ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲ್ಲೂಕು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ ಚುನಾವಣೆ ಮುಗಿದು ಆರು ತಿಂಗಳು ಕಳೆದಿದ್ದರೂ ಇದುವರೆಗೂ ಸ್ಥಾಯಿ ಸಮಿತಿ ಸ್ಥಾನಕ್ಕೆ ಯಾರನ್ನೂ ಸಹ ಆಯ್ಕೆ ಮಾಡಿರಲಿಲ್ಲ.
ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಪ್ರೇಮ್ ಕುಮಾರ್ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಗಿದ್ದು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಒಟ್ಟು 6 ಸದಸ್ಯರ ಸ್ಥಾಯಿ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅದರಲ್ಲಿ ಬಾಶೆಟ್ಟಿಹಳ್ಳಿ ಪಟ್ಟಣ 11ನೇ ವಾರ್ಡಿನ ಸಿ.ನಾರಾಯಣಸ್ವಾಮಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು ಇತರೇ ಯಾರೂ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಕಾರಣ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ ಸ್ಥಾಯಿ ಸಮಿತಿಯ ಮೊದಲ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಸ್ಥಾಯಿ ಸಮಿತಿಯಲ್ಲಿ ಒಟ್ಟು ಆರು ಜನರ ತಂಡವಿದ್ದು ಕೃಷ್ಣಪ್ಪ ಬಿ _11ನೇ ವಾರ್ಡ್ ರಾಮಮೂರ್ತಿ 5ನೇ ವಾರ್ಡ್ ರಾಧಾಮಣಿ 18ನೇ ವಾರ್ಡ್, ಅರುಣ್ ಕುಮಾರ್ 10ನೇ ವಾರ್ಡ್, ಮುನಿಶಂಕರ್ 8ನೇ ವಾರ್ಡ್ ನ ಸದಸ್ಯರು ಸ್ಥಾಯಿ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕದ ಸ್ಥಳೀಯ ಸಂಸ್ಥೆಗಳ ನಿಯಮಾವಳಿಗಳ ಪ್ರಕಾರ, ಪಟ್ಟಣ ಪಂಚಾಯಿತಿಯಲ್ಲಿ ಸ್ಥಾಯಿ ಸಮಿತಿಯು (Standing Committee) ಅತ್ಯಂತ ಪ್ರಮುಖವಾದ ಮತ್ತು ಪ್ರಭಾವಶಾಲಿಯಾದ ಸಮಿತಿಯಾಗಿದೆ. ಪಟ್ಟಣ ಪಂಚಾಯಿತಿಯ ದೈನಂದಿನ ಕಾರ್ಯನಿರ್ವಹಣೆ ಮತ್ತು ಆಡಳಿತದಲ್ಲಿ ಇದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಸ್ಥಾಯಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರೆಲ್ಲರಿಗೂ ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಪ್ರೇಮಕುಮಾರ್ ಹಾಗೂ ಉಪಾಧ್ಯಕ್ಷರಾದ ಶ್ವೇತ ಮುರಳೀದರ್ ಅಭಿನಂದನೆಗಳನ್ನ ಸಲ್ಲಿಸಿದ್ದಾರೆ.



