Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿ ಗಣತಿ ಸಮೀಕ್ಷೆ: ಯಾವ ಸಮುದಾಯದವರಿಗೂ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಕಲಬುರ್ಗಿ:
ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 ಅವರು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಬುಧವಾರ ಮಾತನಾಡಿದರು. ವಿಭಾಗೀಯ ಮಟ್ಟದ  ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.

ಜಾತಿ ಸಾಮಾಜಿಕ ಸಮೀಕ್ಷೆ: ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜಿನಾಮೆ ನೀಡುವಂತೆ ಹೇಳಿಕೆ ನೀಡಿರುವ ಬಗ್ಗೆ  ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ  ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದುಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.  ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು ಎಂದರು.

ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ತಿಳಿಸಿದರು. ದಾವಣಗೆರೆ ಮಹಿಳೆಗೆ ಥಳಿತ ಪ್ರಕರಣ: ಕಾನೂನು ಉಲ್ಲಂಘಿಸಿದರೆ ಬಲಿ ಹಾಕುತ್ತೇವೆ.

ದಾವಣಗೆರೆಯಲ್ಲಿ ಅನೈತಿಕ ಸಂಬಂಧ ಆರೋಪಿಸಿ  ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆದಿರುವ  ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಯಾರೇ ತಪ್ಪು ಮಾಡಿದರೂ ಕೂಡ, ಕಾನೂನು ಉಲ್ಲಂಘಿಸಿದರೆ ಯಾರು ಎಷ್ಟೇ ಪ್ರಬಲವಾಗಿದ್ದರೂ, ಬಲಿ ಹಾಕುತ್ತೇವೆ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಬಿಜೆಪಿಯದ್ದು ದ್ವೇಷದ ರಾಜಕಾರಣ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಚಾರ್ಜ್ ಶೀಟ್ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿಯವರು ರಾಜಕೀಯ ಉದ್ದೇಶದಿಂದ ಇದನ್ನು ಮಾಡುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿನ್ನೆ ಮೊನ್ನೆ ಪ್ರಾರಂಭವಾಗಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಆಸ್ತಿ ಮುಟ್ಟುಗೋಲು ಹಾಕುವುದು, ಚಾರ್ಚ್ ಶೀಟ್ ಹಾಕುವುದು ರಾಜಕೀಯ ದ್ವೇಷದಿಂದ ಮಾಡುತ್ತಿದ್ದಾರೆ ಎಂದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ