Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿ-ಖಾತಾ ನಿವೇಶನ/ಕಟ್ಟಡಗಳಿಗೆ ಎ-ಖಾತಾ ಸಂಪುಟ ಸಭೆ ಅನುಮೋದನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.


ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ಬಿ-ಖಾತಾನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ಎ-ಖಾತಾನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ.


ಕಾಂಗ್ರೆಸ್​​ ಭವನ ಟ್ರಸ್ಟ್​​ಗೆ ತುಮಕೂರು ಮತ್ತು ರಾಯಚೂರಿನಲ್ಲಿ ಜಾಗ ನೀಡಲು ಸಂಪುಟ ಒಪ್ಪಿದ್ದು, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ಬಿ-ಖಾತಾನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ಎ-ಖಾತಾನೀಡಲೂ ಒಪ್ಪಿಗೆ ಸೂಚಿಸಿದೆ.
ಸಚಿವ ಸಂಪುಟ ಸಭೆಯ ತೀರ್ಮಾನಗಳು
:


ಬೆಂಗಳೂರಿನ ಕೆಎಸ್ ಡಿಎಲ್ ಸಂಕೀರ್ಣಕ್ಕೆ 17.70 ಕೋಟಿ ಮೊತ್ತದ ಸಾಬೂನು ತಯಾರಿಸುವ ಯಂತ್ರ ಖರೀದಿ.
ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ 24.96 ಕೋಟಿ ವೆಚ್ಚದಲ್ಲಿ ಪಿಪಿಪಿ ಮಾದರಿಯ 50 ಟಿಪಿಡಿ ಬಯೋ ಸಿಎನ್​ಜಿ ಘಟಕ ಸ್ಥಾಪನೆ.

ಕೆಕೆಆರ್ ಡಿಬಿ ಅನುದಾನದಿಂದ ಕಲಬುರಗಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಮೆಗಾ ಡೇರಿ ನಿರ್ಮಾಣ.
ಕೆಕೆಆರ್ ಡಿಬಿ ಅನುದಾನದಿಂದ ಕಲಬುರಗಿಯಲ್ಲಿ 10 ಕೋಟಿ ವೆಚ್ಚದಲ್ಲಿ ಪ್ರಾದೇಶಿಕ ಸಹಕಾರ ಭವನ.
127.40
ಕೋಟಿ ಅಂದಾಜು ಮೊತ್ತದಲ್ಲಿ ಪಿಎಂ ಬಿಮಾ ಯೋಜನೆಯಡಿ 2024-26ನೇ ಸಾಲಿನಲ್ಲಿ ರಾಜ್ಯಾದ್ಯಂತ 196 ಎಸ್ಸಿ-ಎಎಎಂ ಸ್ಥಾಪನೆ.


24 ಕೋಟಿ ರೂ. ಅಂದಾಜು ಮೊತ್ತದಲ್ಲಿ ಬೆಂಗಳೂರಿನ ಜಯನಗರದಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ 2ನೇ ಹಂತದ ಕಟ್ಟಡ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
40
ಕೋಟಿ ರೂ. ಅಂದಾಜು ಮೊತ್ತದಲ್ಲಿ ಚಿಕ್ಕಬಳ್ಳಾಪುರದ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನೂತನ ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ಯಂತ್ರೋಪಕರಣ ಮತ್ತು ಪೀಠೋಪಕರಣ ಖರೀದಿ.

ಹೊಳೆನರಸೀಪುರ ಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯ 12.30 ಕೋಟಿ ರೂ. ಪರಿಷ್ಕೃತ ಮೊತ್ತಕ್ಕೆ ಅನುಮೋದನೆ.
ಚಾಮರಾಜನಗರ ಜಿಲ್ಲೆಯಲ್ಲಿ 166 ಗ್ರಾಮಗಳ ಬಹುಗ್ರಾಮ ಕುಡಿಯುವ ಸರಬರಾಜು ನೀರು ಯೋಜನೆಯ 3 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕಾಮಗಾರಿ 33.04 ಕೋಟಿ ಮೊತ್ತದಲ್ಲಿ ಅನುಷ್ಠಾನ.

ಹಳಿಯಾಳ ಪಟ್ಟಣಕ್ಕ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಯಡಿ ನಿರ್ಮಿಸಲಾಗಿರುವ ವಿವಿಧ ಘಟಕಗಳ 5 ವರ್ಷಗಳ ನಿರ್ವಹಣೆ ಮತ್ತು ದುರಸ್ತಿ ಕಾಮಗಾರಿಯನ್ನು 10.60 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಮಹಾತ್ಮಾ ಗಾಂಧಿ, ఇంದಿರಾ ಗಾಂಧಿ, ಜವಾಹರಲಾಲ್ ನೆಹರು ಮತ್ತು ರಾಜೀವ್ ಗಾಂಧಿ ಪುತ್ಥಳಿಗಳನ್ನು ಸ್ಥಾಪಿಸಲು ಅನುಮೋದನೆ.
ಲೋಕೋಪಯೋಗಿ ಇಲಾಖೆಯ ಮೂಲಕ 70.70 ಕೋಟಿ ವೆಚ್ಚದಲ್ಲಿ ಮಂಡ್ಯದ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ

ಆಡಳಿತ ಭವನ ನಿರ್ಮಾಣ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದುಬ್ಬನಶಶಿಯ ಮತ್ತು ಗಂಗೆಕೊಳ್ಳದ ಕಡಲ ತೀರದಲ್ಲಿ 11.03 ಕೋಟಿ ವೆಚ್ಚದಲ್ಲಿ ಸಮುದ್ರ ಕೊರೆತ ಪ್ರತಿಬಂಧಕ ಕಾಮಗಾರಿಯ ಪರಿಷ್ಕೃತ ಅಂದಾಜಿಗೆ ಅನುಮೋದನೆ.
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬಾಳೆಪುಣಿ ಗ್ರಾಮದ ಸ.ನಂ. 87/4ರಲ್ಲಿ 5 ಎಕರೆ ಜಮೀನನ್ನು ಎಲೆಕ್ಟ್ರಿಕ್ ಬಸ್‌ಗಳನ್ನು ಕಾರ್ಯಾಚರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗಕ್ಕೆ ಮಂಜೂರಿಗೆ ಒಪ್ಪಿಗೆ ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಭೂಮಿ ಮಂಜೂರು.


ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಲ್ಲುಕೋಟೆ ಗ್ರಾಮದ ಸ.ನಂ.49 ರಲ್ಲಿ 7.5 ಗುಂಟೆ ಜಮೀನು ಮತ್ತು ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಸಿರವಾರ ಸೀಮಾದಲ್ಲಿ 10 ಗುಂಟೆ ಜಮೀನನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರಿಗೆ ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.


33 ಕೈದಿಗಳಿಗೆ ಬಿಡುಗಡೆ:
ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ 33 ಆಪರಾಧಿಗಳಿಗೆ ಸನ್ನಡತೆ ಆಧಾರದ ಮೇಲೆ ಜೀವಾವಧಿ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇಬ್ಬರು ಶಿಕ್ಷಾ ಬಂಧಿಗಳ ಬಿಡುಗಡೆಗೆ ಕೇಂದ್ರ ಗೃಹ ಇಲಾಖೆ ಅನುಮತಿ ಪಡೆಯಲು ನಿರ್ಧರಿಸಲಾಗಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ