Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರತಿಷ್ಟಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾನವಾಗಿರುವ ಖ್ಯಾತ ಸಾಹಿತಿ ಮತ್ತು ಪತ್ರಕರ್ತೆ ಬಾನುಮುಷ್ತಾಕ್ ಮತ್ತು ಅನುವಾದಕಿ ದೀಪಾ ಭಸ್ತಿ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಅಭಿನಂದಿಸಿದೆ.


ಸಣ್ಣ ಕಥೆಗಳ ಅನುವಾದಿತ ಸಂಕಲನ ಹಾರ್ಟ್ ಲ್ಯಾಂಪ್’ (ಹೃದಯ ದೀಪ)ಕೃತಿ  ಅಂತಿಮ ಸುತ್ತಿಗೆ ಆಯ್ಕೆಯಾದ ಸಂದರ್ಭದಲ್ಲಿಯೇ ಹಾಸನದಲ್ಲಿ ಬಾನು ಮುಷ್ತಾಕ್ ಅವರನ್ನು ಅಭಿನಂದಿಸಿ ಶುಭ ಕೋರಿದ್ದನ್ನು ನೆನಪಿಸಿರುವ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಲಂಡನ್ ನಲ್ಲಿ ಬೂಕರ್ ಪ್ರಶಸ್ತಿ ಘೋಷಣೆ ಮಾಡಿದ ಕ್ಷಣ, ಕನ್ನಡಿಗರ ಪಾಲಿಗೆ ಹೆಮ್ಮೆಯ ಅಮೃತ ಘಳಿಗೆಯಾಗಿದೆ ಎಂದು ಶ್ಲಾಘಿಸಿದ್ದಾರೆ.

ಪಿ.ಲಂಕೇಶ್ ಪತ್ರಿಕೆಗೆ ಹಾಸನದ ವರದಿಗಾರರಾಗಿದ್ದ ಭಾನುಮುಷ್ತಾಕ್ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದರು. ವಕೀಲರಾಗಿ, ನಗರಸಭೆ ಸದಸ್ಯರಾಗಿ ಹಾಗೂ ಪ್ರಗತಿಪರ ಸಾಹಿತಿಯಾಗಿ ಗುರುತಿಸಿಕೊಂಡವರು. ಅನ್ಯಾಯದ ವಿರುದ್ದ ಧ್ವನಿ ಎತ್ತಿದವರು.

ಸಂಘ ಸಂಸ್ಥೆಗಳಲ್ಲಿ ಸಂಘಟಕಿಯಾಗಿಯೂ ಕೆಲಸ ಮಾಡಿದವರು. ಅವರ ಹೃದಯ ದೀಪ ಕೃತಿ ಬೂಕರ್ ಪ್ರಶಸ್ತಿಯನ್ನು ಗೆದ್ದಿರುವುದು ಕನ್ನಡಿಗರ ಹೃದಯ ಗೆದ್ದಂತಾಗಿದೆ. ಹೃದಯ ದೀಪ, ಕನ್ನಡದ ದೀಪವಾಗಿ ಜಗದೆಲ್ಲೆಡೆ ಪ್ರಜ್ವಲಿಸಲಿ ಎಂದು ಅವರು ಶುಭ ಹಾರೈಸಿದ್ದಾರೆ.

ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿದ ಹಸೀನಾ ಚಲನಚಿತ್ರ ಕಥೆ ಕೂಡ ಬಾನುಮುಷ್ತಾಕ್ ಅವರ ಹಸೀನಾ ಮತ್ತು ಇತರ ಕಥೆಗಳಿಂದಲೇ ಆಯ್ಕೆ ಮಾಡಿದ್ದು. ಹಸೀನಾ ಚಿತ್ರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಿದ ಸಂದರ್ಭದಲ್ಲಿ ಇಡೀ ತಂಡವನ್ನು ಹಾಸನಕ್ಕೆ ಆಹ್ವಾನಿಸಿದ್ದ,

ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕಲಾಭವನದಲ್ಲಿ ಏರ್ಪಡಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸನ್ಮಾನಿಸಿತ್ತು. ಕೆಲ ಘಟನೆಗಳ ಸಂಕಷ್ಟದ ಸಂದರ್ಭದಲ್ಲಿಯೂ ಬಾನುಮುಷ್ತಾಕ್ ಅವರ ಜೊತೆಗೆ ಬೆಂಬಲವಾಗಿ ನಿಂತಿದ್ದು ಮರೆಯಲಾಗದ ಕ್ಷಣ ಎನ್ನುವುದನ್ನು ಶಿವಾನಂದ ತಗಡೂರು ಅವರು ಸ್ಮರಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ