Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಸಂಸದೀಯ, ಮಾನಹಾನಿಕರ ಪದಬಳಕೆ ಮಾಡಿಲ್ಲ-ಸಿ ಟಿ ರವಿ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನ ಪರಿಷತ್ತಿನಲ್ಲಿ ಮಾತನಾಡುವ ಸಂದರ್ಭದಲ್ಲಿ, ನಾನು ಯಾವುದೇ ಅಸಂಸದೀಯ, ಮಾನಹಾನಿಕರ ಪದಬಳಕೆ ಮಾಡಿಲ್ಲ. ನನ್ನ ನಿಲುವಿನಲ್ಲಿ ನಾನು ಸ್ಪಷ್ಟವಾಗಿದ್ದೇನೆ ಎಂದು ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಸಮರ್ಥಿಸಿಕೊಂಡಿದ್ದಾರೆ.


ಭಾರತದ ಪ್ರಧಾನ ಮಂತ್ರಿಯ ಹುದ್ದೆ ಎನ್ನುವುದು ಒಂದು ಉನ್ನತವಾದ, ಪಕ್ಷಾತೀತವಾದ ಸಂಸದೀಯ ಹುದ್ದೆ. ಯಾವ ಪಕ್ಷದ ನಾಯಕ ಪ್ರಧಾನಿಯಾಗಿದ್ದರೂ, ಅವರು ಸಮಸ್ತ ದೇಶದ ಪ್ರಧಾನಿ. ಆ ಸ್ಥಾನವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಮತ್ತು ಜವಾಬ್ದಾರಿ. ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಸಮರ್ಥರಲ್ಲದಿದ್ದರೆ,

ದೇಶದ ಜನರು ಸತತವಾಗಿ ಮೂರು ಅವಧಿಗೆ ಎನ್‌ಡಿಎ ಸರ್ಕಾರವನ್ನು ಅಧಿಕಾರಕ್ಕೆ ತರುತ್ತಿತ್ತೇನು? ಪ್ರಧಾನಿಯವರ ಕುರಿತು ಕರ್ನಾಟಕ ಕಾಂಗ್ರೆಸ್ ನಾಯಕರು ಆಡಿರುವ ಅಗೌರವದ ಮಾತುಗಳು ಸಮಸ್ತ ದೇಶಕ್ಕೇ ಮಾಡಿರುವ ಅವಮಾನ ಎಂದು ರವಿ ಟೀಕಾಪ್ರಹಾರ ಮಾಡಿದರು.

ಸರ್ಕಾರದ ನಡೆಗಳನ್ನು ಟೀಕಿಸಿ, ಕ್ರಮಗಳನ್ನು ಟೀಕಿಸಿ. ಪ್ರಜಾಪ್ರಭುತ್ವದಲ್ಲಿ ಅದಕ್ಕೆ ಸಂಪೂರ್ಣ ಸ್ವಾತಂತ್ರ್ಯವಿದೆ. ಆದರೆ, ಓರ್ವ ಪ್ರಧಾನಿಯ ಕುರಿತು ದೇಶದ್ರೋಹದ ಆರೋಪ ಮಾಡುತ್ತಾರೆಂದರೆ, ಕಾಂಗ್ರೆಸ್ ಎಷ್ಟರಮಟ್ಟಿಗೆ ಬೌದ್ಧಿಕ ದಿವಾಳಿತನ ಹೊಂದಿರಬಹುದು? ಎಷ್ಟರಮಟ್ಟಿಗೆ ಅಧಃಪತನಗೊಂಡಿರಬಹುದು? ಎಂದು ರವಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ