Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ಕರೆ ತನ್ನಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಶಾಲಾ ದಾಖಲಾತಿ ಆಂದೋಲನವು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಳ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆ ತರಲು ಸಹಕಾರಿಯಾಗಲಿದೆ ಎಂದು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಗೌರವಾಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ತಿಳಿಸಿದರು.

ಚಿಕ್ಕಗೊಂಡನಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ದಾಖಲಾತಿ ಆಂದೋಲನ ಉದ್ಘಾಟಿಸಿ ಮಾತನಾಡಿದರು.

ಪ್ರತಿ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣ ಇಲಾಖೆ ಹಮ್ಮಿಕೊಳ್ಳುವ ಮಹತ್ವದ ಕಾರ್ಯಕ್ರಮ ಇದಾಗಿದ್ದು, ಒಂದನೆ ತರಗತಿ ಹಾಗೂ ಇತರೆ ತರಗತಿಗಳಿಗೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯನ್ನು ಗರಿಷ್ಠಗೊಳಿಸಿ ಅದರಂತೆ ಮನೆ ಮನೆಗೆ ಭೇಟಿ ಮಾಡಿ ಎಲ್.ಕೆ.ಜಿ. ವಿಭಾಗಕ್ಕೆ ೨೫ ಮಕ್ಕಳು ಹಾಗೂ ಒಂದನೆ ತರಗತಿಗೆ ೨೪ ಮಕ್ಕಳು ದಾಖಲಾಗುವಂತೆ ಶಿಕ್ಷಕರು ಕಾಳಜಿ ವಹಿಸಿರುವುದು ವಿಶೇಷ ಎಂದು ಶ್ಲಾಘಿಸಿದರು.

ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ದಿನೇಶ್ ಮಾತನಾಡಿ ಶಿಕ್ಷಕರುಗಳು ಮನೆ ಮನೆಗೆ ಭೇಟಿ ನೀಡಿ ಪೋಷಕರುಗಳಲ್ಲಿ ಜಾಗೃತಿ ಮೂಡಿಸುವುದು ಮತ್ತು ಶಾಲಾ ವಯಸ್ಸಿನ ಮಕ್ಕಳನ್ನು ಶಾಲೆಗೆ ದಾಖಲಾತಿ ಮಾಡಿಸಿ ಸರ್ಕಾರಿ ಶಾಲೆಗಳಲ್ಲಿ ಸಿಗುವ ಸೌಲಭ್ಯಗಳ ಕುರಿತು ಮನವರಿಕೆ ಮಾಡುವುದು ಆಂದೋಲನದ ಪ್ರಮುಖ ಉದ್ದೇಶವಾಗಬೇಕು. ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ, ಉಚಿತ ಪಠ್ಯ ಪುಸ್ತಕಗಳು, ಕ್ಷೀರಭಾಗ್ಯ ಯೋಜನೆಯಡಿ ಹಾಲು, ಶೂ, ಸಾಕ್ಸ್ ವಿತರಣೆ. ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಸತಿ ನಿಲಯಗಳ ಸೌಲಭ್ಯಗಳನ್ನು ಮಕ್ಕಳಿಗೆ ತಲುಪಿಸುವುದೇ ಶಾಲಾ ದಾಖಲಾತಿ ಆಂದೋಲನದ ಗುರಿ ಎಂದು ಹೇಳಿದರು.

ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಕರುಗಳಾದ ಕುಸುಮ ಕೆ, ರೇವಣ್ಣ, ರೀಟಾಮಣಿ, ಸಿದ್ದಮ್ಮ, ವೀಣಾ, ತ್ರಿವೇಣಿ, ಅರುಣ್‌ಕುಮಾರ್, ಅಣ್ಣಪ್ಪಸ್ವಾಮಿ, ಬಸವರಾಜ್, ರತ್ನಮ್ಮ ಪೋಷಕರು ಹಾಗೂ ಮಕ್ಕಳು ದಾಖಲಾತಿ ಆಂದೋಲನದಲ್ಲಿ ಪಾಲ್ಗೊಂಡಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಲಮಸ್ಸೇರಿ ಹೆಚ್‌ಎಂಟಿ ಘಟಕಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ಪರಿಶೀಲನೆತುಷ್ಟೀಕರಣದ ಮಿತಿ ಮೀರಿದ ಕಾಂಗ್ರೆಸ್: ಗಲಭೆ ಪ್ರಕರಣಗಳ ವಾಪಸಾತಿ ವಿರುದ್ಧ ವಿಜಯೇಂದ್ರಲೆಕ್ಕ ಕೊಡಿ ಸಿದ್ದರಾಮಣ್ಣ!: ಗೃಹಲಕ್ಷ್ಮಿ ಯೋಜನೆಯ 5,000 ಕೋಟಿ ಹಣ ಎಲ್ಲಿದೆ? ನಿಖಿಲ್ ಕುಮಾರಸ್ವಾಮಿ ಪ್ರಶ್ನೆವೈಮಾನಿಕ ಮತ್ತು ರಕ್ಷಣಾ ಕ್ಷೇತ್ರದ ಉತ್ಪಾದನೆಗೆ ಕರ್ನಾಟಕವೇ ನೆಚ್ಚಿನ ತಾಣ: ಸಚಿವ ಎಂ.ಬಿ. ಪಾಟೀಲ್ಸರಕಾರಿ ಜಾಗಕ್ಕೆ 12 ಕೋಟಿ, ರೈತರ ಜಮೀನಿಗೆ ಕೇವಲ 2 ಕೋಟಿ!: ​ಗೃಹಲಕ್ಷ್ಮಿಯರ 2 ತಿಂಗಳ ಕಂತಿನ 5,000 ಕೋಟಿ ಹಣ ಏನಾಯ್ತು?: ನಿಖಿಲ್ ಆಕ್ರೋಶರೈತರ ಒಕ್ಕಲೆಬ್ಬಿಸುವಿಕೆ ನಿಲ್ಲಿಸಿ, ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ 50% ಉದ್ಯೋಗ ಕಡ್ಡಾಯಗೊಳಿಸಿ: ನಿಖಿಲ್ಪುಲ್ವಾಮಾ ದಾಳಿಯ ಮಾಸ್ಟರ್‌ ಮೈಂಡ್, ಉಗ್ರ ಹಮ್ಜಾ ಬುರ್ಹಾನ್ ಹತ್ಯೆ: ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿಕ್ರಿಯೆರೌಡಿಶೀಟರ್, ಮುಸ್ಲಿಂ ಗೂಂಡಾಗಳ ಕೇಸ್ ವಾಪಸ್; ಸರ್ಕಾರದ ವಿರುದ್ಧ ಸಿ.ಟಿ. ರವಿ ಆಕ್ರೋಶಗರ್ಭಿಣಿಯರು, ಬಾಣಂತಿಯರಿಗೆ ನಿತ್ಯ ಪೌಷ್ಠಿಕ ಬಿಸಿಯೂಟ!​- ಡಾ. ಪ್ರಭಾ