Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಿ-ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರ ಅಧ್ಯಕ್ಷತೆಯಲ್ಲಿ ಬುಧವಾರ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು ಹೀಗಿವೆ;

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ತಕ್ಷಣವೇ ಕ್ರಮ ಕೈಗೊಳ್ಳಬೇಕು.

ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ.* ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಈ ಕುರಿತು ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಲಿ.


 ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು.

ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರ್‌ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು.

ಕನಿಷ್ಠ ಬೆಂಬಲ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ಪ್ರಕ್ರಿಯೆ ನಡೆಸಬೇಕು. ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ.

ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ