LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶತಮಾನದ ಸಾಮಾಜಿಕ ಅಂತರಕ್ಕೆ ಬ್ರೇಕ್: ಸೌಹಾರ್ದಯುತವಾಗಿ ದೇವಸ್ಥಾನ ಪ್ರವೇಶಿಸಿದ ದಲಿತರು!

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: 
ಹಲವು ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಕಡೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ದಲಿತ ಸಮುದಾಯದ ಬಾಂಧವರು ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪ್ರವೇಶಿಸಿ ಪೂಜೆ ಸಲ್ಲಿಸಿದ ಐತಿಹಾಸಿಕ ಘಟನೆ ಮಂಗಳವಾರ ಅತ್ಯಂತ ಶಾಂತಿಯುತವಾಗಿ ನಡೆದಿದೆ. ಗ್ರಾಮಸ್ಥರ ಅಪೂರ್ವ ಸಹಕಾರ
, ಆಡಳಿತ ಹಾಗೂ ಪೊಲೀಸ್ ಇಲಾಖೆಯ ಸಮ್ಮುಖದಲ್ಲಿ ಯಾವುದೇ ಅಡೆತಡೆ ಇಲ್ಲದೆ ಈ ಸಾಮಾಜಿಕ ಸಾಮರಸ್ಯದ ಕಾರ್ಯಕ್ರಮ ನೆರವೇರಿದೆ.

100 ವರ್ಷಗಳ ಇತಿಹಾಸದಲ್ಲೇ ಮೊದಲು:
ಸುಮಾರು ಎರಡು ಸಾವಿರಕ್ಕೂ ಹೆಚ್ಚು ಇತರ ಸಮುದಾಯದ ಕುಟುಂಬಗಳು ಹಾಗೂ
80ಕ್ಕೂ ಹೆಚ್ಚು ದಲಿತ ಕುಟುಂಬಗಳಿರುವ ನಿಡಘಟ್ಟ ಗ್ರಾಮದಲ್ಲಿ, ಕಳೆದ ನೂರು ವರ್ಷಗಳಿಂದಲೂ ದಲಿತ ಸಮುದಾಯದವರು ಇಲ್ಲಿನ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪ್ರವೇಶಿಸಿರಲಿಲ್ಲ. ಈ ವಿಷಯ ಇತ್ತೀಚೆಗೆ ಚರ್ಚೆಗೆ ಬಂದ ಹಿನ್ನೆಲೆಯಲ್ಲಿ, ಗ್ರಾಮದಲ್ಲಿ ಸೌಹಾರ್ದತೆ ಮೂಡಿಸಲು ಅಧಿಕಾರಿಗಳು ಹಾಗೂ ಮುಖಂಡರು ವಿಶೇಷ ಕಾಳಜಿ ವಹಿಸಿದ್ದರು.

ಮಾತುಕತೆಯ ಮೂಲಕ ಮೂಡಿದ ಒಮ್ಮತ:
ಯಾವುದೇ ಸಂಘರ್ಷಕ್ಕೆ ಆಸ್ಪದ ನೀಡದೆ ದಲಿತ ಮುಖಂಡರು
, ಇತರ ಸಮುದಾಯದ ಹಿರಿಯರು, ಗ್ರಾಮಸ್ಥರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಒಟ್ಟಾಗಿ ಕುಳಿತು ಹಲವು ಸುತ್ತಿನ ಸೌಹಾರ್ದಯುತ ಮಾತುಕತೆ ನಡೆಸಿದ್ದರು. ಈ ಸಭೆಗಳ ಫಲಶ್ರುತಿಯಾಗಿ ಎಲ್ಲರೂ ಒಮ್ಮತದಿಂದ ದೇವಸ್ಥಾನ ಪ್ರವೇಶಕ್ಕೆ ಸಮ್ಮತಿಸಿದರು.

ಅದರಂತೆ ಮಂಗಳವಾರ ಕಡೂರು ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳು ಹಾಗೂ ಗ್ರಾಮ ಮುಖಂಡರ ಸಮ್ಮುಖದಲ್ಲಿ ದಲಿತ ಸಮುದಾಯದ ನೂರಾರು ಮಹಿಳೆಯರು, ಪುರುಷರು ಹಾಗೂ ಮಕ್ಕಳು ದೇವಸ್ಥಾನದೊಳಗೆ ಹೆಜ್ಜೆ ಇಟ್ಟರು. ಬಳಿಕ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಭಕ್ತಿಯಿಂದ ದೇವರ ದರ್ಶನ ಪಡೆದರು. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಇತರ ಸಮುದಾಯದ ಗ್ರಾಮಸ್ಥರು ಸಹ ಅವರೊಂದಿಗೆ ಭಾಗವಹಿಸಿ ಪರಸ್ಪರ ಶುಭಾಶಯ ಕೋರಿದ್ದು ವಿಶೇಷವಾಗಿತ್ತು.

ಸಖರಾಯಪಟ್ಟಣ ಠಾಣಾಧಿಕಾರಿ ಹೇಳಿಕೆ: "ಕಳೆದ ನೂರು ವರ್ಷಗಳಿಂದ ಈ ಭಾಗದ ದಲಿತರು ದೇವಸ್ಥಾನ ಪ್ರವೇಶಿಸಿರಲಿಲ್ಲ. ಆದರೆ ಯಾರೂ ಕೂಡ ಅವರು ಬರಬಾರದು ಎಂದು ವಿರೋಧ ಮಾಡಿರಲಿಲ್ಲ. ತಮಗೆ ದೇವಸ್ಥಾನ ಪ್ರವೇಶಿಸಬೇಕು ಎಂದು ಮನಸ್ಸಾದಾಗ ಅವರು ತಾಲೂಕು ಕಚೇರಿಗೆ ಮನವಿ ಸಲ್ಲಿಸಿದ್ದರು. ಕಡೂರು ತಹಶೀಲ್ದಾರ್ ಸಮ್ಮುಖದಲ್ಲಿ ಇಡೀ ಗ್ರಾಮದ ಎಲ್ಲಾ ಜನಾಂಗದವರು ಒಟ್ಟಾಗಿ ನಿಂತು ಈ ಕಾರ್ಯಕ್ರಮಕ್ಕೆ ಸಾಥ್ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದೆ ಅತ್ಯಂತ ಶಾಂತಿಯುತವಾಗಿ ಪೂಜೆ ನೆರವೇರಿದೆ."

ಹಲವು ವರ್ಷಗಳಿಂದ ಇದ್ದ ಸಾಮಾಜಿಕ ಅಂತರವನ್ನು ಕಡಿಮೆ ಮಾಡುವಲ್ಲಿ ಮತ್ತು ಗ್ರಾಮೀಣ ಭಾಗದಲ್ಲಿ ಸಾಮರಸ್ಯದ ಸಂದೇಶ ಸಾರುವಲ್ಲಿ ನಿಡಘಟ್ಟ ಗ್ರಾಮದ ಈ ನಡೆ ಇಡೀ ನಾಡಿಗೆ ಮಾದರಿಯಾಗಿದೆ ಎಂದು ಸ್ಥಳೀಯರು ಹಾಗೂ ಅಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಆಗಸ್ಟ್ 16, 17ರ ಎರಡು ದಿನಗಳ ರಾಜ್ಯ ಪ್ರವಾಸಮುಂಗಾರು ಅಧಿವೇಶನ ಅನಿರ್ದಿಷ್ಟಾವಧಿ ಮುಂದೂಡಿಕೆ: ಲೋಕಸಭೆಯಲ್ಲಿ ಶೇ 19, ರಾಜ್ಯಸಭೆಯಲ್ಲಿ ಶೇ 39 ಉತ್ಪಾದಕತೆ ದಾಖಲುಕಾವೇರಿ ನೀರು ಬಿಡುಗಡೆ ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ: ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ, ಜನಜೀವನ ಸಹಜಶಾಸನಸಭೆ ಕಾಂಗ್ರೆಸ್‌ಅಭ್ಯರ್ಥಿಗಳ ಸ್ಪರ್ಧೆ: ಜಿ.ಎಸ್. ಪಾಟೀಲ್, ಸಲೀಂ ಅಹ್ಮದ್ ನಾಮಪತ್ರ ಸಲ್ಲಿಕೆಗುಟ್ಕಾ, ಪಾನ್ ಮಸಾಲೆ ನಿಷೇಧ: ಅಡಕೆ ಬೆಳೆಗಾರರಿಗೆ, ಸಹಕಾರ ಸಂಘಗಳಿಗೆ ತೀವ್ರ ಆಘಾತಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಅಧಿವೇಶನ ಆರಂಭ: ಸಿದ್ದರಾಮಯ್ಯ ಸೇರಿ ಹಲವು ಶಾಸಕರು ಗೈರು, ಅಸಮಾಧಾನದ ಹೊಗೆ?ತಮಿಳುನಾಡಿನ ದೋಷಪೂರಿತ ಲೆಕ್ಕಾಚಾರಕ್ಕೆ ಕರ್ನಾಟಕ ಆಕ್ಷೇಪ, ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಕೆಬಿಸಿಯೂಟ ಯೋಜನೆಗೆ 'ಚೆನ್ನಮ್ಮ' ಹೆಸರಿಡಿ: ಅಗಲಿದ ಗಣ್ಯರಿಗೆ ಭಾವಪೂರ್ಣ ಸಂತಾಪಖರ್ಗೆ ರ‍್ಯಾಲಿ ನಡೆದ ಮೈದಾನ 'ಶುದ್ಧೀಕರಣ': ರಾಜಕೀಯ ಕಾಳಗ ತೀವ್ರಯುವತಿ ಸಿರಿಲಕ್ಷ್ಮಿ ಕಣ್ಮರೆ: ಪತ್ತಗೆ ಮನವಿ