Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಪಿಎಂಸಿಯಲ್ಲಿ ದಲ್ಲಾಳಿಗಳ ದರ್ಬಾರ್; ರೈತರಿಗೆ ಅನ್ಯಾಯವಾದರೆ ಉಗ್ರ ಹೋರಾಟ: ಸಿ.ಟಿ. ರವಿ ಎಚ್ಚರಿಕೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
 "ರೈತರನ್ನು ದೊಡ್ಡ ವ್ಯಾಪಾರಿಗಳ ಏಕಸ್ವಾಮ್ಯ ಹಾಗೂ ಮಧ್ಯವರ್ತಿಗಳ ಹಾವಳಿಯಿಂದ ರಕ್ಷಿಸಬೇಕಾದ ಎಪಿಎಂಸಿ ಮಾರುಕಟ್ಟೆಗಳು ದಲ್ಲಾಳಿಗಳ ಕೇಂದ್ರಗಳಾಗಿ ಮಾರ್ಪಟ್ಟಿವೆ
," ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಸಿ.ಟಿ. ರವಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ಚಿಕ್ಕಮಗಳೂರು ಎಪಿಎಂಸಿಯಲ್ಲಿ ಬೀನ್ಸ್ ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಪ್ರಕಟಣೆ ನೀಡಿರುವ ಅವರು, ತಕ್ಷಣವೇ ಸರ್ಕಾರ ಮಧ್ಯಪ್ರವೇಶಿಸಿ ಆನ್‌ಲೈನ್ ಹರಾಜು ಪ್ರಕ್ರಿಯೆ ಜಾರಿಗೆ ತರದಿದ್ದರೆ ರೈತರೊಂದಿಗೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

​ಒಂದೇ ರಾಜ್ಯ, ಎರಡು ಬೆಲೆ: ರೈತರಿಗೆ ದ್ರೋಹ!
​ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇದೆ ಎಂಬ ಆಸೆಯಿಂದ ಚಿಕ್ಕಮಗಳೂರಿನ ಎಪಿಎಂಸಿಗೆ ಬೀನ್ಸ್ ತಂದ ರೈತರು ಕಣ್ಣೀರಿಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಿ.ಟಿ. ರವಿ ಆತಂಕ ವ್ಯಕ್ತಪಡಿಸಿದ್ದಾರೆ.

​"ಮೈಸೂರು ಮತ್ತು ಬೆಂಗಳೂರಿನ ಎಪಿಎಂಸಿಗಳಲ್ಲಿ ಬೀನ್ಸ್ ಪ್ರತಿ ಕೆಜಿಗೆ 85 ರಿಂದ 90 ರೂಪಾಯಿಗೆ ಖರೀದಿಯಾಗುತ್ತಿದ್ದು, ಸಾಮಾನ್ಯ ಗ್ರಾಹಕರಿಗೆ 150 ರೂಪಾಯಿಗೂ ಹೆಚ್ಚು ಬೆಲೆಗೆ ಮಾರಾಟವಾಗುತ್ತಿದೆ. ಆದರೆ, ಚಿಕ್ಕಮಗಳೂರಿನಲ್ಲಿ ಕಷ್ಟಪಟ್ಟು ಬೀನ್ಸ್ ಬೆಳೆದ ರೈತರಿಗೆ ಮಧ್ಯವರ್ತಿಗಳು ಕೇವಲ 35 ರಿಂದ 40 ರೂಪಾಯಿ ನಿಗದಿಪಡಿಸಿ ಶೋಷಣೆ ಮಾಡುತ್ತಿದ್ದಾರೆ. ಮೈಸೂರಿನಲ್ಲಿ ಒಂದು ಬೆಲೆ, ಚಿಕ್ಕಮಗಳೂರಿನಲ್ಲಿ ಮತ್ತೊಂದು ಬೆಲೆ ಇರಲು ಹೇಗೆ ಸಾಧ್ಯ?" ಎಂದು ಅವರು ಪ್ರಶ್ನಿಸಿದ್ದಾರೆ.

​ಅಧಿಕಾರಿಗಳು ಮತ್ತು ದಲ್ಲಾಳಿಗಳ ಕುತಂತ್ರ-
​ಮಳೆಯಲ್ಲಿನ ಏರುಪೇರಿನ ನಡುವೆಯೂ ಬೆವರು ಸುರಿಸಿ ಬೆಳೆ ಬೆಳೆದ ರೈತರಿಗೆ ಕಣ್ಣೆದುರೇ ಅನ್ಯಾಯವಾಗುತ್ತಿದ್ದರೂ ಅಧಿಕಾರಿಗಳು ಮೌನವಾಗಿರುವುದರ ಹಿಂದೆ ದೊಡ್ಡ ಹಗರಣವಿದೆ ಎಂದು ಅವರು ಆರೋಪಿಸಿದ್ದಾರೆ.

​ಹೆಗ್ಗಣಗಳಂತೆ ಒಂದಾದ ಅಧಿಕಾರಿಗಳು: ರೈತರಿಗೆ ನ್ಯಾಯ ಕೊಡಿಸಬೇಕಾದ ಎಪಿಎಂಸಿ ಅಧಿಕಾರಿಗಳು ದಲ್ಲಾಳಿಗಳ ಜೊತೆ ಕೈಜೋಡಿಸಿ ಹೆಗ್ಗಣಗಳಂತೆ ರೈತರನ್ನು ಸುಲಿಗೆ ಮಾಡುತ್ತಿದ್ದಾರೆ.

​ಆನ್‌ಲೈನ್ ಹರಾಜು ಏಕಿಲ್ಲ?:
ಎಪಿಎಂಸಿಗಳಲ್ಲಿ ಆನ್‌ಲೈನ್ ಮೂಲಕ ಪಾರದರ್ಶಕವಾಗಿ ಹರಾಜು ನಡೆಸಲು ಅವಕಾಶವಿದ್ದರೂ
, ಇಂದಿಗೂ ಅದನ್ನು ಜಾರಿಗೊಳಿಸಿಲ್ಲ. ಆನ್‌ಲೈನ್ ಹರಾಜು ತಂದರೆ ತಮಗೆ ಶೋಷಣೆ ಮಾಡಲು ಅವಕಾಶ ಸಿಗುವುದಿಲ್ಲ ಎಂಬ ಕಾರಣಕ್ಕೇ ಅಧಿಕಾರಿಗಳು ಇದನ್ನು ತಡೆದಿದ್ದಾರೆ.

​ಕಾಂಗ್ರೆಸ್ ಸರ್ಕಾರಕ್ಕೆ ರೈತರ ಕಾಳಜಿಯಿಲ್ಲ-
​"ರಾಜ್ಯದ ಕಾಂಗ್ರೆಸ್ ಸರ್ಕಾರ ಇಂದು ಕುರ್ಚಿ ಕಿತ್ತಾಟ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿದೆ. ಇವರಿಗೆ ರೈತರ ಬಗ್ಗೆ ಕನಿಷ್ಠ ಕಾಳಜಿಯೂ ಇಲ್ಲ," ಎಂದು ಸಿ.ಟಿ. ರವಿ ಕಿಡಿಕಾರಿದ್ದಾರೆ.

​ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿದ್ದರೂ ಕಬ್ಬು ಮತ್ತು ಭತ್ತ ಖರೀದಿ ಮಾಡದೆ ರೈತರನ್ನು ಬೀದಿಗಿಳಿಸಿದ್ದ ಸಿಎಂ ಸಿದ್ದರಾಮಯ್ಯನವರ ಸಾಧನೆಯನ್ನು ರೈತರು ಇನ್ನೂ ಮರೆತಿಲ್ಲ. ಮತ್ತೆ ತರಕಾರಿ ಬೆಳೆಗಾರರನ್ನು ಬೀದಿಗಿಳಿಸುವ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ. ರೈತರ ಆಕ್ರೋಶಕ್ಕೆ ಕಾರಣವಾದ ಯಾವ ಸರ್ಕಾರವೂ ಉಳಿದಿಲ್ಲ, ಮುಂದಿನ ಚುನಾವಣೆಯಲ್ಲಿ ಈ ಕಾಂಗ್ರೆಸ್ ಸರ್ಕಾರವೂ ಉಳಿಯುವುದಿಲ್ಲ ಎಂದು ಅವರು ಭವಿಷ್ಯ ನುಡಿದರು.

​​ಸಮಾನ ಬೆಲೆ ನಿಗದಿ: ರಾಜ್ಯದ ಎಲ್ಲಾ ಎಪಿಎಂಸಿಗಳಲ್ಲೂ ಸಮಾನ ಸ್ವರೂಪದ ಬೆಲೆಗೆ ತರಕಾರಿ ಖರೀದಿಯಾಗುವಂತೆ ಸರ್ಕಾರ ತಕ್ಷಣವೇ ಕಟ್ಟುನಿಟ್ಟಿನ ಸೂಚನೆ ನೀಡಬೇಕು.

​ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ: ದಲ್ಲಾಳಿಗಳೊಂದಿಗೆ ಶಾಮೀಲಾಗಿ ರೈತರಿಗೆ ವಂಚಿಸುತ್ತಿರುವ ಅಧಿಕಾರಿಗಳ ವಿರುದ್ಧ ತಕ್ಷಣವೇ ಶಿಸ್ತುಕ್ರಮ ಜರುಗಿಸಬೇಕು.

​ಪಾರದರ್ಶಕ ಆನ್‌ಲೈನ್ ಹರಾಜು: ಎಪಿಎಂಸಿಗಳಲ್ಲಿ ತಕ್ಷಣವೇ ಆನ್‌ಲೈನ್ ಹರಾಜು ಪ್ರಕ್ರಿಯೆಯನ್ನು ನ್ಯಾಯಯುತವಾಗಿ ಆರಂಭಿಸಿ, ರೈತರಿಗೆ ಪಾರದರ್ಶಕತೆ ಕಲ್ಪಿಸಬೇಕು.

​"ಎಪಿಎಂಸಿ ಮಾರುಕಟ್ಟೆಯಲ್ಲಿ ರೈತನೇ ಅಂತಿಮವೇ ಹೊರತು ದಲ್ಲಾಳಿಗಳಲ್ಲ. ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ರೈತರ ನೆರವಿಗೆ ಧಾವಿಸದಿದ್ದರೆ, ನಾವು ರೈತರ ಪರವಾಗಿ ಉಗ್ರ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ," ಎಂದು ಸಿ.ಟಿ. ರವಿ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST