ಚಂದ್ರವಳ್ಳಿ ನ್ಯೂಸ್, ಐಮಂಗಳ:
2025-26ನೇ ಶೈಕ್ಷಣಿಕ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ಪರೀಕ್ಷೆಯ ಕನ್ನಡ ವಿಷಯದಲ್ಲಿ 100ಕ್ಕೆ 99 ಅಂಕಗಳನ್ನು ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿ ಸಿದ್ದೇಶ್ ಮನೂರ್ ಎಂ.ಕೆ ಅವರನ್ನು ವಿಶೇಷವಾಗಿ ಗೌರವಿಸಿ ಅಭಿನಂದಿಸಲಾಯಿತು.
ಸಾಧಕ ವಿದ್ಯಾರ್ಥಿ ಸಿದ್ದೇಶ್ ಅವರ ಈ ವಿಶೇಷ ಸಾಧನೆಯನ್ನು ಗುರುತಿಸಿ, ಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ಬೆಳಗೆರೆ ಅವರು ಬಹುಮಾನ ಹಾಗೂ ಸನ್ಮಾನ ನೀಡಿ ಶುಭ ಹಾರೈಸಿದರು.
ಈ ಕಾರ್ಯಕ್ರಮದ ಶುಭ ಸಂದರ್ಭದಲ್ಲಿ ಐಮಂಗಳ ಹೋಬಳಿ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತಿಪ್ಪೇಸ್ವಾಮಿ ಹಾಗೂ ಪರಿಷತ್ತಿನ ಪದಾಧಿಕಾರಿಗಳಾದ ಪ್ರಹ್ಲಾದ್ ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಯ ಕನ್ನಡ ಭಾಷಾ ಪ್ರೇಮ ಮತ್ತು ಸಾಧನೆಯನ್ನು ಶ್ಲಾಘಿಸಿದರು.



