Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಳ್ಳಿಕಾರ ಸಮಾಜ ಅಧ್ಯಯನ ನಂತರ ಪ್ರವರ್ಗ-1 ಮೀಸಲು-ಸಿಎಂ ಭರವಸೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡುತ್ತೇನೆ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ಸೂಕ್ತ ತೀರ್ಮಾನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.


ಬೆಂಗಳೂರಿನ ಪೂರ್ಣಿಮಾ ಪ್ಯಾಲೇಸ್ ನಲ್ಲಿ ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಆಯೋಜಿಸಿದ್ದ ಹಳ್ಳಿಕಾರ ಸಮುದಾಯದ ಸಮಾವೇಶ ಉದ್ಘಾಟಿಸಿ ಹಳ್ಳಿಕಾರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3A ಯಿಂದ ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಇದೆ. ಸಮಾಜದಲ್ಲಿ ಯಾವ್ಯಾವ ಜಾತಿಯ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ತಿಳಿಯಲು ಜಾತಿ ಸಮೀಕ್ಷಾ ವರದಿಗಳು ಮುಖ್ಯ. 2011 ರ ಜನಗಣತಿಯೇ ಕೊನೆ ಗಣತಿ. ಈಗ ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ.

ಕೇಂದ್ರದ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ 10% ಮೀಸಲಾತಿ ನೀಡಿದೆ. ಈ ವ್ಯಾಪ್ತಿಯೊಳಗೆ ಹಳ್ಳಿಕಾರ ಸಮುದಾಯ ಬರುತ್ತದೆಯಾ ಎನ್ನುವುದು ಪರಿಶೀಲಿಸಬೇಕಿದೆ. ಈ ಸಮುದಾಯವನ್ನು ಪ್ರವರ್ಗ 3ಎ ಗೆ ಸೇರಿಸಿರುವುದು ಸರಿಯಲ್ಲ.

ಆದ್ದರಿಂದ ಶಾಶ್ವತ ಹಿಂದುಳಿದ ಆಯೋಗಕ್ಕೆ ನಿಮ್ಮ ಬೇಡಿಕೆ ಕಳುಹಿಸಿ ಅಧ್ಯಯನ ಮಾಡಿಸಿ ವರದಿ ಪಡೆಯಲಾಗುವುದು. ಆ ಬಳಿಕ ಸಮುದಾಯಕ್ಕೆ ನ್ಯಾಯಯುತವಾಗಿ ಏನು ಸಲ್ಲಬೇಕು ಎನ್ನುವುದನ್ನು ಪರಿಶೀಲಿಸಲಾಗುವುದು ಎಂದು ಸಿಎಂ ಹೇಳಿದರು.

ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. 2013-18ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಸಾಕಷ್ಟು ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ. ಇದನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ಕಾಂತರಾಜು ತಿಳಿಸಿದ್ದಾರೆ. ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು.

ಈ ಹಿಂದೆ ನಾನು ಸಿಎಂ ಆಗಿದ್ದಾಗ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಲಿಲ್ಲ.

ಬಳಿಕ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾಂತುರಾಜು ಅವರು ವರದಿಯನ್ನು ಸಲ್ಲಿಸಲು ಸಜ್ಜಾಗಿದ್ದರು. ಆದರೆ ಕುಮಾರಸ್ವಾಮಿಯವರು ವರದಿ ಸ್ವೀಕರಿಸಲು ಒಪ್ಪಿರಲಿಲ್ಲ. ನಂತರ ಬಿಜೆಪಿ ಸರ್ಕಾರ ಬಂದರೂ, ವರದಿಯನ್ನು ಸ್ವೀಕರಿಸಲಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದರು.



ಹಳ್ಳಿಕಾರರ ಸಂಘದ ಉಪಾಧ್ಯಕ್ಷ ಕೆ.ಎಂ.ನಾಗರಾಜು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಸಚಿವರುಗಳಾದ ರಾಮಲಿಂಗಾರೆಡ್ಡಿ, ಡಿ.ಸುಧಾಕರ್, ಶಾಸಕರಾದ ಎಸ್.ಟಿ.ಸೋಮಶೇಖರ್, ಪ್ರಿಯಕೃಷ್ಣ, ಹಳ್ಳಿಕಾರ ಸಮುದಾಯದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಭಾಗಿಯಾಗಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ