LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹುಟ್ಟು ಹಬ್ಬಗಳನ್ನು ಸಮಾಜ ಮುಖಿ ಕಾರ್ಯಗಳೊಂದಿಗೆ ಆಚರಿಸಿ- ಮುನಿಕೃಷ್ಣಪ್ಪ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸದೆ ಅದನ್ನೇ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಸಾಮಾನ್ಯ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಆಚರಿಸುವುದರಿಂದ ಸಾಕಷ್ಟು ಅರ್ಥ ಪೂರ್ಣವಾಗಿರುತ್ತದೆ ಎಂದು ತಾಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ಮುನಿಕೃಷ್ಣಪ್ಪ ತಿಳಿಸಿದರು.

ತಮ್ಮ ಹುಟ್ಟುಹಬ್ಬದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹುಟ್ಟುಹಬ್ಬದ ಭಾಗವಾಗಿ ಹಣ್ಣುಹಂಪಲು ವಿತರಿಸಿ ಮಾತನಾಡಿದ ಅವರು, ವಿಜೃಂಭಣೆಯ ಆಚರಣೆಯ ಬದಲಾಗಿ, ಬಡವರಿಗೆ, ರೋಗಿಗಳಿಗೆ ನೆರವಾಗುವಂತಹ ಸಾಮಾಜಿಕ ಚಟುವಟಿಕೆಗಳನ್ನು ಒಳಗೊಂಡ ಹುಟ್ಟುಹಬ್ಬದ ಆಚರಣೆಯೂ ಎಲ್ಲರಿಗೂ ಮಾದರಿ. ಇದೇ ರೀತಿ ಹುಟ್ಟುಹಬ್ಬದ ಅಂಗವಾಗಿ ಹಣ್ಣುಹಂಪಲನ್ನು ವಿತರಿಸುವ ಕೆಲಸ ಮಾಡಲಾಗಿದೆ. ಜನರ ಆರ್ಶೀವಾದದಿಂದ ಸಾಮಾಜಿಕ ಕಾರ್ಯಗಳು ಸಾಕಾರಗೊಳ್ಳುತ್ತವೆ ಎಂದರು.

ಕೆಎಚ್‌ಎಂಗೆ ಡಿಸಿಎಂ ಸ್ಥಾನ ನೀಡಿ
ಕೆ.ಎಚ್ ಮುನಿಯಪ್ಪ ಅವರು ದೇಶ ಕಂಡ ಧೀಮಂತ ನಾಯಕರಲ್ಲಿ ಒಬ್ಬರು. ಅವರು ಯಾವುದೋ ಒಂದು ಜಾತಿಗೆ ಸೀಮಿತವಲ್ಲ. ಅವರಿಗೆ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಸಾಕಷ್ಟು ಅಭಿವೃದ್ದಿ ಕಾರ್ಯವಾಗಲಿದೆ. ಅನ್ನಭಾಗ್ಯ ಯೋಜನೆಯನ್ನು ಕೂಡ ಯಶಸ್ವಿಯಾಗಿ ನೀಡಿದ್ದಾರೆ. ಸತೀಶ್ ಜಾರಕಿಹೊಳಿ ಅವರು ತಮ್ಮ ಕೆಲಸದ ಮೂಲಕ ಮಾತನಾಡುವವರು. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅವರು ಪ್ರಭಾವ ಹೊಂದಿದ್ದಾರೆ. ಜನರ ನಾಡಿಮಿಡಿತವನ್ನು ಅರಿತುಕೊಂಡಿದ್ದಾರೆ. ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕೆ ಅನುಕೂಲವಾಗಲಿದೆ ಎಂದರು.

ತಾಲೂಕಿನ ಹಲವಾರು ಗಣ್ಯರು ಮುನಿಕೃಷ್ಣಪ್ಪನವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ್ ಕುಮಾರ್, ಕೆಪಿಸಿಸಿ ಸದಸ್ಯ ಎಸ್‌.ಆರ್ ಮುನಿರಾಜ್, ವಾಲ್ಮೀಕಿ ಸಂಘದ ತಾಲೂಕು ಉಪಾಧ್ಯಕ್ಷ ಕುಮಾರ್ ಸಿ, ಹೋಬಳಿ ಅಧ್ಯಕ್ಷ ಕೃಷ್ಣ, ಸಿನಿಮಾ ನಿರ್ಮಾಪಕ ಲಕ್ಷ್ಮಿಪತಿ,  ಮುಖಂಡರಾದ ರಾಮೇಗೌಡ, ನರಸಿಂಹಯ್ಯ, ಕೆಂಪಣ್ಣ, ಟಿಎಪಿಎಂಸಿ ನಿರ್ದೇಶಕ ರಾಮಾಂಜಿನಪ್ಪ, ಮುನಿಕೃಷ್ಣಪ್ಪ, ರಮೇಶ್ ಸೇರಿದಂತೆ ಅನೇಕರು ಹಾಜರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು