Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜೈಲಿನ ಮೇಲೆ ಸಿಸಿಬಿ ದಾಳಿ ನನ್ನದೇ ಆದೇಶ: ಪ್ರಿಯಾಂಕ್ ಖರ್ಗೆ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ಸಿಸಿಬಿ ಹಠಾತ್ ದಾಳಿ ಸ್ವಯಂಪ್ರೇರಿತವಲ್ಲ
; ಅದು ತಮ್ಮದೇ ನೇರ ಆದೇಶದ ಮೇರೆಗೆ ನಡೆದ ಕಾರ್ಯಾಚರಣೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಸ್ಪಷ್ಟಪಡಿಸಿದ್ದಾರೆ.

ಅತ್ಯಾಚಾರ ಪ್ರಕರಣದ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೇರಿದಂತೆ ಕೈದಿಗಳ ಬಳಿ ಸ್ಮಾರ್ಟ್‌ಫೋನ್ ಹಾಗೂ ಪೆನ್ ಡ್ರೈವ್‌ಗಳು ಪತ್ತೆಯಾದ ಬೆನ್ನಲ್ಲೇ ಗೃಹ ಸಚಿವರು ಈ ಮಹತ್ವದ ಹೇಳಿಕೆ ನೀಡಿದ್ದಾರೆ. 

Advertisement

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಅನುಮತಿ ಪಡೆದ ಬಳಿಕ ಸುಮಾರು 100 ಮಂದಿ ಸಿಸಿಬಿ ಸಿಬ್ಬಂದಿಯನ್ನು ಈ ಜೈಲು ಶೋಧ ಕಾರ್ಯಚರಣೆಗೆ ನಿಯೋಜಿಸಲಾಗಿತ್ತು ಎಂದು ಖರ್ಗೆ ತಿಳಿಸಿದರು.

ಜೈಲು ಅಧಿಕಾರಿಗಳ ಅಮಾನತು ಕಠಿಣ ಎಚ್ಚರಿಕೆ:
ಎರಡು-ಮೂರು ವಾರಗಳ ಹಿಂದೆ ತಾವೇ ಸ್ವತಃ ಜೈಲಿಗೆ ಭೇಟಿ ನೀಡಿದ್ದಾಗ ಹಲವು ಆಡಳಿತಾತ್ಮಕ ಲೋಪದೋಷಗಳು ಕಂಡುಬಂದಿದ್ದವು. ಕೈದಿಗಳಿಗೆ ಅಕ್ರಮವಾಗಿ ಸಹಕರಿಸುತ್ತಿದ್ದ ಶಂಕಿತ ಅಧಿಕಾರಿಗಳನ್ನು ಈಗಾಗಲೇ ಅಮಾನತುಗೊಳಿಸಲು ಆದೇಶಿಸಲಾಗಿದೆ. "ನಮ್ಮ ಇಲಾಖೆಯಲ್ಲಿ ಹಳೆಯ ಶೈಲಿಯಲ್ಲಿ ಅಕ್ರಮ ಎಸಗುವ ಅಧಿಕಾರಿಗಳಿದ್ದಾರೆ
, ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಅಪರಾಧ ಸಾಬೀತಾದರೆ ಅಂತಹ ಅಧಿಕಾರಿಗಳನ್ನು ಸೇವೆಯಿಂದಲೇ ವಜಾಗೊಳಿಸಲಾಗುವುದು" ಎಂದು ಗೃಹ ಸಚಿವರು ಗುಡುಗಿದ್ದಾರೆ.

ರಾಜ್ಯಾದ್ಯಂತ ವಿಸ್ತರಿಸಲಿದೆ ಜೈಲುಗಳ ಶೋಧ:ಈ ದಾಳಿ ಕೇವಲ ಪರಪ್ಪನ ಅಗ್ರಹಾರಕ್ಕೆ ಸೀಮಿತವಾಗಿರುವುದಿಲ್ಲ. ಕಲಬುರಗಿ, ಬೆಳಗಾವಿ, ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಕಾರಾಗೃಹದಲ್ಲಾದರೂ ಯಾವುದೇ ಕ್ಷಣದಲ್ಲಿ ಇಂತಹ ಸರ್ಪ್ರೈಸ್ ರೈಡ್ ನಡೆಯಬಹುದು. ಜೈಲುಗಳಲ್ಲಿ ಯಾವುದೇ ಕಾರಣಕ್ಕೂ ಕೈದಿಗಳಿಗೆ 'ವಿಐಪಿ ಸೌಲಭ್ಯ' ನೀಡಲು ಬಿಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಪ್ರಜ್ವಲ್ ರೇವಣ್ಣ ಬಳಿ ಸಿಕ್ಕ ಮೊಬೈಲ್ ವಿಚಾರಣೆ:
ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್‌ನಲ್ಲಿ ಮೊಬೈಲ್ ಹಾಗೂ ಪೆನ್ ಡ್ರೈವ್ ಸಿಕ್ಕಿರುವ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು
, "ನಿಷೇಧಿತ ವಸ್ತುಗಳು ಜೈಲಿನೊಳಗೆ ಹೇಗೆ ಬಂದವು, ಯಾರ ನೆರವಿನಿಂದ ತರಲಾಯಿತು ಎಂಬುದರ ತನಿಖೆ ನಡೆಯುತ್ತಿದೆ. ತನಿಖೆಯ ಗೌಪ್ಯತೆ ಕಾಯ್ದುಕೊಳ್ಳಲು ತಕ್ಷಣವೇ ಎಲ್ಲ ವಿವರ ಬಹಿರಂಗಪಡಿಸಲಾಗುವುದಿಲ್ಲ. ಸೂಕ್ತ ಸಮಯದಲ್ಲಿ ಮಾಹಿತಿ ನೀಡಲಾಗುವುದು" ಎಂದರು. ಅಲ್ಲದೆ, ಜೈಲುಗಳ ಡಿಜಿಟಲ್ ಮೂಲಸೌಕರ್ಯ ಹಾಗೂ ಮೊಬೈಲ್ ಫೋನ್ ಜಾಮರ್‌ಗಳ ತಾಂತ್ರಿಕ ಪರಿಶೀಲನೆಗೂ ಆದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅಜ್ಜ-ಅಜ್ಜಿಯರ ದಿನಾಚರಣೆ: ಹಿರಿಯ ಜೀವಗಳೊಂದಿಗೆ ಮಗುವಾದ ಸಂಭ್ರಮ!ಆತ್ರೇಯ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳ ಅತಂತ್ರ ಭವಿಷ್ಯ: ಸರ್ಕಾರದ ತುರ್ತು ಮಧ್ಯಪ್ರವೇಶಕ್ಕೆ ಬಿ.ಎಸ್.ಚಂದ್ರಶೇಖರ್ ಆಗ್ರಹಸತೀಶ್ ಜಾರಕಿಹೊಳಿ ಮೇಲಿನ ಇ.ಡಿ ದಾಳಿ ರಾಜಕೀಯ ಪ್ರೇರಿತ: ಕಾಂಗ್ರೆಸ್ ಮುಖಂಡರ ತೀವ್ರ ಆಕ್ರೋಶತನ್ನ ಪತ್ನಿಯನ್ನು ಆಕೆಯ ಇಚ್ಛೆಯಂತೆ ಪ್ರಿಯಕರನೊಡನೆ ಮದುವೆ ಮಾಡಿಸಿದ ವಿಶಾಲ ಹೃದಯದ ಪತಿ!ಪತ್ರಕರ್ತ ಜಿ. ಮಹಂತೇಶ್‌ಗೆ ಜೀವ ಬೆದರಿಕೆ ಪ್ರಕರಣ: ವಿಪಕ್ಷಗಳ ತೀವ್ರ ಆಕ್ರೋಶದ ಬೆನ್ನಲ್ಲೇ ಎಫ್‌ಐಆರ್ ದಾಖಲಿಸಿದ ನಂದಿನಿ ಲೇಔಟ್ ಪೊಲೀಸರುಜೈಲಿನಲ್ಲೂ ಮುಂದುವರಿದ ಪ್ರಜ್ವಲ್ ರೇವಣ್ಣ ವಿಕೃತಿ: ಸೆಲ್‌ನಲ್ಲೇ ಪೆನ್ ಡ್ರೈವ್ ಬಳಸಿ ಅಶ್ಲೀಲ ವೀಡಿಯೋ ವೀಕ್ಷಣೆ!ಮಸೀದಿ ಮುಂದೆ ಗಣೇಶ ಮೆರವಣಿಗೆ ನಿಷೇಧ: ವಿವಾದಾತ್ಮಕ ಹೇಳಿಕೆಗೆ ತೀವ್ರ ಆಕ್ರೋಶಭಾರತ-ಚೀನಾ ಸಂಬಂಧಕ್ಕೆ ಹೊಸ ಚೈತನ್ಯ: ಭಾರತ ಭೇಟಿಗಾಗಿ ದೆಹಲಿಗೆ ಆಗಮಿಸಿದ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ಇಂಟರ್ನೆಟ್ ಇಲ್ಲದೆಯೂ ಯುಪಿಐ ಪಾವತಿ: ‘ಟ್ಯಾಪ್‌ಆ್ಯಂಡ್‌ಪೇ’ ಹಾಗೂ ‘ಮೈಯುಪಿಐ’ ಹೊಸ ಫೀಚರ್‌ಪರಿಚಯಿಸಿದ ಆರ್‌ಬಿಐನಮಗೆ ಹಾಕಿರುವ ಬೇಡಿ ಬಿಚ್ಚಿದರೆ ಕರ್ನಾಟಕವನ್ನೇ ಸ್ವಚ್ಛ ಮಾಡುತ್ತೇವೆ: ನ್ಯಾ. ಬಿ. ವೀರಪ್ಪ