Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿಮಾ ವಂಚನೆಗಳಿಗೆ ಬ್ರೇಕ್: ಇನ್ಶೂರೆನ್ಸ್ ಕ್ರೈಮ್ ತನಿಖೆಗೆ ವಿಶೇಷ ಎಸ್‌ಐಟಿ ರಚನೆ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇನ್ಶೂರೆನ್ಸ್ ಕಂಪನಿಗಳಿಗೆ ಎಸಗುವ ನಕಲಿ ಕ್ಲೇಮ್ ಹಾಗೂ ವಂಚನೆ ಪ್ರಕರಣಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ವಿಮಾ ವಂಚನೆ ಪ್ರಕರಣಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿ ಒಳಾಡಳಿತ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ವಿಶೇಷ ತನಿಖಾ ತಂಡ: ವಿಮಾ ಕಂಪನಿಗಳಿಂದ ಬರುವ ನಕಲಿ ಕ್ಲೇಮ್ ಮತ್ತು ವಂಚನೆಯ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲು ಎಸ್‌ಐಟಿ ರಚಿಸಲಾಗಿದೆ.

Advertisement

ತಂಡದ ನೇತೃತ್ವ: ಬೆಂಗಳೂರಿನ ಅಪರಾಧ ಮತ್ತು ತಾಂತ್ರಿಕ ಸಂಶೋಧನಾ ಸೇವೆಗಳ ಡಿಐಜಿಪಿ ಈ ಉನ್ನತ ಮಟ್ಟದ ತನಿಖಾ ತಂಡದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಪೊಲೀಸ್ ಠಾಣೆ ಮಾನ್ಯತೆ: ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಸೆಕ್ಷನ್ 2(1)(u) ಅಡಿ ಈ ಎಸ್‌ಐಟಿಯನ್ನು ಅಧಿಕೃತ 'ಪೊಲೀಸ್ ಸ್ಟೇಷನ್' ಎಂದು ಘೋಷಿಸಲಾಗಿದೆ.

ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ, ಹೊಸದಾಗಿ ರಚಿಸಲಾಗಿರುವ ಈ ಎಸ್‌ಐಟಿಯಲ್ಲಿ ಡಿಐಜಿಪಿ ಅವರೊಂದಿಗೆ ಸಿಐಡಿ ಎಸ್‌ಪಿ, ಒಬ್ಬರು ಡಿವೈಎಸ್‌ಪಿ ಹಾಗೂ ಮೂವರು ಪೊಲೀಸ್ ಇನ್‌ಸ್ಪೆಕ್ಟರ್‌ಗಳು ಸದಸ್ಯರಾಗಿರಲಿದ್ದಾರೆ. ವಿಮಾ ಕಂಪನಿಗಳಿಗೆ ಸಂಬಂಧಿಸಿದ ವಂಚನೆ ಹಾಗೂ ನಕಲಿ ಕ್ಲೇಮ್‌ಗಳ ಪ್ರತಿಯೊಂದು ದೂರುಗಳನ್ನು ನೋಂದಾಯಿಸಿಕೊಂಡು ಪರಿಣಾಮಕಾರಿ ತನಿಖೆ ನಡೆಸುವುದು ಈ ತಂಡದ ಮುಖ್ಯ ಉದ್ದೇಶವಾಗಿದೆ.

ನೇರ ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಅಧಿಕಾರ:
ಈ ಎಸ್‌ಐಟಿಗೆ ವಿಶೇಷವಾಗಿ 'ಪೊಲೀಸ್ ಸ್ಟೇಷನ್' ಮಾನ್ಯತೆ ನೀಡಿರುವುದರಿಂದ, ತನಿಖಾಧಿಕಾರಿಗಳು ತನಿಖೆ ಪೂರ್ಣಗೊಳಿಸಿದ ಬಳಿಕ ಸೆಕ್ಷನ್ 193ರ ಅಡಿ ನೇರವಾಗಿ ಸಂಬಂಧಪಟ್ಟ ನ್ಯಾಯಾಲಯಗಳಿಗೆ ಅಂತಿಮ ವರದಿಯನ್ನು ಸಲ್ಲಿಸುವ ಸಂಪೂರ್ಣ ಅಧಿಕಾರವನ್ನು ಹೊಂದಿರಲಿದ್ದಾರೆ.

ಮೇಲ್ವಿಚಾರಣೆ ಹಾಗೂ ಕಾರ್ಯಾಚರಣೆ:
ಈ ಸಂಪೂರ್ಣ ತನಿಖಾ ಪ್ರಕ್ರಿಯೆಯು ಬೆಂಗಳೂರು ಪೊಲೀಸ್ ಪ್ರಧಾನ ಕಚೇರಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ಅವರ ನೇರ ಮೇಲ್ವಿಚಾರಣೆಯಲ್ಲಿ ನಡೆಯಲಿದೆ. ರಾಜ್ಯದಲ್ಲಿ ಇನ್ಶೂರೆನ್ಸ್ ವಂಚನೆಗೆ ಸಂಬಂಧಿಸಿದಂತೆ ಎಲ್ಲಿಯೇ ದೂರುಗಳು ಬಂದರೂ, ಅವುಗಳನ್ನು ಡಿಜಿ ಮತ್ತು ಐಜಿಪಿಯವರು ಈ ವಿಶೇಷ ಎಸ್‌ಐಟಿಗೆ ವರ್ಗಾಯಿಸಲಿದ್ದಾರೆ. ಅಲ್ಲದೆ, ಪ್ರಕರಣಗಳ ತನಿಖೆಯ ಪ್ರಗತಿ ವರದಿಯನ್ನು ಕಾಲಕಾಲಕ್ಕೆ ಡಿಜಿ - ಐಜಿಪಿ ಅವರ ಮೂಲಕ ಸರ್ಕಾರಕ್ಕೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ