Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆಪ್’ ಮೂಲಕ ಮಾರುಕಟ್ಟೆ ಅವಕಾಶ: ನೋಂದಣಿಗೆ ಕರೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಹಿಳಾ ಉದ್ಯಮಿಗಳು ತಾವು ತಯಾರಿಸಿದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಕಂಡುಕೊಳ್ಳಲು ಅನುಕೂಲವಾಗುವಂತೆ
ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆಪ್ಅನ್ನು ಬಿಡುಗಡೆ ಮಾಡಲಾಗಿದ್ದು, ಜಿಲ್ಲೆಯ ಅರ್ಹ ಮಹಿಳಾ ಉದ್ಯಮಿಗಳು ಇದರಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

2026 ಜನವರಿ 9ರಂದು ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆಪ್ ಲಾಂಚ್ ಮಾಡಲಾಗಿದ್ದು, ಈ ಆಪ್‍ನಲ್ಲಿ ನೋಂದಾಯಿಸಿಕೊಳ್ಳಲು ಜಿಲ್ಲೆಯ ಮಹಿಳಾ ಉದ್ಯಮಿಗಳಿಗೆ ಅವಕಾಶ ನೀಡಲಾಗಿದೆ. ಸ್ತ್ರೀಶಕ್ತಿ ಸ್ವ-ಸಹಾಯ ಗುಂಪಿನ ಸದಸ್ಯರು, ಎನ್‍ಆರ್‍ಎಲ್‍ಎಂ ಫಲಾನುಭವಿಗಳು, ಎನ್‍ಆರ್‍ಎಲ್‍ಎಂ ಉದ್ಯಮಿಗಳು, ಅಕ್ಕ ಕೆಫೆ ಘಟಕಗಳ ನಿರ್ವಹಿಸುತ್ತಿರುವ ಮಹಿಳೆಯರು,

ಕರ್ನಾಟಕ ಸ್ಮಾಲ್ ಸ್ಕೇಲ್ ಇಂಡಸ್ಟ್ರೀಸ್ ಅಸೋಸಿಯೇಷನ್ ಘಟಕಗಳ ಮಹಿಳಾ ಉದ್ಯಮಿಗಳು, ರುಡ್‍ಸೆಟ್ ಮೂಲಕ ತರಬೇತಿ ಪಡೆದು ಸ್ವ-ಉದ್ಯೋಗ ನಡೆಸುತ್ತಿರುವ ಮಹಿಳೆಯರು, ನಿಗಮದ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆದ ಮಹಿಳಾ ಫಲಾನುಭವಿಗಳು, ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಮಹಿಳಾ ಉದ್ಯಮಿಗಳು ನೋಂದಾಯಿಸಿಕೊಳ್ಳಬಹುದಾಗಿದೆ.

ಆಸಕ್ತ ಮಹಿಳೆಯರು ತಾವು ತಯಾರಿಸುವ ಉತ್ಪನ್ನಗಳ ಸಂಪೂರ್ಣ ಮಾಹಿತಿಯೊಂದಿಗೆ ಚಿತ್ರದುರ್ಗ ನಗರದ  ಸ್ಟೇಡಿಯಂ ಹತ್ತಿರದ ಜಿಲ್ಲಾ ಬಾಲಭವನ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯ ಮಹಿಳಾ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಿ ತಮ್ಮ ವಿವರಗಳನ್ನು ಒದಗಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7019967954 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ