Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿ ಸಮೀಕ್ಷೆ ರಾಜ್ಯದಲ್ಲೇ ಜಿಲ್ಲೆಗೆ ಪ್ರಥಮ ಸ್ಥಾನ-ಜಿಲ್ಲಾಧಿಕಾರಿ

Advertisement
ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಸಾಮಾಜಿಕ ಮತ್ತು ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ಕಾರ್ಯ ಮಾಡಲಾಗಿದ್ದು ಇಡೀ ರಾಜ್ಯದಲ್ಲೇ ಜಿಲ್ಲೆಗೆ ಪ್ರಥಮ ಸ್ಥಾನ ಬಂದಿರುವುದು ಹೆಮ್ಮೆಯ ವಿಷಯ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.


ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು
ರಾಜ್ಯದ ಎಲ್ಲಾ ವರ್ಗಗಳ/ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ಮುಖಾಂತರ ಸಮಗ್ರ ಅಂಕಿ-ಅಂಶಗಳನ್ನು ಸಂಗ್ರಹಿಸುವ ಕಾರ್ಯ ದಿನಾಂಕ: 22.09.2025 ರಿಂದ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಕೈಗೊಳ್ಳಲಾಗಿರುತ್ತದೆ.


ಮಂಡ್ಯ ಜಿಲ್ಲೆಯಲ್ಲಿ ಒಟ್ಟು 5,10,000 ಕುಟುಂಬಗಳನ್ನು ಸಮೀಕ್ಷೆ ಮಾಡಲಾಗಿದ್ದು, ಒಟ್ಟು 18, 29 ,582 ಜನಸಂಖ್ಯೆಯ ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದೆ.
ಈ ನಿಟ್ಟಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ ಹಾಗೂ ಮಂಡ್ಯ ಜಿಲ್ಲೆಯು ರಾಜ್ಯದಲ್ಲೇ 1ನೇ ಸ್ಥಾನವನ್ನು ಪ್ರತಿನಿಧಿಸಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.


ಈ ಸಮೀಕ್ಷಾ ಕಾರ್ಯದ ಯಶಸ್ಸಿಗೆ ಸಾಕಷ್ಟು ಜನರು ಹಗಲೂ ಇರುಳು ಎಂಬುದನ್ನೂ ಲೆಕ್ಕಿಸದೆ ದುಡಿದಿದ್ದಾರೆ. ನಮ್ಮ ಜಿಲ್ಲಾಹಂತದ ಮತ್ತು ತಾಲ್ಲೂಕು ಹಂತದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ಸಮಸ್ತ ಶಿಕ್ಷಕ ಸಮುದಾಯದ ಸಕ್ರಿಯ ಭಾಗವಹಿಸುವಿಕೆ ಮತ್ತು ಪಾಲ್ಗೊಳ್ಳುವಿಕೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಈ ಸಮೀಕ್ಷಾ ಕಾರ್ಯ ನಮ್ಮೆಲ್ಲರ ಜವಾಬ್ದಾರಿ ಎಂಬ ಮನೋಭಾವದೊಂದಿಗೆ ಪರಿಭಾವಿಸಿ ಪ್ರತಿ ಹಂತದಲ್ಲೂ ನಮ್ಮೊಟ್ಟಿಗೆ  ಸಹಕರಿಸುವ ಮೂಲಕ ನಿಮ್ಮ ಬದ್ಧತೆ ಮತ್ತು ಕರ್ತವ್ಯ ತತ್ಪರತೆಯನ್ನು  ಪ್ರದರ್ಶಿಸಿರುತ್ತೀರಿ. ನಿಮ್ಮ ತಂಡ ಸ್ಪೂರ್ತಿ, ಇಚ್ಛಾ ಶಕ್ತಿಯ ಜೊತೆಗೆ  ಮಂಡ್ಯ ಜಿಲ್ಲೆಯ ಸಾರ್ವಜನಿಕರು ಧನಾತ್ಮಕವಾಗಿ ಸ್ಪಂದನೆ ನೀಡಿ ಸಹಕರಿಸಿದ್ದು ಸಹ  ಈ ಯಶಸ್ಸಿಗೆ ಕಾರಣವಾಗಿದೆ. ಅದಕ್ಕಾಗಿ ನಿಮಗೆ ತುಂಬು ಹೃದಯದ ಧನ್ಯವಾದಗಳು ಎಂದು ಜಿಲ್ಲಾಧಿಕಾರಿ ಕುಮಾರ್ ತಿಳಿಸಿದ್ದಾರೆ.

ಈ ಬೃಹತ್ ಕಾರ್ಯದಲ್ಲಿ ಭಾಗಿಯಾದ ಜಿಲ್ಲಾ ಹಂತದ ಅಧಿಕಾರಿಗಳು, ತಾಲ್ಲೂಕು ನೋಡಲ್ ಅಧಿಕಾರಿಗಳು, ತಹಶೀಲ್ದಾರ್ ಗಳು , ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪುರಸಭೆ  ಮುಖ್ಯಾಧಿಕಾರಿಗಳು, ಶಿಶು ಅಭಿವೃದ್ಧಿ  ಯೋಜನಾಧಿಕಾರಿಗಳು, ಸಮೀಕ್ಷಾ ಮೇಲ್ವಿಚಾರಕರು,

ಸಮೀಕ್ಷಾದಾರರು, ವಿಶೇಷವಾಗಿ ಅಪಾರ ಶಿಕ್ಷಕಸಮುದಾಯ ಹಾಗೂ ಕುಟುಂಬಗಳನ್ನು ಗುರುತಿಸುವ ಕಾರ್ಯದಲ್ಲಿ  ಸಹಕರಿಸಿದ ಚೆಸ್ಕಾಂ ನೌಕರರು, ಗ್ರಾಮಪಂಚಾಯತಿ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತರು  ಎಲ್ಲರಿಗೂ ಅಭಿನಂದನೆಗಳನ್ನು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ