LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಲ ಸಂರಕ್ಷಣೆಗೆ ನಗರಸಭೆಯಿಂದ ‘ಕ್ಯಾಚ್ ದಿ ರೈನ್' ಅಭಿಯಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರ ಪ್ರದೇಶದ ನೀರಿನ ಮಿತ ಬಳಕೆ
, ಮಳೆ ನೀರು ಕೊಯ್ಲು, ಅಂತರ್ಜಲ ಮರುಪೂರಣ ಹಾಗೂ ಜಲಮೂಲಗಳ ಸಂರಕ್ಷಣೆ ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಸಹಯೋಗದ ಜಲ ಸಂಚಯ ಜನ ಭಾಗಿದಾರಿ' ಉಪಕ್ರಮದಡಿ ನಗರಸಭೆಯು ಕ್ಯಾಚ್ ದಿ ರೈನ್' ಅಭಿಯಾನ ಹಮ್ಮಿಕೊಂಡಿದೆ.

ಈ ಅಭಿಯಾನದ ಅಂಗವಾಗಿ, ಈಗಾಗಲೇ ಆಗಸ್ಟ್ 10ರಂದು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಹಾಗೂ ಚಳ್ಳಕೆರೆ ವೃತ್ತದಲ್ಲಿ ಬೀದಿ ನಾಟಕದ ಮೂಲಕ ನೀರು ಉಳಿಸುವ ಕುರಿತು ಜಾಗೃತಿ ಮೂಡಿಸಲಾಗಿದೆ. ಆಗಸ್ಟ್ 13ರಂದು ಬೆಳಿಗ್ಗೆ 10 ಗಂಟೆಗೆ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ಹಾಗೆಯೇ, ಆಗಸ್ಟ್ 19ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಸಭಾಂಗಣದಲ್ಲಿ ಹಿರಿಯ ಭೂವಿಜ್ಞಾನಿಗಳೊಂದಿಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಜಲ ಸಂರಕ್ಷಣಾ ಅಭಿಯಾನವನ್ನು ಯಶಸ್ವಿಗೊಳಿಸಬೇಕಾಗಿ ಚಿತ್ರದುರ್ಗ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ಕಿಚ್ಚು: ಸುಪ್ರೀಂ ತೀರ್ಪು ನೋಡಿ ಮುಂದಿನ ನಿರ್ಧಾರ, ಹೆಚ್‌ಡಿಕೆಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು!ಉಗ್ರರೂಪ ತಾಳಿದ ಕಾವೇರಿ ಕಿಚ್ಚು: ಹೆದ್ದಾರಿ ತಡೆದು ರೈತರ ಬೃಹತ್ ಪ್ರತಿಭಟನೆ!ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ: ಸಾರಿಗೆ, ಶಾಲಾ-ಕಾಲೇಜು ಕಾರ್ಯನಿರ್ವಹಣೆ?ಪ್ರಜ್ವಲ್ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ: DIG ನೇತೃತ್ವದಲ್ಲಿ ಆಂತರಿಕ ತನಿಖೆ!ಐಎಎಸ್ ಅಧಿಕಾರಿಗಳ ವರ್ಗಾವಣೆ: ಕೆಪಿಎಸ್‌ಸಿ ಪರೀಕ್ಷಾ ಜವಾಬ್ದಾರಿ ಕೆಇಎ 'ಎಚ್. ಪ್ರಸನ್ನ' ಹೆಗಲಿಗೆ!ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಹಿರಿಯ ನಾಯಕರ ರಹಸ್ಯ ಸಭೆ: ಡಾ. ಯತೀಂದ್ರ ಸಮಾಧಾನದ ಯತ್ನ!ಜೈಲಿನ ಮೇಲೆ ಸಿಸಿಬಿ ದಾಳಿ ನನ್ನದೇ ಆದೇಶ: ಪ್ರಿಯಾಂಕ್ ಖರ್ಗೆ!ಜೈಲಿನ ಮೇಲೆ ಸಿಸಿಬಿ ಹಠಾತ್ ದಾಳಿ: ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್ ಡ್ರೈವ್ ಪತ್ತೆ- FIR ದಾಖಲು!ನೂತನ ಸಚಿವರಿಗೆ ಖಾತೆ ಹಂಚಿಕೆ: ರಾಮಲಿಂಗಾರೆಡ್ಡಿ, ಮುನಿಯಪ್ಪ ಖಾತೆ ಬದಲಾವಣೆ–ಯಾರಿಗೆ ಯಾವ ಇಲಾಖೆ?ಯುಎಪಿಎ ಪ್ರಕರಣಗಳ ಸುದೀರ್ಘ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ