Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಂಪಿ ಉತ್ಸವಕ್ಕೆ ಐತಿಹಾಸಿಕ ಅಂಬಾರಿ ತರಲಿ: ಗಂಗಾಮತ ಬೆಸ್ತ ಸಮಾಜದ ಸಿಎಂ ಗೆ ಮನವಿ 

ಚಂದ್ರವಳ್ಳಿ ನ್ಯೂಸ್ ಹೊಸಪೇಟೆ: ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಮತ್ತೊಮ್ಮೆ ಕಣ್ಮುಂದೆ ತರುವ ನಿಟ್ಟಿನಲ್ಲಿ, ಮೈಸೂರಿನಲ್ಲಿರುವ ಐತಿಹಾಸಿಕ ಅಂಬಾರಿಯನ್ನು ಹಂಪಿ ಉತ್ಸವಕ್ಕೆ ತರಿಸಿ ಭವ್ಯ ಮೆರವಣಿಗೆ ನಡೆಸಬೇಕು ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಗಂಗಾಮತ ಬೆಸ್ತ ಸಮಾಜ ಆಗ್ರಹಿಸಿದೆ.

ಈ ಕುರಿತು ದಿನಾಂಕ 05.09.2026 ರಂದು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನಲ್ಲಿ ನಡೆದ ಪ್ರಜಾಸೇವೆ ಕಾರ್ಯಕ್ರಕ್ಕೆ ಬಂದಿದ್ದ ಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ ಸಲ್ಲಿಸಿರುವ ಸಮಾಜದ ಮುಖಂಡರು, ಹಂಪಿಯ ಇತಿಹಾಸ, ಪರಂಪರೆ ಮತ್ತು ಸಾಂಸ್ಕೃತಿಕ ವೈಭವವನ್ನು ದೇಶ-ವಿದೇಶದ ಪ್ರವಾಸಿಗರಿಗೆ ಪರಿಚಯಿಸುವ ದೃಷ್ಟಿಯಿಂದ ಅಂಬಾರಿ ಮೆರವಣಿಗೆ ಮಹತ್ವದ ಆಕರ್ಷಣೆಯಾಗಲಿದೆ ಎಂದು ತಿಳಿಸಿದ್ದಾರೆ.

Advertisement

ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಹಂಪಿಯ ಮಹಾನವಮಿ ದಿಬ್ಬದ ಸುತ್ತಮುತ್ತ ದಸರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿತ್ತು. ರಾಜ ವೈಭವ, ಆನೆ-ಕುದುರೆಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಧಾರ್ಮಿಕ-ಸಾಂಪ್ರದಾಯಿಕ ಆಚರಣೆಗಳು ಅಂದಿನ ವಿಜಯನಗರದ ವೈಭವವನ್ನು ಪ್ರತಿಬಿಂಬಿಸುತ್ತಿದ್ದವು ಎಂಬುದು ಇತಿಹಾಸದಲ್ಲಿ ದಾಖಲಾಗಿದೆ.

ವಿಜಯನಗರ ಸಾಮ್ರಾಜ್ಯದ ಪತನದ ನಂತರ ಈ ಪರಂಪರೆಯ ಹಲವು ಕುರುಹುಗಳು ವಿವಿಧ ಪ್ರದೇಶಗಳಿಗೆ ಸಾಗಿದವು. ಮೈಸೂರಿನಲ್ಲಿರುವ ಅಂಬಾರಿಯನ್ನೂ ಹಂಪಿಯ ಗತವೈಭವದೊಂದಿಗೆ ಸಾಂಸ್ಕೃತಿಕವಾಗಿ ಜೋಡಿಸಿ, ಪ್ರತಿ ವರ್ಷ ನಡೆಯುವ ಹಂಪಿ ಉತ್ಸವದ ಸಂದರ್ಭದಲ್ಲಿ ಅಂಬಾರಿ ಮೆರವಣಿಗೆ ನಡೆಸುವ ಮೂಲಕ ಐತಿಹಾಸಿಕ ಪರಂಪರೆಗೆ ಹೊಸ ಮೆರುಗು ನೀಡಬೇಕು ಎಂಬುದು ಸಮಾಜದ ಪ್ರಮುಖ ಬೇಡಿಕೆಯಾಗಿದೆ.

ಅಂಬಾರಿಯನ್ನು ಹಂಪಿಗೆ ತರಿಸುವುದರಿಂದ ವಿಜಯನಗರದ ಇತಿಹಾಸ ಮತ್ತು ಮೈಸೂರು ದಸರಾ ಪರಂಪರೆಯ ನಡುವಿನ ಸಾಂಸ್ಕೃತಿಕ ನಂಟನ್ನು ಜನರಿಗೆ ಪರಿಚಯಿಸುವುದರ ಜೊತೆಗೆ, ಹಂಪಿ ಉತ್ಸವಕ್ಕೆ ಮತ್ತಷ್ಟು ವೈಭವ ದೊರೆಯಲಿದೆ. ಇದರಿಂದ ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚುವ ಸಾಧ್ಯತೆ ಇದೆ ಎಂದು ಸಮಾಜದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಕಲ್ಯಾಣ ಕರ್ನಾಟಕದ ಜನರ ಬಹುದಿನಗಳ ಆಶಯವಾಗಿರುವ ಐತಿಹಾಸಿಕ ಅಂಬಾರಿಯನ್ನು ಹಂಪಿ ಉತ್ಸವದಲ್ಲಿ ಕಣ್ತುಂಬಿಕೊಳ್ಳುವ ಅವಕಾಶವನ್ನು ಸರ್ಕಾರ ಕಲ್ಪಿಸಬೇಕು. ಹಂಪಿಯ ಐತಿಹಾಸಿಕ ಮಹತ್ವ ಮತ್ತು ವಿಜಯನಗರದ ಗತವೈಭವವನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಗಂಗಾಮತ ಬೆಸ್ತ ಸಮಾಜ ಒತ್ತಾಯಿಸಿದೆ.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ರಮವಾಗಿ ನೆಲೆಸಿದ್ದ ಮೂವರು ನೈಜೀರಿಯನ್ ಪ್ರಜೆಗಳ ವಶಕ್ಕೆಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದ ಹುಂಡಿಯಲ್ಲಿ 77ಲಕ್ಷ 58ಸಾವಿರದ 904 ರೂ ಸಂಗ್ರಹಕೆಂಪಮ್ಮ ದಂಪತಿಗೆ ವಾತ್ಸಲ್ಯ ಮನೆ ಹಸ್ತಾಂತರಪೋಷಣ್ ಮಾಸಾಚರಣೆ: ಸಿರಿಧಾನ್ಯ, ಸೊಪ್ಪು-ತರಕಾರಿ ಸೇವನೆಗೆ ಒತ್ತು ವಿದ್ಯಾರ್ಥಿಗಳು ಪಠ್ಯದ ಜೊತೆ ಕ್ರೀಡೆಗಳಲ್ಲಿ ತೊಡಗಿಸಿಕೊಂಡರೆ ಮಾನಸಿಕ ದೈಹಿಕ ಸದೃಢತೆ ಹೆಚ್ಚುತ್ತದೆ:ಡಾ. ಮುರುಳಿಡಿಕೆ ಶಿವಕುಮಾರ್ ವಿರುದ್ಧವೇ 'ಟ್ರ್ಯಾಪ್' ಯತ್ನ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸ್ಪೋಟಕ ಹೇಳಿಕೆ!ಡಿ.ಕೆ ಶಿವಕುಮಾರ್‌ಗೆ ರಿಯಲ್ ಎಸ್ಟೇಟ್‌ಮೇಲಿರುವ ಆಸಕ್ತಿ ರೈತರ ಮೇಲಿಲ್ಲ: ಬಿ.ವೈ. ವಿಜಯೇಂದ್ರಶಾರ್ಟ್ ಸರ್ಕ್ಯೂಟ್‌ನಿಂದ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ ಬೆಂಕಿ; ತಪ್ಪಿದ ಭಾರೀ ದುರಂತಭೀಕರ ಅಪಘಾತ: ನಾಲ್ವರು ಯುವ ಕ್ರಿಕೆಟಿಗರು ಸಾವುಡೀಸೆಲ್ ಕೊರತೆ ತಾತ್ಕಾಲಿಕ, ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಕೆ: ಡಿಸಿಎಂ ಜಿ. ಪರಮೇಶ್ವರ ಸ್ಪಷ್ಟನೆ