ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತೂಬಗೆರೆ ಹೋಬಳಿ ಎಸ್ ನಾಗೇನಹಳ್ಳಿ ಗ್ರಾಮದಲ್ಲಿ ಮನೆ ಬೀಗ ಒಡೆದ ಕಳ್ಳರು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ.
ಕಳ್ಳರು ಮನೆಯಲ್ಲಿದ್ದ 10 ಗ್ರಾಂ ಚಿನ್ನದ ಚೈನ್, ತಲಾ 15 ಗ್ರಾಂ ತೂಕದ ಬ್ರೇಸ್ಲೆಟ್ ಮತ್ತು ನೆಕ್ಲೇಸ್, 8 ಗ್ರಾಂ ಉಂಗುರ, ಮೂರು ಜೋಡಿ ಕಾಲ್ಗೆಜ್ಜೆ ಹಾಗೂ 1 ಲಕ್ಷ 30 ಸಾವಿರ ನಗದು ನಗದು ದೋಚಿ ಪರಾರಿಯಾಗಿದ್ದಾರೆ .
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.


