Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

20 ವರ್ಷ ಮೇಲ್ಪಟ್ಟ ವಾಹನಗಳಿಗೆ ಬ್ರೇಕ್: ಜಿಲ್ಲಾಧಿಕಾರಿ ವೆಂಕಟೇಶ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
20
ವರ್ಷ ಮೇಲ್ಪಟ್ಟ ವಾಹನಗಳಿಗೆ ಬ್ರೇಕ್ ಕಡ್ಡಾಯವಾಗಿ ತಡೆಯೊಡ್ಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಗಣಿಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಅದಿರು ಹಾಗೂ ಖನಿಜಗಳನ್ನು ಸಾಗಣೆ ಮಾಡುವ ವಾಹನಗಳನ್ನು ತಪಾಸಣೆ ಮಾಡಬೇಕು. 20 ವರ್ಷ ಮೇಲ್ಪಟ್ಟ ವಾಹನಗಳ ಎಫ್.ಸಿ ನವೀಕರಣಗೊಳಿಸಬಾರದು, ಅಂತಹ ವಾಹನಗಳು ಕಾರ್ಯಾಚರಣೆ ಮಾಡುತ್ತಿದ್ದಲ್ಲಿ ಅವುಗಳ ಸಂಚಾರಕ್ಕೆ ತಡೆ ಒಡ್ಡಬೇಕು.

ಅನುಮತಿಸಿದ ತೂಕಕ್ಕಿಂತ ಹೆಚ್ಚಿನ ಅದಿರು ಸಾಗಾಟ ಮಾಡುವ ವಾಹನಗಳನ್ನು ತಡೆದು, ದಂಡ ವಿಧಿಸಬೇಕು. ಅದಿರನ್ನು ವಶಪಡಿಸಿಕೊಂಡು ವಾಹನ ಜಪ್ತಿ ಮಾಡುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲೆಯಲ್ಲಿ 335ಕ್ಕೂ ಹೆಚ್ಚು ಅದಿರು ಸಾಗಾಣಿಕೆಯ ಭಾರಿ ವಾಹನಗಳು ಇದ್ದು, ಇದರಲ್ಲಿ 18 ವಾಹನಗಳು 20 ವರ್ಷ ಪೂರೈಸಿವೆ. 268 ವಾಹನಗಳು 15 ವರ್ಷ ಪೂರೈಸಿವೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೆ ಸಿಂಘೆ ಸಭೆಯಲ್ಲಿ ಮಾಹಿತಿ ನೀಡದರು. 

ಕ್ರಷರ್ಗಳ ನಿಯಮ ಪಾಲನೆ ಮಾಡಲಿ:
ಕಲ್ಲು ಪುಡಿ ಮಾಡುವ ಘಟಕ (ಕ್ರಷರ್)ಗಳು ಪಾಲನೆ ಮಾಡಬೇಕಾದ ನಿಯಮಗಳ ಬಗ್ಗೆ ಕರ್ನಾಟಕ ಕಲ್ಲು ಪುಡಿ ಮಾಡುವ ಘಟಗಳ ನಿಯಂತ್ರಣ ಅಧಿನಿಯ -2011 ಹಾಗೂ ತಿದ್ದುಪಡಿ ಕಾಯ್ದೆ 2013ರಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಆದರೂ ಜಿಲ್ಲೆಯಲ್ಲಿ ಹಲವು ಕ್ರಷರ್ಗಳಲ್ಲಿ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ.

ಕಲ್ಲು ದೂಳು, ಬೆಳೆಗಳ ಮೇಲೆ ಬಿದ್ದು, ಇಳುವರಿ ಕಡಿಮೆಯಾಗುತ್ತಿದೆ ಎಂದು ರೈತರು ದೂರು ನೀಡಿದ್ದಾರೆ. ಇದರ ಜೊತೆಗೆ ಕ್ರಷರ್ಗಳ ಸುತ್ತ ಮುತ್ತಲಿನ ಪ್ರದೇಶದಲ್ಲಿ ವಾಸಿಸುವ ಜನರು ಶ್ವಾಸಕೋಶ ಸಂಬಂಧಿಸಿದ ಖಾಯಿಲೆಗಳಿಗೆ ತುತ್ತಾಗುತಿದ್ದಾರೆ.

ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕಾರ್ಯಚರಣೆ ನಡೆಸುತ್ತಿರುವ ಎಲ್ಲ 29 ಕ್ರಷರ್ಗಳ ಪರಿಶೀಲನೆ ಮಾಡಿ, ಪರಿಸರ ಮಾಲಿನ್ಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಸಭೆಯಲ್ಲಿ ಹೇಳಿದರು. 

ಇದೆ ವೇಳೆ, ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಾವಳಿ-1994 ನಿಯಮ 32 ಅನ್ವಯ ಅಲಂಕಾರಿಕ ಶಿಲೆ, ಕಟ್ಟಡ ಕಲ್ಲು, ವೈಟ್ ಕ್ವಾಟ್ಜ್ಗಳ ಗಣಿಗಾರಿಕೆಗೆ ಮಂಜೂರಾತಿ ನೀಡುವ ಕುರಿತು ಹಾಗೂ ಮರಳು ಗಣಿ ಗುತ್ತಿಗೆ ಮಂಜೂರಾತಿ ಕೋರಿ ಸ್ವೀಕೃತವಾದ ಅರ್ಜಿಗಳ ಕುರಿತು ಚರ್ಚಿಸಲಾಯಿತು.

      ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಮಹೇಶ್ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ