Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಚಮಸಾಲಿಗಳನ್ನು 2ಎಗೆ ಸೇರಿಸಿದರೆ ರಕ್ತ ಕ್ರಾಂತಿ ಎಚ್ಚರ-ಬಿಟಿಜೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ
ಚಿತ್ರದುರ್ಗದಲ್ಲಿ ನಡೆದ ಶೋಷಿತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇನ್ನೂ ಆರು ತಿಂಗಳಲ್ಲಿ ಕಾಂತರಾಜ್ ವರದಿಯ ಅಂಗೀಕಾರ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಇಲ್ಲಿವರೆಗೂ ಯಾವುದೇ ಅಂಗೀಕಾರ ಆಗಿಲ್ಲ. ಕೆಲವರು ಈ ವರದಿಯನ್ನು ಅವೈಜ್ಞಾನಿಕ ಅಂತ ಗುರುತರವಾದ ಆಪಾದನೆ ಮಾಡುತ್ತಿದ್ದಾರೆ. ಈ ವರದಿಯನ್ನ ಸಂಪುಟದಲ್ಲಿ ಮಂಡಿಸಿ ಚರ್ಚಿಸಿ ಸಾರ್ವಜನಿಕ ಆಹವಾಲಗಳನ್ನು ಸ್ವೀಕರಿಸಿ ಜಾರಿಗೆ ತರಬೇಕೆಂದು ಅಖಿಲ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಬಿ.ಟಿ ಜಗದೀಶ್ ಸರ್ಕಾರವನ್ನು ಒತಾಯಿಸಿದ್ದಾರೆ.


ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ವರದಿಯನ್ನು ೧೬೭ ಕೋಟಿ ರೂ ವೆಚ್ಚದಲ್ಲಿ ೬೩ ಸಾವಿರ ಸಿಬ್ಬಂದಿಗಳು ನಿರಂತರ ಮನೆ ಮನೆಗೆ ಹೋಗಿ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಿದ್ದಾರೆ. ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಕೊಟ್ಟ ಮಾತಿನಂತೆ ಜಾರಿ ಮಾಡಬೇಕಿತ್ತು. ಆದರೆ ಉಪಚುನಾವಣೆ ಬಂದ ಕಾರಣ ಅದು ಆಗಲಿಲ್ಲ. ಈಗಲಾದರೂ ಕಾಂತರಾಜ್ ವರದಿ ಜಾರಿಯಾಗಬೇಕು. ಸಾಮಾಜಿಕ ನ್ಯಾಯ ಸಿಗಬೇಕಾದರೆ ಸಿದ್ದರಾಮಯ್ಯನಂತಹ ಅವರಿಂದ ಮಾತ್ರ ಸಾಧ್ಯ. ಈ ವರದಿಯಿಂದ ೧೯೭ ಹಿಂದುಳಿದ ಜಾತಿಗಳಿಗೆ ನ್ಯಾಯ ಸಿಗುತ್ತದೆ ಎಂದು ಅವರು ತಿಳಿಸಿದ್ದಾರೆ.

೨೦೧೬ರಲ್ಲಿ ರಾಜ್ಯ ಸರ್ಕಾರವು ಸುಮಾರು ೧೬೫ ಕೋಟಿ ರೂಗಳನ್ನು ಖರ್ಚು ಮಾಡಿ ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಈಗಾಗಲೇ ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದು, ದಮನಿತ ಸಮುದಾಯಗಳ ಬಗ್ಗೆ ಅಪಾರವಾದ ಕಾಳಜಿ ಮತ್ತು  ಸಾಮಾಜಿಕ ನ್ಯಾಯದ ಪರ ಇರುವ ಮುಖ್ಯಮಂತ್ರಿಗಳು ವರದಿಯನ್ನು ಒಪ್ಪಿ ಬಿಡುಗಡೆ ಮಾಡಬೇಕು. ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಜಾತಿ ಜನಗಣತಿ ನಡೆಸಿ ರಾಜ್ಯದಲ್ಲಿ ಜಾರಿಗೊಳಿಸುತ್ತೇವೆಂದು ವಾಗ್ದಾನ ನೀಡಿತ್ತು ಎನ್ನುವುದನ್ನು ಮರೆಯಬಾರದು ಎಂದರು.

ರಾಜ್ಯದಲ್ಲಿ ಪ್ರಬಲ ಜಾತಿಗಳಿಂದ ೨ಎ ಗೆ ಸೇರಿಸಬೇಕೆಂದು ಹೋರಾಟ ನಡೆಯುತ್ತಿವೆ. ಇದು ರಕ್ತ ಕ್ರಾಂತಿಗೆ, ಜಾತಿ-ಜಾತಿಗಳ ಮಧ್ಯೆ ಹೋರಾಟಕ್ಕೆ ಕಾರಣವಾಗಬಹುದು. ೨ಎ ಮೀಸಲಾತಿಯ ಹೋರಾಟಗಾರರಾದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿಯವರು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಬಸವಣ್ಣರವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದಾಗ ಸನ್ಮಾನಿಸಿದ್ದರು.

ಆದರೆ ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ನೀಡದೇ ಇರುವುದಕ್ಕೆ ಸಿದ್ದರಾಮಯ್ಯರವರು ಲಿಂಗಾಯಿತ ವಿರೋಧಿ ಎಂದು ಆಪಾದನೆ ಮಾಡುತ್ತಿದ್ದಾರೆ. ಆದರೆ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ೨ಎ ಅಡಿಯಲ್ಲಿ ಬರಲಿಕ್ಕೆ ನಾವು ಬಿಡುವುದಿಲ್ಲ. ಈ ಬಗ್ಗೆ ಒಕ್ಕೂಟ ಉಗ್ರವಾದ ಹೋರಾಟ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಚಳಿಗಾಲದ ಅಧಿವೇಶನವು ಮುಗಿಯುವದರೊಳಗೆ ಸಂಪುಟ ಸಭೆ ನಡೆಸಿ ಸಮೀಕ್ಷಾ ವರದಿ ಬಿಡುಗಡೆಗೊಳಿಸಲು ತಿರ್ಮಾನಿಸಬೇಕು. ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಪ್ರಬಲವಾಗಿರುವ ಸಮುದಾಯಗಳು ಇತ್ತಿಚಿನ ದಿನಗಳಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-೨ಎ ಮೀಸಲಾತಿ ಪಟ್ಟಿಗೆ ಸೇರಲು ಸಕಾರಕ್ಕೆ ಮನವಿ ಸಲ್ಲಿಸುತ್ತಿದ್ದು,

ಯಾವುದೇ ಕಾರಣಕ್ಕೂ ಮುಂದುವರೆದ ಜಾತಿಗಳನ್ನು ಹಿಂದುಳಿದ ವರ್ಗಗಳ ಪ್ರವರ್ಗ-೨ಎ ಮೀಸಲಾತಿ ಪಟ್ಟಿಗೆ ಸೇರಿಸಬಾರದು. ಒಂದು ವೇಳೆ ಮುಂದುವರೆದ ಜಾತಿಗಳು ಹಿಂದುಳಿದ ವರ್ಗಗಳ ಪ್ರವರ್ಗ-೨ಎ ಮೀಸಲಾತಿ ಪಟ್ಟಿಗೆ ಸೇರಿದ್ದೇ ಆದಲ್ಲಿ ಈಗಾಗಲೇ ಹಿಂದುಳಿದ ವರ್ಗಗಳ ಪ್ರವರ್ಗ-೨ಎ ಮೀಸಲಾತಿ ಪಟ್ಟಿಯಲ್ಲಿರುವ ಸುಮಾರು ೧೦೨ ಹಿಂದುಳಿದ, ಅತಿ ಹಿಂದುಳಿದ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಸಂವಿಧಾನ ಬದ್ದ ಹಕ್ಕನ್ನು ಕಸಿದುಕೊಂಡಂತ್ತಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

 ಶೋಷಿತ ಸಮುದಾಯಗಳ ಬಗ್ಗೆ ರಾಜ್ಯ ಸರ್ಕಾರ ಯಾವ ನಿಲುವು ಹೊಂದಿದೆ ಎಂಬುದರ ಬಗ್ಗೆ ಶೀಘ್ರವೇ ಸ್ಪಷ್ಟವಾಗಿ ತಿಳಿಸಬೇಕು ಇಲ್ಲವಾದಲ್ಲಿ ಡಿ.18ರಂದು ಬೆಳಗಾವಿ ಚಲೋ ಮತ್ತು ವಿಧಾನಸೌಧ ಮುಂಭಾಗದಲ್ಲಿ ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಗೋಷ್ಟಿಯಲ್ಲಿ ಅಖಿಲ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್.ವೆಂಕಟರಾಮಯ್ಯ, ಜಿಲ್ಲಾಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಹೆಚ್.ಮಂಜಪ್ಪ, ಸಂಚಾಲಕರಾದ ಡಿ.ದುರುಗೇಶ್, ಸಾಧಿಕ್‌ವುಲ್ಲಾ ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ