Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-25ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ.


ಆಯ್ಕೆಯಾದ 50 ಯುವಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000/- ಗಳ ಪ್ರೋತ್ಸಾಹ ಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ನೀಡಬೇಕು.


ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ 1/8 ಡೆಮ್ಮಿ ಆಳತೆಯಲ್ಲಿ ಕನಿಷ್ಠ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ, ಸ್ನಾತಕೋತ್ತರ ಪದವಿ (ಪಿ.ಹೆಚ್.ಡಿ)ಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು.


ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷಾ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಅಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ/ಸಂಗತಿಗಳು ಪ್ರಸ್ತಾಪ ವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳೊಂದಿಗಿನ ಹಸ್ತಪ್ರತಿಗಳನ್ನು ಹಿಂದಿರುಗಿಸ ಲಾಗುವುದಿಲ್ಲ. ತಮ್ಮ ಮೂಲ ಹಸ್ತಪ್ರತಿಯ ಒಂದು ಪ್ರತಿಯನ್ನು ತಮ್ಮ ಬಳಿಯೇ ಇಟ್ಟು ಕೊಳ್ಳುವುದು.


ಅರ್ಜಿಗಳೊಂದಿಗೆ ಹಸ್ತಪ್ರತಿಗಳನ್ನು 2025 ನೇ 24 ರ ಸಂಜೆ 5.30 ಗಂಟೆಯೊಳಗೆ ಅಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು - 560 002 - ಅವರಿಗೆ ಅರ್ಜಿ ನಮೂನೆಯೊಂದಿಗೆ ಡಿ.ಟಿ.ಪಿ. ಮಾಡಿದ ಹಸ್ತಪ್ರತಿಯನ್ನು ಕಳುಹಿಸಿಕೊಡುವುದು.


ಅರ್ಜಿ ನಮೂನೆಯನ್ನು ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ  ಅಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -560002 ಅಥವಾ ಇಲಾಖೆಯ ಜಾಲತಾಣ www.kannadapustakapradhikara.com ಹಾಗೂ ದೂರವಾಣಿ ಸಂಖ್ಯೆ : 080-22484516 / 22107704 ಕ್ಕೆ ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ತಿಳಿಸಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು