Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಯಾನ್ಸರ್  ಮತ್ತು  ಭವಿಷ್ಯದಲ್ಲಿ ಆರೋಗ್ಯದ ಸವಾಲುಗಳು...

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು

ಕ್ಯಾನ್ಸರ್  ಮತ್ತು  ಭವಿಷ್ಯದಲ್ಲಿ ಆರೋಗ್ಯದ ಸವಾಲುಗಳು. ಸಾವನ್ನು ಘನತೆಯಿಂದ ಸ್ವೀಕರಿಸುವ ಮನೋಭಾವ...ಕೆಲವು ವರ್ಷಗಳ ಹಿಂದೆ ಮಾಧ್ಯಮದಲ್ಲಿ ಓದಿದ ಸುದ್ದಿ....

ಅಮೆರಿಕಾದ ಪ್ರಖ್ಯಾತ ಕ್ಯಾನ್ಸರ್‌ ಸಂಶೋಧನಾ ಕೇಂದ್ರ ಈ ಮಾರಣಾಂತಿಕ ಖಾಯಿಲೆ ಯಾವ ರೀತಿಯ ಜನರಿಗೆ ಬರುತ್ತದೆ ಮತ್ತು ಅದಕ್ಕೆ ಇರುವ ನಿರ್ಧಿಷ್ಟ ಕಾರಣಗಳ ಬಗ್ಗೆ ಸಂಶೋಧನೆ ಮಾಡಿ ಒಂದು ವರದಿ ಪ್ರಕಟಿಸುತ್ತದೆ. ಅದರಲ್ಲಿ ಬಂದ ಫಲಿತಾಂಶ....

ಶೇಕಡಾ 80% ರಷ್ಟು ಜನರಿಗೆ ಈ ಖಾಯಿಲೆ ಬೆಳವಣಿಗೆ ಹೊಂದಲು ನಿರ್ಧಿಷ್ಟ ಕಾರಣಗಳು ಇವೆ. ಉಳಿದ 20% ರಷ್ಟು ಜನರಿಗೆ ಏಕೆ ಬಂದಿದೆ ಎಂಬುದು ಅರ್ಥವಾಗುತ್ತಿಲ್ಲ.

 ಸದ್ಯಕ್ಕೆ " ದುರಾದೃಷ್ಟ " ಎಂದಷ್ಟೇ ಹೇಳಬೇಕಾಗುತ್ತದೆ ಎಂಬ ವರದಿ ನೀಡಿದೆ.

ಯಾವುದೇ ಮಾನದಂಡಗಳಿಂದ ನೋಡಿದರೂ ಒಬ್ಬ ವ್ಯಕ್ತಿಗೆ ಒಂದು ರೀತಿಯ ಕ್ಯಾನ್ಸರ್ ಬರಲೇಬಾರದು ಎಂದಿದ್ದರೂ ಆತನಿಗೆ ಬಂದಿರುವ ಆಶ್ಚರ್ಯಕರ ಸಂಗತಿ ಈ ಸಂಶೋಧನೆಯಲ್ಲಿ ಕಂಡುಬಂದಿದೆ.....

ಇದರ ಒಟ್ಟು ಸಾರಾಂಶ, ಯಾರಿಗೆ ಬೇಕಾದರೂ ಬರಬಹುದು ಮತ್ತು ಯಾವಾಗ ಬೇಕಾದರೂ ಬರಬಹುದಾದ ಖಾಯಿಲೆ ಕ್ಯಾನ್ಸರ್....

ಇದರ ಜೊತೆಗೆ ಮನುಷ್ಯರ ಮೂಲಭೂತ ಅವಶ್ಯಕತೆಗಳಾದ ಗಾಳಿ ನೀರು ಆಹಾರದ ಮಲಿನತೆಯಿಂದಾಗಿ ಕ್ಯಾನ್ಸರ್ ಬಹುಬೇಗ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ ಎಂಬುದು ವಾಸ್ತವಾಂಶ. ಕ್ಯಾನ್ಸರ್ ಕಾರಕ ಅಂಶಗಳು ದೇಹದಲ್ಲಿ ಅಭಿವೃದ್ಧಿ ಹೊಂದಲು ಈ ಮಾಲಿನ್ಯನ ಕೊಡುಗೆ ತುಂಬಾ ಇದೆ......

ವಿಶ್ವದ  ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ, ಅಜ್ಞಾನ, ಮೂಢನಂಬಿಕೆ, ಬಡತನದ ಹೊಡೆತದಿಂದ ಇನ್ನೂ ಚೇತರಿಸಿಕೊಳ್ಳದ, ವೈದ್ಯಕೀಯ ಸೌಲಭ್ಯಗಳು ಇನ್ನೂ ಸಾಕಷ್ಟು ಜನರಿಗೆ ತಲುಪದ ಮತ್ತು ಅತ್ಯಂತ ದುಬಾರಿಯಾಗಿರುವ ವ್ಯವಸ್ಥೆಯಲ್ಲಿ ಇರುವಾಗ ಕ್ಯಾನ್ಸರ್ ಮನುಷ್ಯನ ದೇಹದ ಮೇಲೆ ದಾಳಿ ಮಾಡುವುದರ ಜೊತೆಗೆ ಸಮಾಜದ ಮೇಲೂ ಪರೋಕ್ಷವಾಗಿ ದಾಳಿ ಮಾಡುತ್ತಿದೆ.......

ಅಪಘಾತ, ಅನಾರೋಗ್ಯ, ಅನಿರೀಕ್ಷಿತ, ಅಕಾಲಿಕ ಸಾವು, ಆತ್ಮಹತ್ಯೆ ಮುಂತಾದ ಘಟನೆಗಳು ಕರುಳು ಹಿಂಡುವ ಸನ್ನಿವೇಶ ಸೃಷ್ಟಿ ಮಾಡುತ್ತವೆ. ಸತ್ತ ವ್ಯಕ್ತಿ ಇನ್ನೆಂದೂ ಬರುವುದಿಲ್ಲ ಎಂಬುದು ಒಂದು ಕಡೆ, ಸ್ವತಃ ನಮ್ಮ ಸಾವು ಈ ಲೋಕದಿಂದ ನಮ್ಮನ್ನು ಶಾಶ್ವತವಾಗಿ ಇಲ್ಲವಾಗಿಸುತ್ತದೆ ಎಂಬ ಅರಿವು ನಮಗಿರುವುದರಿಂದ ಅದು ಉಂಟುಮಾಡುವ ಭಯ, ಸಾವು ಅನಿವಾರ್ಯ ಎಂದು ಭಾವಿಸಿ ಆಧ್ಯಾತ್ಮಿಕ ಭಾವನೆಯಿಂದ ಸ್ವಲ್ಪ ಸಮಾಧಾನ ಮಾಡಿಕೊಳ್ಳಬಹುದಾದರೂ ನಮ್ಮ ಸಮಾಜದ ಒಟ್ಟು ವಾತಾವರಣ ಅಷ್ಟೊಂದು ಉತ್ತಮವಾಗಿಲ್ಲದಿರುವುದರಿಂದ ನಮ್ಮ ಪ್ರೀತಿ ಪಾತ್ರರು ಭವಿಷ್ಯದಲ್ಲಿ ಅನುಭವಿಸಬಹುದಾದ ಕಷ್ಟಗಳನ್ನು ನೆನೆದು ನಮ್ಮ ನೋವು ಆತಂಕ ಮತ್ತಷ್ಟು ಹೆಚ್ಚಾಗುತ್ತದೆ.....

ಈ ಸಾವಿನ ನೋವಿಗೆ ಪರಿಹಾರವೇನು ? ಬಹುತೇಕ ಜಗತ್ತಿನ ಜೀವಿಗಳ ಹೋರಾಟ ಬದುಕಿಗಾಗಿಯೇ ಇರುತ್ತದೆ. ಪ್ರಾಣ ಉಳಿಸಿಕೊಳ್ಳಲು ತನ್ನೆಲ್ಲಾ ಶಕ್ತಿಯನ್ನು ಉಪಯೋಗಿಸುತ್ತಾರೆ ಸಾವು ಖಚಿತ ಎಂದು ತಿಳಿದಿದ್ದರೂ ಮತ್ತು ಸತ್ತ ನಂತರ ಸಾವು ತನ್ನ ಅರಿವಿಗೆ ಬರುವುದಿಲ್ಲ ಎಂದು ಅರ್ಥವಾಗಿದ್ದರೂ.....

ಇತರರ ಸಾವನ್ನು ಮತ್ತು ನಮ್ಮ ಸಾವಿಗೆ ಕೆಲವೇ ಸಮಯವಿದೆ ಎಂದು ತಿಳಿದಾಗ ಅದನ್ನು ಹೆಚ್ಚಿನ ಭಯ ಆತಂಕಗಳಿಲ್ಲದೆ  ಘನತೆಯಿಂದ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳುವುದು ಒಂದು ಬಹುದೊಡ್ಡ ಸವಾಲಿನ ಮಾನಸಿಕ ಸ್ಥಿತಿ. ಸಹಜ ಪರಿಸ್ಥಿತಿಯಲ್ಲಿ ಯಾವುದೇ ತೊಂದರೆ ಇಲ್ಲದಿರುವಾಗ ಇದನ್ನು ಹೇಳುವುದು - ಬರೆಯುವುದು - ಬೇರೆಯವರಿಗೆ ಧೈರ್ಯ ತುಂಬುವುದು ಸುಲಭ. ಆದರೆ ಸ್ವತಃ ಅಂತಹ ಸಂದರ್ಭವನ್ನು ಎದುರಿಸುವುದು ಕಷ್ಟ ಕಷ್ಟ.

ಹಣದ ಒತ್ತಡ, ನಮ್ಮ ಸುತ್ತಮುತ್ತಲಿನ ಜನರ ಅಜ್ಞಾನದಿಂದ ಕೂಡಿರುವ ಹಿಂಸಾತ್ಮಕ ಮನೋಭಾವ, ಸಾವಿನ ಬಗ್ಗೆ ಇರುವ ಪೂರ್ವಾಗ್ರಹ ಪೀಡಿತ ಮಾನಸಿಕತೆ, ಅತಿಯಾದ ಭಾವುಕ ಪ್ರೀತಿ ಅಥವಾ ಅಸೂಯಪರ ವ್ಯಂಗ್ಯ, ಪರೋಕ್ಷ ನಿಂದನೆಗಳು, ಕಷ್ಟದ ಸಮಯದಲ್ಲಿ ಸಹಾಯ ಸಾಂತ್ವಾನಕ್ಕೆ ಬರದಿರುವುದು ಮುಂತಾದ ಎಲ್ಲವೂ ಈ ನೋವಿಗೆ ತನ್ನ ಕಾಣಿಕೆ ಸಲ್ಲಿಸುತ್ತವೆ.....

ಕಾರಣಗಳೇನೋ ಪತ್ತೆ ಹಚ್ಚಬಹುದು. ಪರಿಹಾರ...... 

ಕ್ಯಾನ್ಸರ್ ಮತ್ತು ಆ ರೀತಿಯ ಮಾರಣಾಂತಿಕ ಖಾಯಿಲೆಗಳು ಬರದಂತೆ ತಡೆಯಲು ವೈದ್ಯಕೀಯ ಕ್ಷೇತ್ರ ಹೆಚ್ಚು ಶ್ರಮಪಡಬೇಕು. ಆದರೆ ಖಾಯಿಲೆ ಬಂದ ನಂತರ ಅದನ್ನು ಸ್ವೀಕರಿಸುವ ಮನಸ್ಥಿತಿ ತೀರಾ ಖಾಸಗಿಯಾದದ್ದು. ನಮ್ಮ ನಿಜವಾದ ಜ್ಞಾನದ ಮಟ್ಟ, ನಮ್ಮ ವಾಸ್ತವದ ವ್ಯಕ್ತಿತ್ವ ಅನಾವರಣಗೊಳ್ಳುವುದು ಆಗಲೇ.....

ಅದಕ್ಕಾಗಿಯೇ ದೇವರು, ಧರ್ಮ, ಕರ್ಮ, ಜನ್ಮಾಂತರ, ದೇಹಕ್ಕೆ ಸಾವು ಆತ್ಮಕ್ಕಲ್ಲ ಎಂಬ ವೇದಾಂತ ಎಲ್ಲವನ್ನೂ ಸೃಷ್ಟಿ ಮಾಡಲಾಗಿದೆ. ಇವು ಸಾವಿನ ಭಯವನ್ನು ಎಷ್ಟರಮಟ್ಟಿಗೆ ಕಡಿಮೆ ಮಾಡಿದೆಯೋ ಅದು ಅವರವರ ವೈಯಕ್ತಿಕ ಮನೋಭಾವ ಅವಲಂಬಿಸಿದೆ....

ಆದರೆ ಸಾವಿಗೆ ಸಿದ್ದರಾಗುವ ಮನಸ್ಥಿತಿ ಬೆಳೆಸಿಕೊಂಡು ಸಾವನ್ನು ಘನತೆಯಿಂದ ಸ್ವೀಕರಿಸುವ ವೈಯಕ್ತಿಕ, ಕೌಟುಂಬಿಕ ಹಾಗು ಒಟ್ಟು ಸಮಾಜದ ಸಾಮೂಹಿಕ ಪ್ರಯತ್ನಗಳು ನಡೆಯಬೇಕಿದೆ. ಇದು ನಮ್ಮ ಆ ನೋವುಗಳನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಬಹುದು.....

ಕೆಲವು ಪ್ರಖ್ಯಾತರು ಅಪಾರ ಹಣ, ಒಂದಷ್ಟು ಯಶಸ್ಸು, ಸಾವಿನೊಂದಿಗೆ ಸೆಣೆಸಾಟ ವೃತ್ತಿ ಎಲ್ಲವೂ ಅನುಭವಿಸಿರುವ ಕಾರಣ ಮಾಧ್ಯಮಗಳ ಮುಂದೆ ಧೈರ್ಯ ಪ್ರದರ್ಶಿಸಬಹುದು. ಆದರೆ ಖಾಸಗಿಯಾಗಿ, ಒಂಟಿತನದ ಸಮಯದಲ್ಲಿ ಅವರು ಅನುಭವಿಸುತ್ತಿರುವ ನೋವು ನಮ್ಮ ಊಹೆಗೆ ನಿಲುಕುವುದಿಲ್ಲ.ಇನ್ನು‌ ಸಾಮಾನ್ಯ ಜನರ ಪಾಡು ...........

ಎಷ್ಟೇ ಬರೆದರೂ ಸಾವಿನ ನಿರೀಕ್ಷೆಯ ಕ್ಷಣಗಳು, ಅದರ ಒತ್ತಡ, ಸಾವಿನ ಸ್ವೀಕಾರದ ಸ್ಥಿತ ಪ್ರಜ್ಞತೆ, ಅದಕ್ಕೆ ಇರಬಹುದಾದ ಪರಿಹಾರ ಇವುಗಳನ್ನು ಅಕ್ಷರಗಳಲ್ಲಿ ಮೂಡಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕೆ ಕ್ಷಮೆಯಾಚಿಸುತ್ತಾ......

ಲೇಖನ-ವಿವೇಕಾನಂದ. ಎಚ್.ಕೆ.9844013068........

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ