Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೂತ್ ಮಟ್ಟದ ಏಜೆಂಟರ ಕಾರ್ಯಾಗಾರ ಯಶಸ್ವಿ-ನಿಖಿಲ್ ಅಭಿನಂದನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ದೊಡ್ಡಬಳ್ಳಾಪುರ:
ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತಾದ ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಪಕ್ಷದ ಮುಖಂಡರಿಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

​ಪಕ್ಷದ ಬಲವರ್ಧನೆ ಹಾಗೂ ಮತದಾರರ ಪಟ್ಟಿ ಸರಿಪಡಿಸುವ ನಿಟ್ಟಿನಲ್ಲಿ ಈ ಕಾರ್ಯಾಗಾರ ಅತ್ಯಂತ ಪ್ರಮುಖವಾಗಿದ್ದು, ಸಭೆಯನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಿದ ಪ್ರಮುಖ ನಾಯಕರಿಗೆ ಅವರು ಧನ್ಯವಾದ ತಿಳಿಸಿದ್ದಾರೆ.

​ನಾಯಕರಿಗೆ ನಿಖಿಲ್ ಕುಮಾರಸ್ವಾಮಿ ಶ್ಲಾಘನೆ:
​ಕಾರ್ಯಾಗಾರವನ್ನು ಯಶಸ್ವಿಯಾಗಿ ಮುನ್ನಡೆಸಿದ ಜೆಡಿಎಸ್ ತಾಲ್ಲೂಕು ಅಧ್ಯಕ್ಷರಾದ ಶ್ರೀ ಎಸ್.ಎಂ. ಹರೀಶ್ ಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶ್ರೀ ಕೆ.ವಿ. ಮಂಜುನಾಥ್, ಬಿಎಲ್ಎ-1 ಆಗಿ ಜವಾಬ್ದಾರಿ ನಿಭಾಯಿಸಿದ ಶ್ರೀ ಬಿ.ಎನ್. ನಟರಾಜ್ ಹಾಗೂ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸೂಕ್ತ ಮಾರ್ಗದರ್ಶನ ನೀಡಿದ ಶ್ರೀ ಪ್ರದೀಪ್ ಕುಮಾರ್ ಅವರಿಗೆ ನಿಖಿಲ್ ಕುಮಾರಸ್ವಾಮಿ ಅವರು ವಿಶೇಷವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

​ಕ್ಷೇತ್ರದಾದ್ಯಂತ ಪಕ್ಷದ ಸಂಘಟನೆಗೆ ಶ್ರಮಿಸುತ್ತಿರುವ ಮತ್ತು ಈ ಪ್ರಮುಖ ಸಭೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ ಪಕ್ಷದ ಎಲ್ಲಾ ಹಿರಿಯ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತ ಬಂಧುಗಳಿಗೆ ಅವರು ತಮ್ಮ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

 

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.