಕ್ಯಾನ್ಸರ್, ಶ್ವಾಸಕೋಶ ಸಮಸ್ಯೆ ಸೇರಿದಂತೆ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿ ಅಕಾಲಿಕ ಮರಣ ಹೊಂದುತ್ತಿದ್ದಾರೆ. ಇದಕ್ಕೆ ಕಾರಣ ಅಶುದ್ಧ ಕುಡಿಯುವ ನೀರಿನಿಂದ, ಕೆರೆಗಳ ಮಾಲಿನ್ಯದಿಂದ ಎಂದರು.

 ದೊಡ್ಡಬಳ್ಳಾಪುರ ನಗರಸಭೆ ಯುಜಿಡಿ‌ನೀರು, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ‌ಯುಜಿಡಿ ನೀರು ಮೂರನೇ ಹಂತದಲ್ಲಿ ಶುದ್ಧೀಕರಣಗೊಂಡು ಕೆರೆಗಳಿಗೆ ಬರುವಂತೆ ಮಾಡಬೇಕು

  ಅಂರ್ಜಲ ಹದಗೆಡದೇ ಇರುವ ಭಾಗದಿಂದ ಜನರಿಗೆ ಶುದ್ಧ ಕುಡಿಯುವ ನೀರು, ಜನ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಬೇಕು.

ಮಳೆ ನೀರು ಕೊಯ್ಲು ವ್ಯವಸ್ಥೆ ಮಾಡಬೇಕು-
ಕೈಗಾರಿಕಾ ಪ್ರದೇಶದಲ್ಲಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕ ಸ್ಥಾಪನೆ ಮಾಡಿ, ಕೈಗಾರಿಕೆಗಳ ತ್ಯಾಜ್ಯ ನೀರನ್ನು ಶುದ್ಧೀಕರಿಸಿ ಕೊಂಡು ಅವರೇ ಆ ನೀರನ್ನು ಕೆರೆಗಳಿಗೆ ಬಿಡದೇ ಮರು ಬಳಿಕೆ‌ಮಾಡಿಕೊಳ್ಳುವಂತೆ ನೋಡಿಕೊಳ್ಳಬೇಕು.

ಈ ಎಲ್ಲಾ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸು ವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಸಮಿತಿ ಹೋರಾಟಗಾರರು ಎಚ್ಚರಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ